ಶಿವಮೊಗ್ಗ: ಅತಿವೃಷ್ಟಿಯಿಂದ ಬಳಲಿರುವವರು ಮನೆ ಕಟ್ಟಿಕೊಳ್ಳಲು ಮರಳು ತಂದುಕೊಂಡರೆ, ಅಂಥವರಿಗೆ ತಡೆ ಒಡ್ಡಬೇಡಿ. ಅಂತಹ ದೂರು ಕೇಳಿ ಬಂದರೆ, ಕಲಬುರಗಿಯಂತಹ ನೀರಿಲ್ಲದ ಜಾಗಕ್ಕೆ ವರ್ಗಾವಣೆ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
Advertisement
ಶಿವಮೊಗ್ಗದಲ್ಲಿ ನೆರೆ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನೆ ಕಟ್ಟಲು ಮರಳು ತೆಗೆದರೆ ಪೊಲೀಸ್ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಕೇಸ್ ಹಾಕುತ್ತಿದ್ದಾರೆ ಎಂಬ ದೂರುಗಳು ಕೇಳಿ ಬರುತ್ತಿವೆ. ಈ ಕುರಿತು ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು. ನಿರಾಶ್ರಿತರು ಮನೆ ಕಟ್ಟಲು ಮರಳು ತಂದುಕೊಂಡರೆ ಅಂಥವರಿಗೆ ಯಾವುದೇ ಕಾರಣಕ್ಕೂ ತಡೆಯೊಡ್ಡಬೇಡಿ. ಈ ಕುರಿತು ಮತ್ತೊಮ್ಮೆ ದೂರು ಕೇಳಿ ಬಂದಲ್ಲಿ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ತಿಳಿಸಿದ್ದಾರೆ.
Advertisement
ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿ ಕಾರ್ಯನಿರ್ವಹಿಸುತ್ತಾರೆ ಎಂದು ಸ್ಥಳದಲ್ಲಿಯೇ ಘೋಷಿಸಿದರು. ಹವಾಮಾನ ವೈಪರಿತ್ಯದಿಂದ ಕಾರವಾರ ಪ್ರವಾಸವನ್ನು ಮುಖ್ಯಮಂತ್ರಿಗಳು ಮೊಟಕುಗೊಳಿಸಿದರು.
Advertisement
Advertisement
ಶಿವಮೊಗ್ಗದಲ್ಲೇ ಸಭೆ ನಡೆಸಿ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ, ಅತಿವೃಷ್ಟಿಯಿಂದ ಹಾನಿಗೊಳಗಾಗಿರುವ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ. ಶೀಘ್ರದಲ್ಲೇ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು. ಸೆಪ್ಟೆಂಬರ್ 7-8 ಕ್ಕೆ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಈ ವೇಳೆ ಪ್ರವಾಹ ಪರಿಸ್ಥಿತಿ ಬಗ್ಗೆ ಅವರಿಗೆ ಮನವರಿಕೆ ಮಾಡಿಕೊಡಲು ಚಿಂತಿಸಲಾಗಿದೆ ಎಂದರು.