ಬೆಂಗಳೂರು: ಸ್ಪೀಕರ್ ರಮೇಶ್ ಕುಮಾರ್ ಅವರು ಇಂದು 14 ಮಂದಿ ಶಾಸಕರನ್ನು ಅನರ್ಹಗೊಳಿಸಿ ಆದೇಶ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸೋಮವಾರ ವಿಶ್ವಾಸಮತ ಯಾಚನೆ ಸಾಬೀತುಪಡಿಸುವಲ್ಲಿ ಬಿ.ಎಸ್ ಯಡಿಯೂರಪ್ಪ ಅವರು ಯಶಸ್ವಿಯಾಗುತ್ತಾರೆ.
ಗುರುವಾರ 3 ಮಂದಿ ಹಾಗೂ ಇಂದು 14 ಮಂದಿ ಶಾಸಕರು ಒಟ್ಟು 17 ಮಂದಿ ಶಾಸಕರು ಅನರ್ಹತೆಯಿಂದಾಗಿ ಇದೀಗ ವಿಧಾನ ಸಭೆಯ ಸಂಖ್ಯಾಬಲ ಕುಸಿದಿದೆ. 224ರಿಂದ 207ಕ್ಕೆ ವಿಧಾನಸಭೆ ಬಲಾಬಲ ಕುಸಿದಿದೆ. ಹೀಗಾಗಿ ಈಗಾಗಲೇ ಬಿಜೆಪಿ ಸಂಖ್ಯಾಬಲ 105 ಇದ್ದು, ಪಕ್ಷೇತರ ಶಾಸರ ಆರ್ ಶಂಕರ್ ಬೆಂಬಲದಿಂದಾಗಿ 106 ಆಗಿದೆ. ಇತ್ತ ದೋಸ್ತಿ ಸಂಖ್ಯಾಬಲ 100 ಇದೆ. ಬಹುಮತ ಸಾಬೀತು ಪಡಿಸಲು ಬೇಕಾಗಿರುವ ಮ್ಯಾಜಿಕ್ ಸಂಖ್ಯೆ 104 ಆಗಿದೆ. ಬಹುಮತ ಸಾಬೀತಿಗೆ ಅಗತ್ಯವಾದ ಮ್ಯಾಜಿಕ್ ನಂಬರ್ ಕುಸಿದ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರು ನಾಳೆ ಸದನಸದಲ್ಲಿ ವಿಶ್ವಾಸಮತ ಸಾಬೀತು ಪಡಿಸಲಿದ್ದಾರೆ.
Advertisement
Advertisement
ಗುರುವಾರದಂದು ಸಂಜೆ ಸುದ್ದಿಗೋಷ್ಠಿ ಕರೆದಿದ್ದ ಸ್ಪೀಕರ್ ಅವರು ಕಾಂಗ್ರೆಸ್ಸಿನ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ, ಮಸ್ಕಿಯ ಪ್ರತಾಪ್ ಗೌಡ ಪಾಟೀಲ್, ರಾಣೆಬೆನ್ನೂರು ಶಾಸಕ ಆರ್ ಶಂಕರ್ ಅವರನ್ನು ಅನರ್ಹ ಗೊಳಿಸಿದ್ದರು. ಆ ಬಳಿಕ ಇಂದು ಮತ್ತೆ ಸುದ್ದಿಗೋಷ್ಠಿ ಕರೆದು, ಮಸ್ಕಿ ಶಾಸಕ ಪ್ರತಾಪ್‍ಗೌಡ ಪಾಟೀಲ್, ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ್, ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್, ವಿಜಯನಗರದ ಆನಂದ್ ಸಿಂಗ್, ರಾಜರಾಜೇಶ್ವರಿ ನಗರದ ಮುನಿರತ್ನ, ಚಿಕ್ಕಬಳ್ಳಾಪುರದ ಕೆ.ಸುಧಾಕರ್, ಹೊಸಕೋಟೆಯ ಎಂಟಿಬಿ ನಾಗರಾಜ್, ಯಲ್ಲಾಪುರದ ಶಿವರಾಂ ಹೆಬ್ಬಾರ್, ಶಿವಾಜಿನಗರದ ರೋಷನ್ ಬೇಗ್, ಕೆ.ಆರ್.ಪುರಂನ ಬೈರತಿ ಬಸವರಾಜ್, ಮಹಾಲಕ್ಷ್ಮಿ ಲೇಔಟ್ ಶಾಸಕ ಗೋಪಾಲಯ್ಯ, ಕಾಗವಾಡದ ಶ್ರೀಮಂತ್ ಪಾಟೀಲ್, ಹುಣಸೂರಿನ ಹೆಚ್.ವಿಶ್ವನಾಥ್ ಮತ್ತು ಕೆ.ಆರ್.ಪೇಟೆಯ ನಾರಾಯಣಗೌಡ ಹೀಗೆ ಎಲ್ಲ 14 ಶಾಸಕರನ್ನೂ ಅನರ್ಹಗೊಳಿಸಿ ಆದೇಶ ಹೊರಡಿಸಿದ್ದಾರೆ.
Advertisement
Advertisement
ಸ್ಪೀಕರ್ ರಮೇಶ್ ಕುಮಾರ್ ಅವರು ಸಾಕಷ್ಟು ಒತ್ತಡಕ್ಕೆ ಒಳಗಾಗಿ ಈ ಆದೇಶ ನೀಡಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದೆ. ಒಟ್ಟಿನಲ್ಲಿ 14 ಮತ್ತು 3 ಒಟ್ಟು 17 ಮಂದಿ ಶಾಸಕರು ಅನರ್ಹಗೊಂಡಿದ್ದು, ಇದರಲ್ಲಿ ಮೂವರು ಈಗಾಗಲೇ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಇದೀಗ ಮತ್ತೆ 14 ಮಂದಿ ನಾಳೆ ಸುಪ್ರೀಂ ಕದ ತಟ್ಟಲಿದ್ದಾರೆ. ಹೀಗಾಗಿ ಕೋರ್ಟ್ 17 ಮಂದಿಯ ಕೇಸನ್ನು ಒಟ್ಟಿಗೆ ತೆಗೆದುಕೊಂಡು ಏನ್ ತೀರ್ಪು ಕೊಡುತ್ತದೆ ಎಂಬುದು ಸದ್ಯದ ಕುತೂಹಲವಾಗಿದೆ.