Connect with us

Districts

ಯಡಿಯೂರಪ್ಪಗೆ ವಯಸ್ಸಾಗಿದೆ ಅಂದ್ರು ಸಿದ್ದರಾಮಯ್ಯ

Published

on

ಮೈಸೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ವಯಸ್ಸಾಗಿದೆ ಅಂತ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಪ ಯಡಿಯೂರಪ್ಪನವರಿಗೆ ವಯಸ್ಸಾಯ್ತು. ಪಾರ್ಲಿಮೆಂಟ್ ಒಳಗಡೆ ಮುಖ್ಯಮಂತ್ರಿ ಆಗದೇ ಹೋದ್ರೆ ಜೀವನದಲ್ಲಿ ಆಗಲ್ಲ ಗೊತ್ತಾಗಿಬಿಟ್ಟಿದೆ. ಹೀಗಾಗಿ ಹೆಂಗಾದ್ರೂ ಮಾಡಿ ಮುಖ್ಯಮಂತ್ರಿ ಆಗಬೇಕು ಅಂತ ಶಾಸಕರನ್ನು ಖರೀದಿ ಮಾಡಲು ಓಡಾಡುತ್ತಿದ್ದಾರೆ ಅಂತ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಶಾಸಕರನ್ನು ಖರೀದಿಸಲು ಬಿಜೆಪಿಯವರಿಗೆ ಸಾಧ್ಯವೂ ಇಲ್ಲ. ಈ ವಿಚಾರದಲ್ಲಿ ಅವರು ಯಶಸ್ಸು ಕೂಡ ಕಾಣಲ್ಲ. ಅವರ ಜೊತೆ ಕಾಂಗ್ರೆಸ್ ನ ಯಾವ ಶಾಸಕರೂ ಹೋಗಲ್ಲ. ಸರ್ಕಾರನೂ ಬೀಳಲ್ಲ. ಇದು ನೂರಕ್ಕೆ ನೂರು ಸತ್ಯ ಅಂತ ವಿಶ್ವಾಸ ವ್ಯಕ್ತಪಡಿಸಿದ್ರು.

ಸರ್ಕಾರ ಬಿದ್ದೋಗುತ್ತೆ ಅಂತ ಕಳೆದ 6 ತಿಂಗಳಿನಿಂದ ಹೇಳುತ್ತಲೇ ಇದ್ದಾರೆ. ಬಿದ್ದಿದ್ಯಾ..? ಮತ್ತೆ ಅದರಲ್ಲಿ ಸತ್ಯ ಏನಿದೆ?. ರಾಜಕೀಯಕ್ಕೋಸ್ಕರ ಹೇಳುತ್ತಿದ್ದಾರೆ. ಡಿ.22ರಂದು ಮಂತ್ರಿಮಂಡಲ ರಚನೆಯಾಗ್ತಿದ್ದಂಗೆ ಬಿದ್ದೊಯ್ತದೆ ಅಂತ ಹೇಳುತ್ತಿದ್ದಾರೆ. ಆದ್ರೆ ಸರ್ಕಾರಕ್ಕೆ ಏನೂ ಆಗಲ್ಲ ಅಂತ ಸ್ಪಷ್ಟಪಡಿಸಿದ ಅವರು, ಮಧ್ಯಪ್ರದೇಶ, ರಾಜಸ್ಥಾನ, ಛತೀಸ್ ಗಡ್ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತವಾಗಿದೆ. 2019 ನೂರಕ್ಕೆ ನೂರರಷ್ಟು ಮೋದಿ ಸರ್ಕಾರ ಹೋಗುತ್ತದೆ ಅಂತ ತಿಳಿಸಿದ್ರು.

ಸಿದ್ದರಾಮಯ್ಯ ವಿದೇಶಕ್ಕೆ ಹೊರಟ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ವಿದೇಶಕ್ಕೆ ಹೋಗೋದು ಅಫೆನ್ಸ್ ಏನ್ರಿ? ನನಗೂ ವೈಯಕ್ತಿಕ ಬದುಕು ಇದೆ ಅಲ್ವಾ…? ಎಲ್ಲವನ್ನೂ ನಿಮ್ಮ ಮುಂದೆ ಹೇಳಿ ಹೋಗಬೇಕಾ ಅಂತ ಮಾಧ್ಯಮದವರನ್ನು ಪ್ರಶ್ನಿಸಿ, ಸ್ನೇಹಿತರ ಮನೆಯಲ್ಲಿ ಮದುವೆ ಇದೆ ಹೀಗಾಗಿ ವಿದೇಶಕ್ಕೆ ಹೋಗ್ತಿದ್ದೀನಿ ಅಷ್ಟೇ ಅಂದ್ರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Click to comment

Leave a Reply

Your email address will not be published. Required fields are marked *