ದುಡ್ಡು ಕೊಟ್ಟು ಖರೀದಿ, ದೇವರು ಅವರಿಗೆ ಒಳ್ಳೆದು ಮಾಡ್ಲಿ – ಡಿಕೆ ಬ್ರದರ್ಸ್ ವಿರುದ್ಧ ಯಡಿಯೂರಪ್ಪ ಗರಂ

Public TV
1 Min Read
BSY RMG

ಶಿವಮೊಗ್ಗ: ರಾಮನಗರ ಬಿಜೆಪಿ ಅಭ್ಯರ್ಥಿ ಎಲ್. ಚಂದ್ರಶೇಖರ್ ಅವರನ್ನು ಸಚಿವ ಡಿಕೆ ಶಿವಕುಮಾರ್ ಸಹೋದರರು ದುಡ್ಡುಕೊಟ್ಟು ಖರೀದಿ ಮಾಡಿದ್ದಾರೆ. ಅವರಿಗೆ ದೇವರು ಒಳ್ಳೆಯದು ಮಾಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಕಿಡಿಕಾರಿದ್ದಾರೆ.

ನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಅಭ್ಯರ್ಥಿಯನ್ನು ಡಿಕೆಶಿ ದುಡ್ಡು ಕೊಟ್ಟು ಖರೀದಿ ಮಾಡಿದ್ದಾರೆ. ದೇವರು ಅವರಿಗೆ ಒಳ್ಳೆಯದು ಮಾಡಲಿ ಎಂದರು. ಆದರೆ ರಾಮನಗರ ಅಭ್ಯರ್ಥಿ ಬಿಜೆಪಿ ಸೇರ್ಪಡೆ ಆಗಿರುವುದು ಪಕ್ಷದ ಮೇಲೆ ಹಾಗೂ ಉಪಚುನಾವಣೆ ಮೇಲೆ ಪರಿಣಾಮ ಬೀರುತ್ತಾ ಎಂಬ ಪ್ರಶ್ನೆಗೆ ಗರಂ ಆದ ಬಿಎಸ್‍ವೈ ಉತ್ತರಿಸದೆ ಮೈಕ್ ತಳ್ಳಿ ಹೋದರು.

SMG BSY

ಶಿಕಾರಿಪುರದ ಹುಚ್ಚುರಾಯಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ ಯಡಿಯೂರಪ್ಪ ಅವರು ಆಂಜನೇಯಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಿಎಸ್ ಯಡಿಯೂರಪ್ಪ ಅವರಿಗೆ ಪುತ್ರ ರಾಘವೇಂದ್ರ, ತಾರಾ ಅವರು ಸಾಥ್ ನೀಡಿದ್ದರು. ದೇವಾಲಯದ ಭೇಟಿ ಬಳಿಕ ಬಹಿರಂಗ ಪ್ರಚಾರ ನಡೆಸಲು ತೆರಳಿದ್ದರು.

ಸಿಎಂ ಕುಮಾರಸ್ವಾಮಿ ಅವರು ಸೊರಬದಲ್ಲಿ ಮಾತನಾಡಿದ ವೇಳೆ, ಯಡಿಯೂರಪ್ಪ ಅವರು ಯಾವ ಅಭಿವೃದ್ದಿ ಕೆಲಸವನ್ನೂ ಮಾಡಿಲ್ಲ, ಬೇಕಿದ್ದರೆ ಹೋಗಿ ಹುಚ್ಚುರಾಯಸ್ವಾಮಿ ದೇವಸ್ಥಾನದಲ್ಲಿ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಟೀಕೆ ಮಾಡಿದ್ದರು. ಇದರ ಬೆನ್ನಲ್ಲೇ ಇಂದು ಬಿಎಸ್‍ವೈ ಅವರು ಅದೇ ಹುಚ್ಚುರಾಯಸ್ವಾಮಿ ದೇವಸ್ಥಾನದಿಂದಲೇ ಬಹಿರಂಗ ಪ್ರಚಾರವನ್ನು ಆರಂಭಮಾಡಿದ್ದಾರೆ. ಕುಮಾರಸ್ವಾಮಿ ಅವರ ಟೀಕೆ ಇಂದು ಶಿವಮೊಗ್ಗ ಕ್ಷೇತ್ರದಲ್ಲಿ ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

SMG BSY 1

https://www.youtube.com/watch?v=SUz3348T4QA

Share This Article
Leave a Comment

Leave a Reply

Your email address will not be published. Required fields are marked *