ನವದೆಹಲಿ: ಕರ್ನಾಟಕ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಬಹುಮತ ದೊರೆಯದಿದ್ದರೂ ರಾಜ್ಯಪಾಲರು ಬಿಜೆಪಿಗೆ ಸರ್ಕಾರ ನಡೆಸಲು ಅವಕಾಶ ನೀಡಿರುವ ನಿರ್ಧಾರದ ವಿರುದ್ಧ ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸಿದೆ.
ಪ್ರಜಾಪ್ರಭುತ್ವ ಉಳಿಸಿ ಹೆಸರಿನಲ್ಲಿ ನಾಳೆ ಎಲ್ಲಾ ರಾಜ್ಯಗಳ ರಾಜಧಾನಿ ಹಾಗೂ ಜಿಲ್ಲಾ ಘಟಕಗಳಲ್ಲಿ ಪ್ರತಿಭಟನೆ ನಡೆಸಲು ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದಾರೆ.
Advertisement
ಈ ಕುರಿತು ನವದೆಹಲಿ ಮಾತನಾಡಿದ ಎಐಸಿಸಿ ವಕ್ತಾರ ರಣದೀಪ್ ಸುರ್ಜೆವಾಲ್ ಪ್ರಮುಖವಾಗಿ ಕರ್ನಾಟಕ ರಾಜ್ಯಪಾಲರದ ವಜುಭಾಯಿವಾಲಾ, ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ನಡೆ ವಿರೋಧಿಸಿ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ.
Advertisement
A farcical Oath of CM’s post,
A fraud being played on majority,
A treachery with Constitution,
A deception with democracy,
That is Gov Karnataka illegally swearing in #BSYeddyurappa-turning the Raj Bhavan into BJP Office.
This Black Spot on India’s democracy will be erased.
— Randeep Singh Surjewala (@rssurjewala) May 17, 2018
Advertisement
ಬಿಎಸ್‍ವೈ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಬಿಎಸ್ ಯಡಿಯೂರಪ್ಪ ಒಂದು ದಿನದ ಮುಖ್ಯಮಂತ್ರಿ. ರಾಜ್ಯಪಾಲರಿಗೆ ನೀಡಿರುವ ಪತ್ರ ಸಲ್ಲಿಸುವಂತೆ ಸುಪ್ರಿಂಕೋರ್ಟ್ ಸೂಚಿಸಿದೆ. ಬಿಜೆಪಿಗೆ ಬಹುಮತ ಇಲ್ಲ ಹಾಗಾಗೀ ನಾಳೆ ಅಧಿಕಾರ ಕಳೆದುಕೊಳ್ಳಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.
Advertisement
ಇದೇ ವೇಳೆ ರಾಜ್ಯಪಾಲರ ವಿರುದ್ಧವು ವಾಗ್ದಾಳಿ ನಡೆಸಿದ ಅವರು, ಪ್ರಧಾನಿ ನರೇಂದ್ರ ಮೋದಿಗಾಗಿ ವಜುಬಾಯಿವಾಲ ಅವರು ಎಲ್ಲವನ್ನು ತ್ಯಾಗ ಮಾಡಿದ್ದಾರೆ. ಈ ಹಿಂದೆ ಗುಜುರಾತ್ ನಲ್ಲಿ ಮುಖ್ಯಮಂತ್ರಿ ಸ್ಥಾನವನ್ನು ತ್ಯಾಗ ಮಾಡಿದ್ದರು. ಸದ್ಯ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನ ತ್ಯಾಗ ಮಾಡಿದ್ದಾರೆ. ಸಂವಿಧಾನವನ್ನು ಕೊಂದು ಮುಗಿಸುವ ಕೆಲಸ ಮಾಡುತ್ತಿದ್ದಾರೆ. ಮೋದಿಗಾಗಿ ವಾಲಾ ಸಂವಿಧಾನದ ಎನ್ ಕೌಂಟರ್ ಮಾಡಿದ್ದಾರೆ. ನಿಮ್ಮಗೆ ಧೈರ್ಯ, ಸಂವಿಧಾನಿಕ ವ್ಯವಸ್ಥೆ ಮೇಲೆ ಗೌರವ ಇದ್ರೆ ನಾಳೆ ಬಹುಮತ ಸಾಬೀತು ಮಾಡಿ ಎಂದು ಬಿಜೆಪಿ ನಾಯಕರಿಗೆ ಅವರು ಸವಾಲು ಎಸೆದಿದ್ದಾರೆ.
LIVE: AICC Press Conference -BJP trampling Democracy in Karnataka https://t.co/Py2YAjrkrN
— Randeep Singh Surjewala (@rssurjewala) May 17, 2018