ಬ್ರಿಟನ್‌ನ F-35 ಫೈಟರ್‌ ಜೆಟ್‌ ಕೇರಳದಲ್ಲಿ ತುರ್ತು ಭೂಸ್ಪರ್ಶ – ಕಾರಣ ಏನು?

Public TV
1 Min Read
F35 Fighter Jet

ತಿರುನಂತಪುರಂ: ದಿಢೀರ್‌ ಇಂಧನ ಕೊರತೆಯಿಂದಾಗಿ ಬ್ರಿಟನ್ನಿನ ಅತ್ಯಾಧುನಿಕ ಎಫ್‌-35 ಯುದ್ಧ ವಿಮಾನ (F35 Fighter Jet) ಶನಿವಾರ ರಾತ್ರಿ ತಿರುವನಂತಪುರಂನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Thiruvananthapuram International Airport) ತುರ್ತು ಭೂಸ್ಪರ್ಶ ಮಾಡಿದೆ.

F35 Fighter Jet 2

ಶನಿವಾರ ರಾತ್ರಿ 9:30ರ ಸುಮಾರಿಗೆ ಇಂಧನ ಮಟ್ಟ ಕಡಿಮೆಯಾಗಿದ್ದರಿಂದ (Fuel Shortage) ತಿರುವನಂತಪುರ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶಕ್ಕೆ ಅನುಮತಿ ಕೋರಿತ್ತು. ವಿಮಾನ ನಿಲ್ದಾಣದ ಅಧಿಕಾರಿಗಳು ಅನುಮತಿ ನೀಡಿದ ಬಳಿಕ ಯಾವುದೇ ಅಡಚಣೆಯಿಲ್ಲದೇ ಸೇಫ್‌ ಲ್ಯಾಂಡಿಂಗ್‌ (Safe Landing) ಮಾಡಲಾಯಿತು. ಇದನ್ನೂ ಓದಿ: Explainer: ವಿಮಾನ ಸುಟ್ಟು ಬೂದಿಯಾದರೂ ‘ಬ್ಲ್ಯಾಕ್‌ಬಾಕ್ಸ್‌’ಗೆ ಏನಾಗಲ್ಲ – ಏನಿದು ಪೆಟ್ಟಿಗೆ? ಫ್ಲೈಟ್‌ ಆಕ್ಸಿಡೆಂಟ್‌ಗಳಲ್ಲಿ ಏಕೆ ಮುಖ್ಯ?

ಸದ್ಯ ಫೈಟರ್‌ ಜೆಟ್‌ (British fighter Jet) ಅನ್ನು ವಿಮಾನ ನಿಲ್ದಾಣದಲ್ಲೇ ನಿಲುಗಡೆ ಮಾಡಲಾಗಿದೆ. ಬ್ರಿಟನ್‌ ಅಧಿಕಾರಿಗಳು ಇಂಧನ ಮರು ಭರ್ತಿಗೆ ಕೇಂದ್ರ ಸರ್ಕಾರದ ಅನುಮತಿ ಕೋರಿದ್ದಾರೆ. ಕೇಂದ್ರ ಸರ್ಕಾರದ ಅನುಮತಿ ದೊರೆಯುತ್ತಿದ್ದಂತೆಯೇ, ಇಂಧನ ಮರು ಭರ್ತಿ ಪ್ರಕ್ರಿಯೆ ನಡೆಯಲಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದರೆ ಏನಾಗುತ್ತೆ?

F-35 5ನೇ ತಲೆಮಾರಿನ ಸ್ಟೆಲ್ತ್ ಫೈಟರ್ ಯುಕೆಯ HMS ಪ್ರಿನ್ಸ್ ಆಫ್ ವೇಲ್ಸ್ ಕ್ಯಾರಿಯರ್ ಸ್ಟ್ರೈಕ್ ಗ್ರೂಪ್‌ನ ಭಾಗವಾಗಿದೆ. ಪ್ರಸ್ತುತ ಇಂಡೋ ಫೆಸಿಫಿಕ್‌ ನಲ್ಲಿ ಕಾರ್ಯನಿರ್ವಹಿಸುತ್ತಿದೆ. ಇತ್ತೀಚೆಗೆ ಭಾರತದ ನೌಕಾಪಡೆಯೊಂಡಿಗೆ ಜಂಟಿಯಾಗಿ ತಾಲೀಮಿನಲ್ಲಿ ಪಾಲ್ಗೊಂಡಿತ್ತು. ಇದನ್ನೂ ಓದಿ: ಅಹಮದಾಬಾದ್ ವಿಮಾನ ದುರಂತ – ಅವಶೇಷಗಳಡಿ ಸೂಟ್‌ಕೇಸ್‌ನಲ್ಲಿದ್ದ ಹಣ ಪತ್ತೆ

Share This Article