ಹಾವೇರಿ: ಬೊಲೆರೋ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕಿನಲ್ಲಿದ್ದ ಇಬ್ಬರು ಸಹೋದರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ರಟ್ಟೀಹಳ್ಳಿ ತಾಲೂಕಿನ ಮದಗಮಾಸೂರು ಗ್ರಾಮದ ಬಳಿ ನಡೆದಿದೆ.
ಮೃತರನ್ನ ಚೌಡಪ್ಪ ಸದೆಪ್ಪನವರ (23) ಮತ್ತು ನಾಗರಾಜ ಸದೆಪ್ಪನವರ (25) ಎಂದು ಗುರುತಿಸಲಾಗಿದೆ. ಇಬ್ಬರು ಸಹೋದರರು ರಟ್ಟೀಹಳ್ಳಿ ತಾಲೂಕಿನ ಬೈರನಪಾದ ಗ್ರಾಮದ ಬಳಿ ಇರುವ ತುಂಗಭದ್ರಾ ನದಿಯಲ್ಲಿ ಮೀನು ಹಿಡಿಯಲು ತೆರಳುತ್ತಿದ್ದರು. ಈ ವೇಳೆ ಬೊಲೆರೋ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದಿವೆ. ಪರಿಣಾಮ ಇಬ್ಬರು ಸಹೋದರರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಮೃತ ಸಹೋದರರು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಖವಾಸಪುರ ಗ್ರಾಮದವರು ಎನ್ನಲಾಗಿದೆ. ಘಟನೆ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಹಿರೇಕೆರೂರು ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಪ್ರಕರಣ ಹಿರೇಕೆರೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv