ಬೆಂಗಳೂರು: ಆಪರೇಷನ್ ಆಡಿಯೋ ಪ್ರಕರಣಕ್ಕೆ ಸಂಬಂಧಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರಿಗೆ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ನಗರದ ಸಿಟಿ ಸಿವಿಲ್ ಕೋರ್ಟಿನ 82 ನೇ ವಿಶೇಷ ನ್ಯಾಯಾಲಯ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದು, ಬಿಎಸ್‍ವೈ ಸೇರಿದಂತೆ ಇತರ ನಾಲ್ವರಿಗೂ ಮಧ್ಯಂತರ ಜಾಮೀನು ಮಂಜೂರು ಆಗಿದೆ.
Advertisement
Advertisement
ಏನಿದು ಪ್ರಕರಣ:
ಆಪರೇಷನ್ ಆಡಿಯೋ ಪ್ರಕರಣಕ್ಕೆ ಸಂಬಂಧಿದಂತೆ ಗುರುಮಿಠಕಲ್ ಶಾಸಕ ನಾಗನಗೌಡ ಪುತ್ರ ಶರಣಗೌಡ ಅವರು ರಾಯಚೂರಿನ ದೇವದುರ್ಗ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಶರಣಗೌಡ ಅವರ ದೂರು ಆಧಾರಿಸಿ ಬಿಎಸ್ ಯಡಿಯೂರಪ್ಪ ಸೇರಿದಂತೆ ನಾಲ್ವರ ಮೇಲೆ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಬಿಎಸ್‍ವೈ ಅವರು ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
Advertisement
ಪ್ರಕರಣದಲ್ಲಿ ಬಿಎಸ್ ಯಡಿಯೂರಪ್ಪ ಅವರು ಎ-1 ಆರೋಪಿ ಆಗಿದ್ದರೆ, ಶಾಸಕರಾದ ಶಿವನಗೌಡ ನಾಯಕ್, ಪ್ರೀತಂ ಗೌಡ, ಪತ್ರಕರ್ತ ಮರಂಕಲ್ ಅವರ ವಿರುದ್ಧ ದೂರು ದಾಖಲಾಗಿತ್ತು. ಭ್ರಷ್ಟಾಚಾರ ನಿಗ್ರಹ ಕಾಯ್ದೆ 19/2019 ಕಲಂ 8 ಮತ್ತು 12. ಭ್ರಷ್ಟಾಚಾರ ತಡೆಗಟ್ಟುವ ತಿದ್ದುಪಡಿ ಅಧಿನಿಯಮ 2018 ಮತ್ತು 120(ಬಿ), ಐಪಿಸಿ 506 ಕಾಯ್ದೆ ಅಡಿ ಎಫ್‍ಐಆರ್ ದಾಖಲಾಗಿತ್ತು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv