ವಿಜಯಪುರ: ಭೀಮಾತೀರದಲ್ಲಿ ಮತ್ತೆ ರಕ್ತಪಾತ ನಡೆದಿದ್ದು, ಸ್ವಂತ ತಮ್ಮನೇ ಅಣ್ಣನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರನಿಂಬರಗಿ ಗ್ರಾಮದಲ್ಲಿ ನಡೆದಿದೆ.
ಹತ್ಯೆಗೊಳಗಾದವರು ಜಗ್ಗೇಶ್ ವಡ್ಡರ್. ರಾಹುಲ್ ವಡ್ಡರ್ ಹತ್ಯೆಗೈದ ಅರೋಪಿ. ಇದನ್ನೂ ಓದಿ: ಟಿಪ್ಪು, ಶಿವಾಜಿ ವೃತ್ತ ನಿರ್ಮಾಣ ವಿಚಾರಕ್ಕೆ ಕಿರಿಕ್ – ಯುವಕನ ಬರ್ಬರ ಹತ್ಯೆ
ಅಣ್ಣ ಜಗ್ಗೇಶ್ ದಿನವೂ ಕುಡಿಯಲು ಹಣ ಕೇಳುತ್ತಿದ್ದ. ತಮ್ಮನನ್ನು ಹಣಕ್ಕಾಗಿ ಪೀಡಿಸುತ್ತಿದ್ದ. ಇದರಿಂದ ರೋಸಿಹೋಗಿದ್ದ ತಮ್ಮ ರಾಹುಲ್, ಹರಿತವಾದ ಆಯುಧದಿಂದ ಚುಚ್ಚಿ ಹತ್ಯೆ ಮಾಡಿದ್ದಾನೆ. ಸ್ಥಳಕ್ಕೆ ಭೇಟಿ ನೀಡಿದ ಚಡಚಣ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಮನೆಗೆ ನೀರು ನುಗ್ಗಿ ನಷ್ಟವಾದರೆ ಅದಕ್ಕೆ ಕಾರ್ಪೊರೇಷನ್ ಹೊಣೆ – 9 ಲಕ್ಷ ಪರಿಹಾರಕ್ಕೆ ಹೈಕೋರ್ಟ್ ಸೂಚನೆ
ಇದೇ ಸೆಪ್ಟೆಂಬರ್ 1ರಂದು ಟಿಪ್ಪು ಸುಲ್ತಾನ್ ಹಾಗೂ ಶಿವಾಜಿ ಮಹಾರಾಜ್ ವೃತ್ತ ನಿರ್ಮಾಣ ವಿಚಾರದಲ್ಲಿ ಗಲಾಟೆ ನಡೆದು, ಈ ದ್ವೇಷದ ಹಿನ್ನೆಲೆಯಲ್ಲಿ ಪ್ರಶಾಂತ್ ಕ್ಷತ್ರಿ ಎಂಬ ಯುವಕನನ್ನು 8 ಮಂದಿ ಬರ್ಬರವಾಗಿ ಹತ್ಯೆ ಮಾಡಿದ್ದರು.