ಬೆಂಗಳೂರು: ಆಪರೇಷನ್ ಕಮಲ ಮಾಡಿದ್ದಾರೆ ಎನ್ನಲಾದ ಆಡಿಯೋ ಪ್ರಕರಣದ ಹಿನ್ನೆಲೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಅವರ ಮೇಲೆ ರಾಯಚೂರಿನಲ್ಲಿ ಎಫ್‍ಐಆರ್ ದಾಖಲಾಗಿದೆ. ಇದೀಗ ಈ ಎಫ್‍ಐಆರ್ ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲು ಬಿಎಸ್‍ವೈ ನಿರ್ಧರಿಸಿದ್ದಾರೆ.
ಬಿ.ಎಸ್.ಯಡಿಯೂರಪ್ಪ ವಿರುದ್ಧ ದಾಖಲಾದ ಎಫ್‍ಐಆರ್ ರದ್ದು ಕೋರಿ ಅರ್ಜಿ ಸಲ್ಲಿಕೆಗೆ ಸಿದ್ಧತೆ ನಡೆಯುತ್ತಿದ್ದು, ಇಂದು ಮಧ್ಯಾಹ್ನ ಬಿಎಸ್‍ವೈ ಪರ ವಕೀಲರು ಎಫ್‍ಐಆರ್ ರದ್ದುಗೊಳಿಸುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಿದ್ದಾರೆ. ಈ ಪ್ರಕರಣ ಸಂಬಂಧ ಸೋಮವಾರದಂದು ಹೈಕೋರ್ಟ್ ಮುಂದೆ ಬಿಎಸ್‍ವೈ ಅವರನ್ನು ವಿಚಾರಣೆ ನಡೆಸುವ ಸಾಧ್ಯತೆಯಿದೆ. ಇದನ್ನೂ ಓದಿ: ಆಪರೇಷನ್ ಆಡಿಯೋ ಪ್ರಕರಣ – ಬಿಎಸ್‍ವೈ ಎ1 ಆರೋಪಿ
Advertisement
Advertisement
ಕರ್ನಾಟಕ ಹೈಕೋರ್ಟ್ ಕಲಬುರಗಿ ಪೀಠಕ್ಕೆ ಅರ್ಜಿ ಸಲ್ಲಿಸಲು ಬಿಎಸ್‍ವೈ ಪರ ವಕೀಲರ ಸಿದ್ಧತೆ ಮಾಡಿಕೊಂಡಿದ್ದು, ಆಡಿಯೋ ಪ್ರಕರಣ ಹಿನ್ನೆಲೆ ಯಡಿಯೂರಪ್ಪ ಸೇರಿ ನಾಲ್ವರ ವಿರುದ್ಧ ಎಫ್‍ಐಆರ್ ದಾಖಲಾಗಿತ್ತು. ಜೆಡಿಎಸ್ ಶಾಸಕ ನಾಗನಗೌಡ ಕಂದಕೂರು ಪುತ್ರ ಶರಣಗೌಡ ನೀಡಿದ್ದ ದೂರಿನ ಮೇರೆಗೆ ರಾಯಚೂರು ಜಿಲ್ಲೆಯ ದೇವದುರ್ಗ ಠಾಣೆಯಲ್ಲಿ ಬಿಎಸ್‍ವೈ ವಿರುದ್ಧ ಎಫ್‍ಐಆರ್ ದಾಖಲಾಗಿತ್ತು.
Advertisement
Advertisement
ಕಲಬುರಗಿ ಹೈಕೋರ್ಟ್ ಪೀಠದ ವ್ಯಾಪ್ತಿಗೆ ದೇವದುರ್ಗ ಪೊಲೀಸ್ ಠಾಣೆ ಬರುತ್ತದೆ. ಆದ್ದರಿಂದ ಗುರುವಾರ ಪ್ರಕರಣವೊಂದರ ವಾದ ಮಂಡನೆಗೆ ಕಲಬುರಗಿ ಹೈಕೋರ್ಟ್ ಪೀಠಕ್ಕೆ ಆಗಮಿಸಿದ್ದ ಹಿರಿಯ ನ್ಯಾಯವಾದಿ ಹಾಗೂ ಬಿಎಸ್‍ವೈ ಪರ ವಕೀಲರಾದ ಸಿ.ವಿ.ನಾಗೇಶ್, ಎಫ್‍ಐಆರ್ ರದ್ದು ಕೋರಿ ಅರ್ಜಿ ಸಲ್ಲಿಕೆಗೆ ಪೂರಕ ತಯಾರಿ ನಡೆಸಿದ್ದಾರೆಂಬ ಮಾಹಿತಿ ಲಭ್ಯವಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv