ಕಲಬುರಗಿ: ಮಲ್ಲಿಕಾರ್ಜುನ ಖರ್ಗೆ ಯಾವಾಗಲೂ ಮುಖ್ಯಮಂತ್ರಿಯಾಗಬೇಕಿತ್ತು ಎಂಬ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಪ್ರತಿಕ್ರಿಯಿಸಿ ಕುಮಾರಸ್ವಾಮಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿ ಮಾಡಲಿ ಎಂದು ಸವಾಲು ಹಾಕಿದ್ದಾರೆ.
ಕಲಬುರಗಿಯಲ್ಲಿ ಮಾತನಾಡಿದ ಯಡಿಯೂರಪ್ಪ, ಕುಮಾರಸ್ವಾಮಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಾಳೆಯೇ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿ ಮಾಡಲಿ. ಈ ಮೂಲಕ ಕುಮಾರಸ್ವಾಮಿ ತಮ್ಮ ಕನಸು ನನಸಾಗಿಸಿಕೊಳ್ಳಲಿ ಎಂದು ಟಾಂಗ್ ನೀಡಿದರು.
Advertisement
Advertisement
ಇದುವರೆಗೂ ಚಿಂಚೋಳಿಯ ಕಡೆಗೆ ತಿರುಗಿಯೂ ನೋಡದ ಸಿಎಂ ಕುಮಾರಸ್ವಾಮಿ ಉಪಚುನಾವಣೆ ಇದೆ ಅಂತ ಏನೇನೋ ಭರವಸೆಕೊಟ್ಟು ಹೋಗುತ್ತಾರೆ. ಚಿಂಚೋಳಿ ದತ್ತು ಪಡೆಯುವುದಾದರೆ ಇಷ್ಟು ದಿನ ಸಿಎಂ ಏನು ಮಾಡುತ್ತಿದ್ದರು ಎಂದು ಚಿಂಚೋಳಿ ದತ್ತು ಪಡೆಯುತ್ತೇನೆ ಎನ್ನುವ ಸಿಎಂ ಕುಮಾರಸ್ವಾಮಿ ಹೇಳಿಕೆಯನ್ನು ಯಡಿಯೂರಪ್ಪ ಪ್ರಶ್ನಿಸಿದರು.