ಬೆಂಗಳೂರು: ಸುಪ್ರೀಂ ತೀರ್ಪಿನ ಬಳಿಕ ಇಂದು ಅನರ್ಹ ಶಾಸಕರು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದು, ನೀವು ನಮಗಾಗಿ ಎಲ್ಲಾ ರೀತಿಯ ತ್ಯಾಗ ಮಾಡಿದ್ದೀರಿ, ನಿಮಗೆ ಕೊಟ್ಟ ಮಾತನ್ನು ನಾವು ಅಕ್ಷರಶಃ ಪಾಲಿಸುತ್ತೇವೆ. ಯಾವುದೇ ನಂಬಿಕೆದ್ರೋಹ, ವಿಶ್ವಾಸದ್ರೋಹ ಮಾಡಲ್ಲ ಎಂದು ಸಿಎಂ ಯಡಿಯೂರಪ್ಪ ಭರವಸೆ ಕೊಟ್ಟಿದ್ದಾರೆ.
ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಅನರ್ಹ ಶಾಸಕರು ಪಕ್ಷಕ್ಕೆ ಸೇರ್ಪಡೆಗೊಂಡ ಬಳಿಕ ಮಾತನಾಡಿದ ಅವರು, ಇದೊಂದು ಐಹಿಹಾಸಿಕ ದಿನ. ಬಹುಶಃ ವಿಧಾನಸೌಧದ ಮೂರನೇ ಮಹಡಿಯಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲು ಈ 17 ಮಂದಿ ಜೆಡಿಎಸ್, ಕಾಂಗ್ರೆಸ್ ಶಾಸಕರು ಕಾರಣ. ಅವರು ತಮ್ಮ ಸಚಿವ ಸ್ಥಾನ, ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಮಗಾಗಿ ಎಲ್ಲಾ ರೀತಿಯ ತ್ಯಾಗವನ್ನ ಮಾಡಿದ್ದಾರೆ. ಸುಪ್ರೀಂ ಕೋರ್ಟ್ ಕೊಟ್ಟ ತೀರ್ಪಿನ ನಂತರ ಅವರೆಲ್ಲರೂ ನಮ್ಮ ರಾಜ್ಯಾಧ್ಯಕ್ಷರಾದ ನಳೀನ್ ಕುಮಾರ್ ಕಟೀಲ್ ಅವರ ಅಧ್ಯಕ್ಷತೆಯಲ್ಲಿ ಸದಸ್ಯತ್ವವನ್ನು ಪಡೆದು ಬಿಜೆಪಿ ಸೇರಿದ್ದಾರೆ ಎಂದರು.
Advertisement
In an effort to serve the People more effectively,16 former MLAs are beginning a new journey with BJP from today.
Under the leadership of President @nalinkateel and CM @BSYBJP, we wholeheartedly welcome them to Our Party, and wish them the very best. pic.twitter.com/80qAYhqrIN
— BJP Karnataka (@BJP4Karnataka) November 14, 2019
Advertisement
ರಾಜೀನಾಮೆ ಕೊಟ್ಟು ನಮ್ಮ ಜೊತೆ ಬಂದಂತಹ ವೇದಿಕೆ ಮೇಲಿರುವ ಶಾಸಕರಿಗೆ, ಬೆಂಬಲಿಗರಿಗೆ ಸಿಎಂ ಆಗಿ ನಳಿನ್ ಕುಮಾರ್ ಅವರ ಪರವಾಗಿ ಭರವಸೆ ಕೊಡುತ್ತಿದ್ದೇನೆ. ನಾವೇನು ನಿಮಗೆ ಭರವಸೆ ಮಾತನ್ನು ಕೊಟ್ಟಿದ್ದೀವೋ ಅದನ್ನು ನಾವು ಅಕ್ಷರಶಃ ಪಾಲಿಸುತ್ತೇವೆ. ನಿಮಗೆ ನಂಬಿಕೆದ್ರೋಹ ಅಥವಾ ವಿಶ್ವಾಸದ್ರೋಹ ಮಾಡುವುದಿಲ್ಲ ಎಂದು ಹೇಳಿದರು.
Advertisement
Advertisement
ಬಹುಶಃ ದೇಶದ ರಾಜಕಾರಣದಲ್ಲಿ ಈ ರೀತಿ 17 ಮಂದಿ ಶಾಸಕರು, ಮಂತ್ರಿಗಳು ರಾಜೀನಾಮೆ ಕೊಟ್ಟು ಹೊರಬಂದ ಉದಾಹರಣೆ ಇಲ್ಲ. ಇವರು ನಮಗಾಗಿ ಎಲ್ಲಾ ರೀತಿಯ ತ್ಯಾಗ ಮಾಡಿದ್ದಾರೆ. ಹೀಗಾಗಿ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರಲ್ಲಿ ಕೈ ಜೊಡಿಸಿ ಪ್ರಾರ್ಥಿಸುತ್ತೇನೆ, ಇವರ ಗೆಲುವು ನಮ್ಮ ಜವಾಬ್ದಾರಿ. ಉಪಚುನಾವಣೆಯಲ್ಲಿ ಒಟ್ಟಿಗೆ ಕೆಲಸ ಮಾಡೋಣ ಎಂದು ಕರೆ ನೀಡಿದರು.
ಇಂದು ರಮೇಶ್ ಜಾರಕಿಹೊಳಿ, ಎಚ್. ವಿಶ್ವನಾಥ್, ಮಹೇಶ್ ಕುಮಟಳ್ಳಿ, ಶ್ರೀಮಂತ ಪಾಟೀಲ್, ಪ್ರತಾಪ್ ಗೌಡ ಪಾಟೀಲ್, ಶಿವರಾಂ ಹೆಬ್ಬಾರ್, ಬಿಸಿ ಪಾಟೀಲ್, ಆನಂದ್ ಸಿಂಗ್, ಡಾ.ಸುಧಾಕರ್, ಬೈರತಿ ಬಸವರಾಜ್, ಎಸ್‍ಟಿ ಸೋಮಶೇಖರ್, ಮುನಿರತ್ನ ಅವರು ಬಿಎಸ್‍ವೈ, ನಳಿನ್ ಕುಮಾರ್ ಕಟೀಲ್ ಹಾಗೂ ಬಿಜೆಪಿ ನಾಯಕರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಿದ್ದಾರೆ.