– ರಾಜ್ಯಪಾಲರಿಗೆ ಸಂಖ್ಯಾಬಲ ತೋರಿಸಿದ ಬಿಜೆಪಿ
– ಸಿಎಂ ರಾಜೀನಾಮೆ ನೀಡಲಿ: ಬಿಎಸ್‍ವೈ
ಬೆಂಗಳೂರು: ಸ್ಪೀಕರ್ ರಮೇಶ್ ಕುಮಾರ್ ವಿಳಂಬ ನೀತಿ ಖಂಡಿಸಿ ಪ್ರತಿಭಟನೆ ನಡೆಸಿದ ಬಿಜೆಪಿ ನಾಯಕರು ನೇರವಾಗಿ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ಸಂಖ್ಯಾಬಲವನ್ನು ತೋರಿಸಿದೆ. ಈ ವೇಳೆ ಇಂದು ಸಂಜೆಯೊಳಗಾಗಿ ಇನ್ನಿಬ್ಬರು ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂಬ ಸುಳಿವನ್ನು ನೀಡಿದ್ದಾರೆ.
ರಾಜ್ಯಪಾಲರ ಭೇಟಿ ಬಳಿಕ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಸಮ್ಮಿಶ್ರ ಸರ್ಕಾರದ 13 ಶಾಸಕರು ರಾಜೀನಾಮೆ ನೀಡಿದ್ದಾರೆ. ಮೈತ್ರಿಗೆ ಬೆಂಬಲ ನೀಡಿದ್ದ ಪಕ್ಷೇತರ ಶಾಸಕರಿಬ್ಬರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷೇತರ ಶಾಸಕರ ಬೆಂಬಲದೊಂದಿಗೆ ನಾವು ಬಹುಮತ ಹೊಂದಿದ್ದೇವೆ ಎಂಬುದನ್ನು ರಾಜ್ಯಪಾಲರ ಗಮನಕ್ಕೆ ತಂದಿದ್ದೇವೆ ಎಂದರು. ಇದನ್ನೂ ಓದಿ: ಪೊಲೀಸ್ ವಶಕ್ಕೆ ಡಿಕೆ ಶಿವಕುಮಾರ್
ಸರ್ಕಾರ ಅಲ್ಪಮತಕ್ಕೆ ಕುಸಿದಿರುವ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ರಾಜೀನಾಮೆ ನೀಡಬೇಕೆಂದು ಆಘ್ರಹಿಸಿ ವಿಧಾನಸೌಧದ ಮಹಾತ್ಮ ಗಾಂಧೀಜಿ ಪ್ರತಿಮೆಯ ಬಳಿ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ನಮ್ಮ ಶಾಸಕರು ಉಪಸ್ಥಿತರಿದ್ದರು. pic.twitter.com/ezcFVzyb6g
— B.S.Yediyurappa (@BSYBJP) July 10, 2019
ಮೈತ್ರಿ ಸರ್ಕಾರದ ಬಹುಮತ 103ಕ್ಕೆ ಕುಸಿದಿದ್ದು, ಬಿಜೆಪಿ 107 ಶಾಸಕರನ್ನು ಹೊಂದಿದೆ. ಸರ್ಕಾರವೇ ಅಲ್ಪಮತಕ್ಕೆ ಕುಸಿದ ಕಾರಣ ಅಧಿವೇಶನ ಹೇಗೆ ನಡೆಸುತ್ತಾರೆ. ಸ್ಪೀಕರ್ ವಿಳಂಬ ನೀತಿಯನ್ನು ಅನುಸರಿಸಬಾರದು. ಸಿಎಂ ಸ್ಥಾನದಲ್ಲಿರಲು ಕುಮಾರಸ್ವಾಮಿ ಅವರಿಗೆ ಯಾವುದೇ ನೈತಿಕತೆ ಇಲ್ಲ. ಹಾಗಾಗಿ ಕೂಡಲೇ ಮುಖ್ಯಮಂತ್ರಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಯಡಿಯೂರಪ್ಪ ಆಗ್ರಹಿಸಿದರು. ಇದನ್ನೂ ಓದಿ: ವಿಮಾನ ಹತ್ತಿದ ಜೆಡಿಎಸ್ ಶಾಸಕ ಶ್ರೀನಿವಾಸಗೌಡ
ದೇಶದಲ್ಲಿ ಪ್ರಜಾಪ್ರಭುತ್ವ, ರಾಜಕೀಯ ಮೌಲ್ಯ, ತತ್ವ ಸಿದ್ಧಾಂತಗಳು ಉಳಿಯಬೇಕು.
ಸರ್ವಾಧಿಕಾರಕ್ಕೆ ಅಧಿಕಾರದ ಅವಕಾಶ ನೀಡಬಾರದು.
ಹಾಗಾಗಿ @narendramodi, @AmitShah ಅವರು ಏನೆ ಪಿತೂರಿ ಮಾಡಿದರೂ ರಾಜ್ಯ ಮೈತ್ರಿ ಸರ್ಕಾರ ಬೀಳಲು ಬಿಡುವುದಿಲ್ಲ.
ಪ್ರಜಾಸತ್ತಾತ್ಮಕವಾಗಿ ರಚನೆಯಾದ ಸಮ್ಮಿಶ್ರ ಸರ್ಕಾರ ಮುಂದುವರೆಯುವುದು ನಿಶ್ಚಿತ. @dineshgrao pic.twitter.com/rreVuhwRis
— Karnataka Congress (@INCKarnataka) July 10, 2019
ಕಾಂಗ್ರೆಸ್ ಮತ್ತು ಜೆಡಿಎಸ್ ರಾಜ್ಯದಲ್ಲಿ ರಾಜಕೀಯ ಬಿಕ್ಕಟ್ಟನ್ನು ಸೃಷ್ಟಿಸಿದೆ. ಮೈತ್ರಿ ಸರ್ಕಾರದ ಆಡಳಿತ ಶೈಲಿಯನ್ನು ವಿರೋಧಿಸಿ ಕೆಲ ಶಾಸಕರು ರಾಜೀನಾಮೆ ನೀಡಿದ್ದಕ್ಕೆ ಬಿಜೆಪಿ ಕಾರಣವಲ್ಲ. ಮಾತನಾಡಲ್ಲ ಅಂತ ಹೇಳಿರುವ ಗೆಳೆಯರನ್ನು ಭೇಟಿ ಮಾಡುತ್ತೇನೆ ಎಂದು ಹೇಳಿ ಡಿ.ಕೆ.ಶಿವಕುಮಾರ್ ಮುಂಬೈ ಹೋಟೆಲ್ ಮುಂದೆ ಧರಣಿಗೆ ಕುಳಿತಿದ್ದಕ್ಕೆ ಬಿಜೆಪಿಯನ್ನು ದೂರಬಾರದು. ನಾವು ಯಾವುದೇ ಕುದುರೆ ವ್ಯಾಪಾರಕ್ಕೆ ಮುಂದಾಗಿಲ್ಲ ಎಂಬುದನ್ನು ಬಿಜೆಪಿ ರಾಜ್ಯಾಧ್ಯಕ್ಷರು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಮತ್ತಷ್ಟು ರಾಜೀನಾಮೆ – ಗುಲಾಂನಬಿ ಆಜಾದ್ ಕರೆ ಸ್ವೀಕರಿಸದ ಇಬ್ಬರು ಶಾಸಕರು