– ಪಹಲ್ಗಾಮ್ ಭಯೋತ್ಪಾದಕ ದಾಳಿ ಖಂಡನೀಯ ಎಂದ ಬ್ಲಾಕ್‌ಮನ್
ಲಂಡನ್: ಜಮ್ಮು & ಕಾಶ್ಮೀರದ ಪಹಲ್ಗಾಮ್‌ನಲ್ಲಿ (Pahalgam Terror Attack) ನಡೆದ ಭಯೋತ್ಪಾದಕ ದಾಳಿಗೆ ಬ್ರಿಟಿಷ್ ಸಂಸದ ಬಾಬ್ ಬ್ಲಾಕ್‌ಮನ್ (Bob Blackman) ಖಂಡನೆ ವ್ಯಕ್ತಪಡಿಸಿದ್ದಾರೆ. ಪಾಕ್ ವಿರುದ್ಧ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿದ ಭಾರತಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.
ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (POK) ಕಾರ್ಯನಿರ್ವಹಿಸುತ್ತಿರುವ ಭಯೋತ್ಪಾದಕ ಶಿಬಿರಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಯುನೈಟೆಡ್ ಕಿಂಗ್‌ಡಂನ ಪ್ರಧಾನಿ ಕೈರ್ ಸ್ಟಾರ್ಮರ್ ಸರ್ಕಾರಕ್ಕೆ ಬ್ಲಾಕ್‌ಮನ್ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಮಣಿಪುರದ ಚಾಂದೆಲ್‌ನಲ್ಲಿ ಎನ್‌ಕೌಂಟರ್ – 10 ಉಗ್ರರನ್ನು ಹತ್ಯೆ ಮಾಡಿದ ಭಾರತೀಯ ಸೇನೆ
ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ನಂತರ ಭಾರತವು ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿತು. 9 ಭಯೋತ್ಪಾದಕ ನೆಲೆಗಳ ಮೇಲೆ ನಿಖರವಾದ ವಾಯುದಾಳಿ ನಡೆಸಿತು. ಶಾಂತಿ ಮಾತುಕತೆಗಳು ಮುಂದುವರೆದಂತೆ, ಪಾಕಿಸ್ತಾನ ಆಕ್ರಮಿತ ಕಾಶ್ಮೀರದಿಂದ ಭಯೋತ್ಪಾದಕ ನೆಲೆಗಳನ್ನು ನಾಶಪಡಿಸಲು ವಿದೇಶಾಂಗ ಕಾರ್ಯದರ್ಶಿ ಯಾವ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ನಾನು ಕೇಳಿದ್ದೇನೆಂದು ಹೌಸ್ ಆಫ್ ಕಾಮನ್ಸ್‌ನಲ್ಲಿ ಮಾತನಾಡಿರುವ ವೀಡಿಯೋವನ್ನು ಬ್ಲಾಕ್‌ಮನ್ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಲಷ್ಕರ್-ಎ-ತೊಯ್ಬಾದಂತಹ ಭಯೋತ್ಪಾದಕ ಸಂಘಟನೆಗಳಿಗೆ ಆಶ್ರಯ ನೀಡುವಲ್ಲಿ ಪಾಕಿಸ್ತಾನ ಭಾಗಿಯಾಗಿದೆ. ಇದರ ಶಾಖೆಗಳಲ್ಲಿ ಒಂದಾದ ದಿ ರೆಸಿಸ್ಟೆನ್ಸ್ ಫ್ರಂಟ್ ಈ ಹಿಂದೆ ದಾಳಿಯ ಹೊಣೆಯನ್ನು ಹೊತ್ತುಕೊಂಡಿತ್ತು ಎಂದು ಬ್ರಿಟಿಷ್ ಸಂಸದ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಪಾಕ್ ಕ್ಷಿಪಣಿಯನ್ನು ಧ್ವಂಸಗೊಳಿಸಿದ್ದ AI ಆಧಾರಿತ ಆಕಾಶ್‌ತೀರ್
ಇದಕ್ಕೆ ಪ್ರತಿಕ್ರಿಯಿಸಿರುವ ಯುಕೆ ವಿದೇಶಾಂಗ ಕಾರ್ಯದರ್ಶಿ ಡೇವಿಡ್ ಲ್ಯಾಮಿ, ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಭಯಾನಕ ಎಂದು ಕರೆದಿದ್ದಾರೆ. ಭಯೋತ್ಪಾದನೆಯನ್ನು ಎದುರಿಸಲು ಬ್ರಿಟಿಷ್ ಸರ್ಕಾರ ಭಾರತ ಮತ್ತು ಪಾಕಿಸ್ತಾನ ಜೊತೆ ಕೆಲಸ ಮಾಡುತ್ತದೆ ಎಂದು ಭರವಸೆ ನೀಡಿದ್ದಾರೆ.
ಪಹಲ್ಗಾಮ್‌ನಲ್ಲಿ 26 ಪ್ರವಾಸಿಗರನ್ನು ಉಗ್ರರು ಗುಂಡಿಕ್ಕಿ ಕೊಂದ ದಿನವೇ ಕೃತ್ಯವನ್ನು ಬ್ಲಾಕ್‌ಮನ್ ಖಂಡಿಸಿದ್ದರು. ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ನಿರ್ಮೂಲನೆಗೆ ಭಾರತ ಕೈಗೊಂಡ ಕ್ರಮವನ್ನು ಸಂಪೂರ್ಣವಾಗಿ ಬೆಂಬಲಿಸುವಂತೆ ತಮ್ಮ ಸರ್ಕಾರವನ್ನು ಒತ್ತಾಯಿಸಿದ್ದರು. ಇದನ್ನೂ ಓದಿ: ಚೀನಿ ಏರ್ ಡಿಫೆನ್ಸ್ ಜಾಮ್ ಮಾಡಿ 23 ನಿಮಿಷದಲ್ಲಿ ಮುಗಿಯಿತು ಕಾರ್ಯಾಚರಣೆ – ಭಾರತದ ದಾಳಿಯ ರೋಚಕ ಕಥೆ ಓದಿ