ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ (Delhi Liquor Scam) ಜಾರಿ ನಿರ್ದೇಶನಾಲಯ ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಭಾರತ್ ರಾಷ್ಟ್ರ ಸಮಿತಿ (BRS) ನಾಯಕಿ ಕೆ.ಕವಿತಾ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ಕಳೆದ ಶುಕ್ರವಾರ ಹೈದರಾಬಾದ್‌ನಲ್ಲಿರುವ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದ ಇಡಿ ಬಳಿಕ ಅವರನ್ನು ಬಂಧಿಸಿತ್ತು. ಕವಿತಾ (K Kavitha) ಬಂಧನದ ಬಳಿಕ ಅವರನ್ನು ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಮುಂದೆ ಹಾಜರುಪಡಿಸಿ ವಿಚಾರಣೆಗೆ ಹತ್ತು ದಿನಗಳ ಕಸ್ಟಡಿಗೆ ನೀಡುವಂತೆ ಮನವಿ ಮಾಡಿಲಾಗಿತ್ತು. ಇಡಿ ವಾದ ಪುರಷ್ಕರಿಸಿದ ನ್ಯಾಯಲಯ ಮಾರ್ಚ್ 23ರವರೆಗೆ ಕವಿತಾ ಅವರನ್ನು ವಿಚಾರಣೆಗಾಗಿ ಕಸ್ಟಡಿಗೆ ನೀಡಿತು. ಅಲ್ಲದೇ ಸಹೋದರ ಕೆಟಿಆರ್ ಮತ್ತು ಪತಿ ಅನಿಲ್ ಡಿ ಅವರನ್ನು ರಿಮಾಂಡ್ ಅವಧಿಯಲ್ಲಿ ಪ್ರತಿದಿನ ಸಂಜೆ 6-7ರ ನಡುವೆ ಅರ್ಧ ಗಂಟೆಗಳ ಕಾಲ ಭೇಟಿಯಾಗಲು ಅವಕಾಶ ನೀಡಿದೆ.
Advertisement
Advertisement
ಈ ಮಧ್ಯೆ ವಿಚಾರಣೆ ವೇಳೆ ಕೆ.ಕವಿತಾ ಅವರು ನ್ಯಾಯಾಲಯದಲ್ಲಿ ತನ್ನ ಬಂಧನವನ್ನು ಅಕ್ರಮ ಎಂದು ಹೇಳಿದ್ದಾರೆ. ಇದು ಕಪೋಲಕಲ್ಪಿತ ಪ್ರಕರಣ, ನನ್ನನ್ನು ಅಕ್ರಮವಾಗಿ ಬಂಧಿಸಲಾಗಿದೆ. ಇದರ ವಿರುದ್ಧ ಹೋರಾಡುತ್ತೇನೆ ಎಂದಿದ್ದಾರೆ. ಈ ಬೆನ್ನಲ್ಲೇ ಅವರು ಸುಪ್ರೀಂ ಕೋರ್ಟ್‌ಗೆ (Supreme Court) ಅರ್ಜಿ ಸಲ್ಲಿಸಿದ್ದು ಈ ಮಾಹಿತಿಯನ್ನು ಅವರ ವಕೀಲರ ತಂಡ ಖಚಿತಪಡಿಸಿದೆ. ಇದನ್ನೂ ಓದಿ: ಚುನಾವಣಾ ಬಾಂಡ್ ಪ್ರಕರಣ – ಅಸಮರ್ಪಕ ಮಾಹಿತಿ ನೀಡಿದ ಎಸ್‌ಬಿಐಗೆ ಮತ್ತೆ ಸುಪ್ರೀಂ ತರಾಟೆ
Advertisement
ಕೆ.ಕವಿತಾ ಅವರ ಮೇಲಿನ ಆರೋಪಗಳೇನು?
