– ಕೊಲೆ ಬಳಿಕ ಸಿಸಿಟಿವಿ ಡಿವಿಆರ್ ಹೊತ್ತೊಯ್ದ ದುಷ್ಕರ್ಮಿಗಳು
ರಾಮನಗರ: ಮಾರಕಾಸ್ತ್ರದಿಂದ ಕೊಚ್ಚಿ ಯುವಕನ (Youth) ಬರ್ಬರ ಹತ್ಯೆ ಮಾಡಿರುವ ಘಟನೆ ಬಿಡದಿ (Bidadi) ಬಳಿಯ ಕದಂಬ ಹೋಟೆಲ್‌ನಲ್ಲಿ (Kadamba Hotel) ತಡರಾತ್ರಿ ನಡೆದಿದೆ.
ಚನ್ನಪಟ್ಟಣ ತಾಲೂಕಿನ ಕೊಂಡಾಪುರ ಗ್ರಾಮದ ನಿವಾಸಿ ನಿಶಾಂತ್ (25) ಕೊಲೆಯಾದ ಯುವಕ. ನಿಶಾಂತ್ ಕಳೆದ ಎರಡೂವರೆ ತಿಂಗಳಿನಿಂದ ಕದಂಬ ಹೋಟೆಲ್‌ನಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದು, ಹಳೆ ದ್ವೇಷಕ್ಕೆ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಎನ್‌ಡಿಎ 190+ ಕ್ಷೇತ್ರಗಳಲ್ಲಿ ಮುನ್ನಡೆ, ಡಬಲ್ ಡಿಜಿಟ್ ದಾಟಲು ಪರದಾಡುತ್ತಿದೆ ಕಾಂಗ್ರೆಸ್
ತಡರಾತ್ರಿ ಹೋಟೆಲ್ ನಲ್ಲಿ ಮಲಗಿದ್ದ ನಿಶಾಂತ್ ನ ಕಿವಿ ಭಾಗಕ್ಕೆ ಚಾಕುವಿನಿಂದ ಇರಿದು ಕೊಲೆ ಮಾಡಿರೋ ದುಷ್ಕರ್ಮಿಗಳು ಹೋಟೆಲ್‌ನ ಸಿಸಿಟಿವಿ ಕ್ಯಾಮೆರಾದ ಡಿವಿಆರ್ ಕೂಡಾ ತೆಗೆದುಕೊಂಡು ಹೋಗಿದ್ದಾರೆ. ಸ್ಥಳಕ್ಕೆ ಬಿಡದಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬೆರಳಚ್ಚು ತಜ್ಞರು ಹಾಗೂ ಶ್ವಾನದಳದಿಂದಲೂ ಪರಿಶೀಲನೆ ಮಾಡಲಾಗಿದೆ. ಇದನ್ನೂ ಓದಿ: Tumakuru | ಚಾಕುವಿನಿಂದ ಚುಚ್ಚಿ ಯುವಕನ ಭೀಕರ ಕೊಲೆ
ಇನ್ನೂ ನಿಶಾಂತ್ ಮೇಲೆ ಈ ಹಿಂದೆ ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ಕೂಡಾ ದಾಖಲಾಗಿತ್ತು ಎಂದು ತಿಳಿದುಬಂದಿದೆ. ಪ್ರಕರಣದ ತನಿಖೆ ಕೈಗೊಂಡಿರುವ ಬಿಡದಿ ಪೊಲೀಸರು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ. ಇದನ್ನೂ ಓದಿ: ಬಿಹಾರದಲ್ಲಾಯ್ತು, ಮುಂದೆ ಬಂಗಾಳದಲ್ಲಿ ಗೆಲ್ತೀವಿ – ಕೇಂದ್ರ ಸಚಿವ ಗಿರಿರಾಜ್ ಸಿಂಗ್

