ಬೀದರ್: ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಅಣ್ಣ-ತಮ್ಮನ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ (Bidar) ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ (Crime) ಶಿವಪೂರ ಗ್ರಾಮದಲ್ಲಿ ನಡೆದಿದೆ.
20 ವರ್ಷದ ಸಚಿನ್ ಮೃತ ಯುವಕ. ಸಚಿನ್‌ನ ತಲೆಗೆ ಕಲ್ಲು ಎತ್ತಿಹಾಕಿ ಆತನ ಅಣ್ಣ ನಿತಿನ್ ಹತ್ಯೆ ಮಾಡಿದ್ದಾನೆ.
ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ನಿನ್ನೆಯಿಂದಲೇ ಅಣ್ಣ-ತಮ್ಮಂದಿರ ನಡುವೆ ಗಲಾಟೆ ನಡೆಯುತ್ತಿತ್ತು. ತಡರಾತ್ರಿ ಇಬ್ಬರೂ ಕುಡಿದ ಮತ್ತಿನಲ್ಲಿದ್ದಾಗ ಮತ್ತೆ ಜಗಳ ಶುರುವಾಗಿದೆ. ಈ ವೇಳೆ ಮಾತಿಗೆ ಮಾತು ಬೆಳೆದು ಜಗಳ ವಿಕೋಪಕ್ಕೆ ತಿರುಗಿದೆ. ನಿತಿನ್ ತಮ್ಮ ಸಚಿನ್ ತಲೆಯ ಮೇಲೆ ಕಲ್ಲು ಎತ್ತಿಹಾಕಿದ್ದಾನೆ. ಗಂಭೀರವಾಗಿ ಗಾಯಗೊಂಡ ಸಚಿನ್ ಮೃತಪಟ್ಟಿದ್ದಾನೆ.
ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಬಸವಕಲ್ಯಾಣ ನಗರ ಠಾಣೆ ಪಿಎಸ್ಐ ಚಂದ್ರಶೇಖರ್ ಹಾಗೂ ಸಿಪಿಐ ಅಲಿಸಾಬ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಪರೀಕ್ಷೆ ಮುಗಿದ ಐದೇ ದಿನಕ್ಕೆ ಕಾನ್ಸ್‌ಸ್ಟೇಬಲ್ ಪರೀಕ್ಷೆ ಫಲಿತಾಂಶ ಪ್ರಕಟ
ಘಟನೆ ಬಸವಕಲ್ಯಾಣ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣದ ಕುರಿತು ತನಿಖೆ ಮುಂದುವರಿಸಿದ್ದಾರೆ.ಇದನ್ನೂ ಓದಿ: ಗುತ್ತಿಗೆದಾರರ 38 ಸಾವಿರ ಕೋಟಿ ಬಿಲ್ ಬಾಕಿ!