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ AAP ನಾಯಕ ವಿಜಯ್ ನಾಯರ್ ಅವರು ಕೆಲವು ಉದ್ಯಮಿಗಳು ಮತ್ತು ರಾಜಕಾರಣಿಗಳ ನಿಯಂತ್ರಣದಲ್ಲಿರುವ ‘ದಕ್ಷಿಣ ಗುಂಪಿನಿಂದ’ 100 ಕೋಟಿ ರೂಪಾಯಿಗಳನ್ನು ಕಿಕ್‌ಬ್ಯಾಕ್ ಪಡೆದಿದ್ದಾರೆ ಎಂಬ ಆರೋಪವಿದೆ. ಕವಿತಾ ಅವರು 100 ಕೋಟಿ ರೂಪಾಯಿ ಕಿಕ್‌ಬ್ಯಾಕ್ ಪಾವತಿಸಿದ ಮದ್ಯದ ಕಾರ್ಟೆಲ್ ‘ದಿ ಸೌತ್ ಗ್ರೂಪ್’ ನ ಭಾಗವಾಗಿದ್ದರು ಎಂದು ಇಡಿ ಆರೋಪಿಸಿದೆ. ಇದನ್ನೂ ಓದಿ: ನಾವು ಎಷ್ಟು ಅರ್ಜಿಗಳನ್ನು ಪರಿಗಣಿಸಬೇಕು? – EVM ಬೇಡವೆಂದು ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿ ವಜಾ
Advertisement
ಅಲ್ಲದೇ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಆಪ್ತ ಸಹಾಯಕ ಈ ಪ್ರಕರಣದಲ್ಲಿ ಆರೋಪಿಯಾಗಿರುವ ಅಮಿತ್ ಅರೋರಾ 10ಕ್ಕೂ ಹೆಚ್ಚು ಬಾರಿ ಕವಿತಾಗೆ ದೂರವಾಣಿ ಕರೆ ಮಾಡಿದ್ದು, ಒಟ್ಟು 35 ಜನರನ್ನು ಸಂಪರ್ಕಿಸಲು ಅವರು ಪ್ರಯತ್ನಿಸಿದ್ದಾರೆ ಎಂದು ಇಡಿ ಹೇಳಿತ್ತು. ಕವಿತಾ, ಅಮಿತ್ ಅರೋರಾ ಅವರೊಂದಿಗೆ ಸಂವಹನ ನಡೆಸಲು ಫ್ಯಾನ್ಸಿ ನಂಬರ್‌ಗಳನ್ನು ಬಳಸಿದ್ದಾರೆ. ಪೈಕಿ ಎರಡು ಸಿಮ್‌ಗಳನ್ನು ಹೆಚ್ಚು ಬಳಸಿದ್ದು, ಈ ಬಗ್ಗೆ ಸಂಭಾಷಣೆ ನಡೆಸಲು ಅವರು ಹತ್ತಕ್ಕೂ ಹೆಚ್ಚು ಬಾರಿ IMEI ಅನ್ನು ಬದಲಾಯಿಸಿದ್ದಾರೆ. ತನಿಖೆ ವೇಳೆ ಫೋನ್‌ಗಳನ್ನು ಪರಿಶೀಲಿಸಿದಾಗ ಫೋನ್‌ಗಳಲ್ಲಿ ಡೇಟಾವನ್ನು ಅಳಿಸಿ ಹಾಕಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿತ್ತು. ಇಡಿ ಪ್ರಕರಣದ ಚಾರ್ಜ್‌ಶೀಟ್‌ನಲ್ಲಿ ಕೆ ಕವಿತಾ ಅವರ ಹೆಸರಿಸಿದೆ. ಅವರು ಮದ್ಯದ ಕಂಪನಿಯಾದ ಇಂಡೋಸ್ಪಿರಿಟ್ಸ್‌ನಲ್ಲಿ ಶೇ.65 ರಷ್ಟು ಪಾಲನ್ನು ಹೊಂದಿದ್ದಾರೆ ಎಂದು ಸಹ ಆರೋಪಿಸಲಾಗಿದೆ. ಇದೇ ಪ್ರಕರಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನಿರಿಕ್ಷಣಾ ಜಾಮೀನು ಪಡೆದುಕೊಂಡಿದ್ದಾರೆ.
ಏನಿದು ಮದ್ಯ ಹಗರಣ?
ಪ್ರಕರಣದ ಆರೋಪಿಯಾಗಿರುವ ಮನೀಶ್ ಸಿಸೋಡಿಯಾ ಹಾಗೂ ಇತರರು 2021-22ರ ಅಬಕಾರಿ ನೀತಿಗೆ ಸಂಬಂಧಿಸಿದಂತೆ ಪ್ರಾಧಿಕಾರದ ಅನುಮೋದನೆಯಿಲ್ಲದೇ ಪರವಾನಗಿದಾರರಿಗೆ ಅನುಕೂಲವಾಗುವಂತಹ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ನೀತಿಯಿಂದ ಲಾಭ ಪಡೆದ ಮದ್ಯ ವ್ಯಾಪಾರಿಗಳು ಸಿಸೋಡಿಯಾ ಆಪ್ತ, ಸಹಚರರಿಗೆ ಕೋಟ್ಯಂತರ ರೂ. ಪಾವತಿ ಮಾಡಿದ್ದಾರೆ ಎಂಬ ಆರೋಪ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಶುಕ್ರವಾರ ಕೆ.ಕವಿತಾ ಅವರ ನಿವಾಸ ಮೇಲೆ ಇಡಿ ದಾಳಿ ನಡೆಸಿ, ಬಂಧಿಸಿದೆ. ಇದನ್ನೂ ಓದಿ: ದೆಹಲಿ ಮದ್ಯ ನೀತಿ ಹಗರಣ – ತೆಲಂಗಾಣ ಮಾಜಿ ಸಿಎಂ ಕೆಸಿಆರ್ ಪುತ್ರಿ ಕವಿತಾ ಅರೆಸ್ಟ್