ಬೆಂಗಳೂರು: ಸತತ ಮೂರು ದಿನಗಳಿಂದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜನಾಶೀರ್ವಾದ ಯಾತ್ರೆಯಲ್ಲಿ ಭಾಗಿಯಾಗಿ ಉತ್ತರ ಕರ್ನಾಟಕದಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಚುನಾವಣಾ ಪ್ರಚಾರದಲ್ಲಿ ಸಂಚರಿಸುವ ಮಾರ್ಗದಲ್ಲಿ ಬರುವ ಹಿಂದೂ ದೇವಾಲಯಗಳಿಗೆ ಭೇಟಿ ನೀಡುತ್ತಿದ್ದಾರೆ.
ಮಾಂಸಾಹಾರ ತಿಂದು ದರ್ಶನ ಪಡೆದ್ರಾ ರಾಗಾ?: ರಾಹುಲ್ ಗಾಂಧಿ ಕೊಪ್ಪಳ ಜಿಲ್ಲೆಯ ಇತಿಹಾಸ ಪ್ರಸಿದ್ಧ ಶ್ರೀ ಕನಕಾಚಲಪತಿ ದೇವಸ್ಥಾನಕ್ಕೆ ತೆರಳುವ ಮುನ್ನ ಪ್ರವಾಸಿ ಮಂದಿರದಲ್ಲಿ ಜವಾರಿ ಕೋಳಿ, ಬಿರಿಯಾನಿ, ಪಾವ್ ಬಾಜಿ, ಶಾವಿಗೆ ಪಾಯಸ, ಪಿಜ್ಜಾ ಸೇರಿದಂತೆ ವಿವಿಧ ವೆಜ್ ಮತ್ತು ನಾನ್‍ವೆಜ್ ಆಹಾರ ಸೇವನೆ ಮಾಡಿದ್ದರು ಎಂದು ಹೇಳಲಾಗುತ್ತಿದೆ.
Advertisement
Advertisement
ಬಿಎಸ್‍ವೈ ಟ್ವೀಟ್: ಮೀನು ತಿಂದು ಧರ್ಮಸ್ಥಳ ಮಂಜುನಾಥನ ದರ್ಶನ ಪಡೆಯೋ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದೆಡೆಯಾದರೆ, ಜವಾರಿ ಕೋಳಿ ತಿಂದು ನರಸಿಂಹ ಸ್ವಾಮಿಯ ದರ್ಶನ ಪಡೆಯೋ ರಾಹುಲ್ ಗಾಂಧಿ ಮತ್ತೊಂದು ಕಡೆ. ಪ್ರತಿ ಬಾರಿ ಏಕೆ ಹಿಂದೂಗಳ ಭಾವನೆಗಳಿಗೆ ಕಾಂಗ್ರೆಸ್ ಧಕ್ಕೆ ತರುತ್ತಿದೆ? ಎಲ್ಲರನ್ನೂ ಸಮನಾಗಿ ಕಾಣುವುದು ಸಮಾಜವಾದ, ನಿಮ್ಮದು ಮಜಾವಾದ ಅಂತಾ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
Advertisement
Advertisement
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧರ್ಮಸ್ಥಳಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮೀನು ಊಟ ಸೇವಿಸಿ ಬಳಿಕ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿದ್ದರು ಎಂದು ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಆದ್ರೆ ಈ ಕುರಿತು ಸಿಎಂ ಪ್ರತಿಕ್ರಿಯಿಸಿ, ದೇವರು ಮಾಂಸಾಹಾರ ತಿಂದು ಬರಬೇಡ ಅಂತ ಎಲ್ಲೂ ಹೇಳಿಲ್ಲ ಎಂದು ಬೇಡರ ಕಣ್ಣಪ್ಪನ ಉದಾಹರಣೆ ಕೊಟ್ಟು ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದರು. ಇದನ್ನೂ ಓದಿ: ಮೀನೂಟ ತಿಂದುಬಂದ ಸಿಎಂ, ಉಪವಾಸದಲ್ಲೇ ಧರ್ಮಸ್ಥಳಕ್ಕೆ ಬಂದ ಮೋದಿ!