ವಿಜಯಪುರ: ಭೀಮಾ ತೀರದಲ್ಲಿ (Bheema Theera) ಮತ್ತೊಮ್ಮೆ ನೆತ್ತರು ಹರಿದಿದೆ. ನಿವೃತ್ತ ಶಿಕ್ಷಕನ (Retired Teacher) ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ವಿಜಯಪುರ (Vijayapura) ಜಿಲ್ಲೆಯ ಇಂಡಿ (Indi) ತಾಲೂಕಿನ ಚೌಡಿಹಾಳ ರಸ್ತೆಯ ಪೂಜಾರಿ ವಸ್ತಿ ಬಳಿ ನಡೆದಿದೆ.

ಸಿದ್ದಪ್ಪ ಅಂಜುಟಗಿ (63) ಹತ್ಯೆಯಾದ ನಿವೃತ್ತ ಶಿಕ್ಷಕ. ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹತ್ಯೆ ಬಳಿಕ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಘಟನಾ ಸ್ಥಳಕ್ಕೆ ಇಂಡಿ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಆಯತಪ್ಪಿ ಕೊಡಚಾದ್ರಿ ಬೆಟ್ಟದಿಂದ ಬಿದ್ದ ಪ್ರವಾಸಿಗ – ಜೀಪ್ ಚಾಲಕರಿಂದ ಉಳಿಯಿತು ಜೀವ
ಘಟನಾ ಸ್ಥಳದಲ್ಲಿ ಸಿಕ್ಕ ಮಾಹಿತಿ ಆಧರಿಸಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ನಿವೃತ್ತ ಶಿಕ್ಷಕನ ಹತ್ಯೆಯಿಂದ ಭೀಮಾತೀರದ ಜನ ಬೆಚ್ಚಿಬಿದ್ದಿದ್ದಾರೆ. ಪೊಲೀಸರ ತನಿಖೆಯಿಂದ ಸತ್ಯಾಸತ್ಯತೆ ತಿಳಿದು ಬರಲಿದೆ. ಇಂಡಿ ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ತ.ನಾಡಿಗೆ ಕಾವೇರಿ ನೀರು ಹರಿಸುವ ವಿಚಾರ; ನಾಳೆ ಸುಪ್ರೀಂನಲ್ಲಿ ಅರ್ಜಿ ವಿಚಾರಣೆ
