– ದೆಹಲಿಯಲ್ಲಿ ಕಾಂಗ್ರೆಸ್ ಆರೋಪ
– ಮೋದಿ ಮೌನವಹಿಸಿದ್ದು ಯಾಕೆ?
ನವದೆಹಲಿ: ಲೋಕಸಭಾ ಚುನಾವಣೆಯ ಬೆನ್ನಲ್ಲೇ ಯಡಿಯೂರಪ್ಪ ಕೇಂದ್ರ ನಾಯಕರಿಗೆ ಹಣ ಸಂದಾಯ ಮಾಡಿದ್ದಾರೆ ಎಂದು ಉಲ್ಲೇಖಗೊಂಡಿರುವ ಡೈರಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ.
ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲಾ ಅವರು ಯಡಿಯೂರಪ್ಪನವರು ಸಿಎಂ ಆಗಿದ್ದಾಗ ಕೇಂದ್ರ ನಾಯಕರಿಗೆ 1800 ಕೋಟಿ ರೂ. ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.
Advertisement
Advertisement
ಕಾರವಾನ್ ಮ್ಯಾಗಜಿನ್ ವರದಿಯನ್ನು ಆಧಾರಿಸಿ ಸುದ್ದಿಗೋಷ್ಠಿ ನಡೆಸಿದ ಅವರು, ಈ ಡೈರಿಯ ಪ್ರತಿ ಪುಟದಲ್ಲಿ ಬಿಎಸ್ ಯಡಿಯೂರಪ್ಪ ಅವರ ಹಸ್ತ ಬರಹದ ಜೊತೆ ಸಹಿ ಇದೆ. ಅಷ್ಟೇ ಅಲ್ಲದೇ ಈ ಪ್ರಕರಣ ವಿಚಾರಣೆಗೆ ಯೋಗ್ಯವಾಗಿದ್ದು, ಹೊಸದಾಗಿ ನೇಮಕಗೊಂಡಿರುವ ಲೋಕಪಾಲರಿಗೆ ಈ ಡೈರಿಯ ಬಗ್ಗೆ ತನಿಖೆ ನಡೆಸಲು ಆದೇಶ ನೀಡಬೇಕೆಂದು ಅವರು ಹೇಳಿದ್ದಾರೆ.
Advertisement
2017 ರಿಂದ ಈ ಡೈರಿ ಆದಾಯ ತೆರಿಗೆ ಇಲಾಖೆಯಲ್ಲಿದ್ದು, ಮೋದಿ ಯಾಕೆ ಈ ಪ್ರಕರಣದಲ್ಲಿ ಮೌನ ವಹಿಸಿದ್ದಾರೆ ಎಂದು ಅವರು ಪ್ರಶ್ನಿಸಿದ್ದಾರೆ. ಈ ಡೈರಿಯಲ್ಲಿರುವ ವಿಚಾರಗಳು ಸರಿಯೇ ತಪ್ಪೇ ಎನ್ನುವುದರ ಬಗ್ಗೆ ಹೆಸರು ಪ್ರಸ್ತಾಪವಾಗಿರುವ ನಾಯಕರು ಮುಂದೆ ಬಂದು ಪ್ರತಿಕ್ರಿಯೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
Advertisement
ಡೈರಿಯಲ್ಲಿ ಏನಿದೆ?
ಬಿಜೆಪಿ ಕೇಂದ್ರ ಚುನಾವಣಾ ಸಮಿತಿಗೆ 1 ಸಾವಿರ ಕೋಟಿ, ಅರುಣ್ ಜೇಟ್ಲಿ ಮತ್ತು ಗಡ್ಕರಿ ಅವರಿಗೆ 150 ಕೋಟಿ, ರಾಜನಾಥ್ ಸಿಂಗ್ ಅವರಿಗೆ 100 ಕೋಟಿ, ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಅವರಿಗೆ 50 ಕೋಟಿ ರೂ. ನೀಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ನಿತಿನ್ ಗಡ್ಕರಿ ಮಗಳ ಮದುವೆಗೆ 10 ಕೋಟಿ ನೀಡಿದ್ದು, ತನ್ನ ವಿರುದ್ಧದ ಕೇಸ್‍ಗಳ ವಕಾಲತ್ತಿಗೆ 50 ಕೋಟಿ ರೂ. ಹಣವನ್ನು ಯಡಿಯೂರಪ್ಪ ನೀಡಿದ್ದಾರೆ ಎಂದು ಸುರ್ಜೆವಾಲಾ ಆರೋಪಿಸಿದ್ದಾರೆ.