ಬೆಂಗಳೂರು: ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಗೆಲುವು ಲಭಿಸಿದೆ. ಆದರೆ ಬಳ್ಳಾರಿ, ಜಮಖಂಡಿಯಲ್ಲಿ ನಿರೀಕ್ಷೆಯ ಫಲಿತಾಂಶ ಲಭಿಸಿಲ್ಲ. ಈ ಬಾರಿಯ ಚುನಾವಣೆಯಲ್ಲಿ ಹಣ, ಹೆಂಡ, ತೋಳ್ಬಲ ಹಾಗೂ ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಂಡು ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಗೆದ್ದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಆರೋಪಿಸಿದ್ದಾರೆ.
ಶಿವಮೊಗ್ಗದಲ್ಲಿ ಪಕ್ಷದ ಗೆಲುವು ಸಾಧಿಸಿದ ಕಾರಣ ಕಾರ್ಯಕರ್ತರೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮೈತ್ರಿ ಸರ್ಕಾರದ ಎಷ್ಟೇ ರೀತಿಯಲ್ಲಿ ಜನರನ್ನು ಮರಳು ಮಾಡಿರೂ ನೀವು ಬಿಜೆಪಿಗೆ ಗೆಲುವು ನೀಡಿದ್ದೀರಿ. ನನಗೆ ಹೆಚ್ಚು ಸಂತೋಷ ತಂದಿದೆ. ಆದರೆ ಬಳ್ಳಾರಿ, ಜಮಖಂಡಿ ಸೋಲಿಗೆ ಕಾರಣ ಏನು ಎನ್ನುವುದು ಚರ್ಚೆ ಮಾಡಿ ತಿಳಿದುಕೊಳ್ಳತ್ತೇವೆ ಎಂದರು.
ಇದೇ ವೇಳೆ ಜನಾರ್ದನ ರೆಡ್ಡಿ ಹೇಳಿಕೆಗೂ ಸೋಲಿಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ನಮ್ಮ ನಿರೀಕ್ಷೆಗೂ ಹೆಚ್ಚಿನ ಮಟ್ಟದಲ್ಲಿ ಬಳ್ಳಾರಿಯಲ್ಲಿ ನಮಗೆ ಮತಗಳು ಕಡಿಮೆ ಬಿದ್ದಿದೆ. ಆದರೆ ಶಿವಮೊಗ್ಗದಲ್ಲಿ ನಮ್ಮನ್ನು ಸೋಲಿಸಲು ಎಲ್ಲರೂ ಒಂದಾಗಿದ್ದರೂ ನಮ್ಮನ್ನು ಸೋಲಿಸಲು ಆಗಲಿಲ್ಲ ಎಂದರು.
ಶಿವಮೊಗ್ಗದಲ್ಲಿ ನಮ್ಮ ಕಾರ್ಯಕರ್ತರು ಶಿವಮೊಗ್ಗದಲ್ಲಿ ಜೆಡಿಎಸ್- ಕಾಂಗ್ರೆಸ್ ಗೆ ಪಾಠ ಕಲಿಸಿದ್ದಾರೆ. ನಮ್ಮ ಗುರಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಮೋದಿ ಅವರನ್ನು ಮತ್ತೆ ಪ್ರಧಾನಿ ಮಾಡುವುದು. ಉಪಚುನಾವಣೆಯ ಸೋಲು ಮುಂದೆ ಆಗದಂತೆ ಎಚ್ಚರಿಕೆ ವಹಿಸುತ್ತೇವೆ. ಇನ್ನು ಎರಡು ತಿಂಗಳಲ್ಲಿ ಮತ್ತೆ ಚುನಾವಣೆಗೆ ತಯಾರಾಗಬೇಕಿದೆ. ಸದ್ಯ ಸರ್ಕಾರದ ವರ್ಗಾವಣೆ ಬಗ್ಗೆ ಹೈಕೋರ್ಟ್ ಛೀಮಾರಿ ಹಾಕಿದೆ. ಇದನ್ನು ಸರ್ಕಾರ ನಡೆಸುತ್ತಿರುವವರು ಗಮನದಲ್ಲಿ ಇಟ್ಟುಕೊಳ್ಳಬೇಕು ಎಂದು ಟೀಕಿದರು.
ಇದೇ ವೇಳೆ ನವೆಂಬರ್ 6ರ ಬಳಿಕ ಸರ್ಕಾರ ಉರುಳುತ್ತದೆ ಎಂಬ ಹೇಳಿಕೆಗೆ ಉತ್ತರಿಸಿದ ಬಿಎಸ್‍ವೈ, ಚುನಾವಣೆ ನಂತರ ಸಚಿವ ಸಂಪುಟ ವಿಸ್ತರಣೆ ಕಾರ್ಯ ಆರಂಭವಾಗುತ್ತದೆ. ಮುಂದೆಯೂ ಗೊಂದಲಗಳು ಉಂಟಾಗುತ್ತವೆ ಎಂದು ಹೇಳಿದ್ದೇವು ಅಷ್ಟೇ ಎಂದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv