ಹಾಸನ: ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ (Bike) ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು (Beluru) ತಾಲ್ಲೂಕಿನ, ಮುತ್ತಗನ್ನೆ ಗ್ರಾಮದ ಬಳಿ ಇಂದು ಮುಂಜಾನೆ ನಡೆದಿದೆ.
ಬೇಲೂರು ತಾಲ್ಲೂಕಿನ ಹೊನ್ನೇನಹಳ್ಳಿ ಗ್ರಾಮದ ಲೋಕೇಶ್ (25), ಚಿಕ್ಕಮಗಳೂರು ಜಿಲ್ಲೆ, ರಾಮೇನಹಳ್ಳಿ ಗ್ರಾಮದ ಕಿರಣ್ (32) ಮೃತ ದುರ್ದೈವಿಗಳು. ಇದನ್ನೂ ಓದಿ: ʻಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿʼ – ಮತ್ತೆ ವಾಗ್ದಾನ ನೆನಪಿಸಿದ್ರಾ ಡಿಕೆಶಿ?

ಇಂದು ಲೋಕೇಶ್ ತಂಗಿ ಆರತಕ್ಷತೆ ಇತ್ತು. ಅದಕ್ಕಾಗಿ ಮಜ್ಜಿಗೆ, ಮೊಸರು ತರಲು KA-05 LE-4017 ಸಂಖ್ಯೆಯ ಹೀರೋ ಸ್ಪ್ಲೆಂಡರ್ ಬೈಕ್‌ನಲ್ಲಿ ಬೇಲೂರಿಗೆ ತೆರಳುತ್ತಿದ್ದರು. ಈ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ ಎಂದು ಶಂಕಿಸಲಾಗಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಭಾವ-ಭಾಮೈದರಾದ ಲೋಕೇಶ್ ಹಾಗೂ ಕಿರಣ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತದೇಹಗಳು ಇದ್ದ ಜಾಗದಿಂದ 10 ಅಡಿ ದೂರದಲ್ಲಿ ಬೈಕ್ ಬಿದ್ದಿದೆ. ಇದನ್ನೂ ಓದಿ: ಶತಕದ ಅಂಚಿನತ್ತ ಟೊಮೆಟೊ ಬೆಲೆ – ರೈತರಿಗೆ ಖುಷ್, ಗ್ರಾಹಕರ ಜೇಬಿಗೆ ಕತ್ತರಿ; ಎಷ್ಟಿದೆ ದರ?
ಬೆಳಗ್ಗೆ ಮೃತದೇಹಗಳು ಬಿದ್ದಿರುವುದನ್ನ ಕಂಡ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಪಿಎಸ್‌ಐ ಪಾಟೀಲ್ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಬೇಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

