ಮೈಸೂರು: ದಾಸೋಹ ಅಂದರೆ ವೀರಶೈವ ಲಿಂಗಾಯತರಲ್ಲಿ ವಿಶೇಷ ಅರ್ಥ ಇದೆ. ನಾವೆಲ್ಲರೂ ಒಟ್ಟಾದಾಗ ಮಾತ್ರ ನಮ್ಮ ಗುರಿ ತಲುಪಲು ಸಾಧ್ಯ. ವರ್ಗಾವಣೆ ಸಂದರ್ಭದಲ್ಲಿ ಸರ್ಕಾರ ಲಿಂಗಾಯತರನ್ನು ಮೂಲೆಗುಂಪು ಮಾಡಿದ್ದಾರೆ. ಎಡವದಿದ್ದರೆ ನೀವು ಹೀಗೆ ಇರುತ್ತಿರಲಿಲ್ಲ, ನಾನು ಕೂಡ ಹೀಗೆ ಇರುತ್ತಿರಲಿಲ್ಲ ಎಂದು ಮಾಜಿ ಸಿಎಂ, ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಮೈಸೂರಿನಲ್ಲಿ ನಡೆದ ವೀರಶೈವ ಲಿಂಗಾಯತ ನೌಕರರ ಸಮ್ಮೇಳನದಲ್ಲಿ ಭಾಗವಹಿಸಿ ಬಿಎಸ್‍ವೈ ಮಾತನಾಡಿದರು. ವರ್ಗಾವಣೆ ವಿಚಾರದಲ್ಲಿ ತಾರತಮ್ಯ, ಜಾತಿ ನೋಡುವುದು ರಾಜ್ಯ ಸರ್ಕಾರಕ್ಕೆ ಶೋಭೆ ತರಲ್ಲ. ಎಲ್ಲಾ ವರ್ಗಕ್ಕೆ ನ್ಯಾಯ ಒದಗಿಸುವ ಜವಾಬ್ದಾರಿ ಹೊಂದಿರುವ ಸಿಎಂ ಹಾಗೂ ಸಚಿವರು ಅನ್ಯಾಯ ಮಾಡಿದಂತಾಗುತ್ತೆ. ಇದನ್ನ ಸರಿಪಡಿಸೋ ಕೆಲಸ ಸರ್ಕಾರ ಮಾಡಬೇಕು, ನಾನೂ ಕೂಡ ವಿರೋಧ ಪಕ್ಷದ ನಾಯಕನಾಗಿ ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದರು.
ಇದೇ ವೇಳೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಬಿಎಸ್‍ವೈ, ಸ್ವಾರ್ಥ ರಾಜಕಾರಣ ಮಾಡುವ ವಿಚಿತ್ರ ಪರಿಸ್ಥಿತಿ ರಾಜ್ಯದಲ್ಲಿ ನಿರ್ಮಾಣವಾಗಿದ್ದು, ಪರಿಸ್ಥಿತಿ ಹೀಗೆ ಮುಂದುವರಿದರೆ ಜನ ಧಂಗೆ ಏಳುವ ಪರಿಸ್ಥಿತಿ ಬರುತ್ತೆ. ಬರಗಾಲದ ಪರಿಸ್ಥಿತಿಯನ್ನು ಸರ್ಕಾರ ಸರಿಯಾಗಿ ನಿರ್ವಹಿಸುತ್ತಿಲ್ಲ. ಸರ್ಕಾರ ಕೇವಲ ಮೂರು ನಾಲ್ಕು ಜಿಲ್ಲೆಗೆ, ಒಂದು ಜನಾಂಗಕ್ಕೆ ಸೀಮಿತ ಎನ್ನುವುದು ಪ್ರಜಾತಂತ್ರ ವ್ಯವಸ್ಥೆಗೆ ಮಾರಕವಾದದ್ದು. ಇನ್ನಾದರೂ ಇದನ್ನು ಸರಿಪಡಿಸಿಕೊಳ್ಳಲಿ ಎಂದು ಸಮಿಶ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv