ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ರಾಜಕೀಯ ಸೇಡು ತೀರಿಸಿಕೊಳ್ಳಲು, ಎಸಿಬಿ ಮತ್ತು ಇತರ ಪೊಲೀಸ್ ವ್ಯವಸ್ಥೆಯನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಮಾಜಿ ಸಿಎಂ, ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಆರೋಪ ಮಾಡಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಬಿಎಸ್‍ವೈ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಯಾರು ಯಾರ ಮಾತನ್ನೂ ಕೇಳದ ಪರಿಸ್ಥಿತಿಯಲ್ಲಿ ಆಡಳಿತ ಯಂತ್ರ ದುರುಪಯೋಗವಾಗುತ್ತಿದೆ. ರಾಜ್ಯದಲ್ಲಿ ಅದರಲ್ಲೂ ಬೆಂಗಳೂರು ನಗರದಲ್ಲಿ ಹಾಡಹಗಲೇ ಸಮಾಜಘಾತುಕ ಶಕ್ತಿಗಳು ಕತ್ತಿ ಝಳಪಿಸುತ್ತಿವೆ. ಪೊಲೀಸ್ ಇಲಾಖೆಯಲ್ಲಿ ರಾಜಕೀಯ ಶಕ್ತಿಗಳ ಹಸ್ತಕ್ಷೇಪವಾಗುತ್ತಿದ್ದು, ಇದಕ್ಕೆ ಜನಾರ್ದನ ರೆಡ್ಡಿಯವರನ್ನು ಬಂಧಿಸಿ ಬಿಡುಗಡೆಗೊಳಿಸಿರುವುದು ತಾಜಾ ಉದಾಹರಣೆಯಾಗಿದೆ. ರಾಜಕೀಯ ಸೇಡು ತೀರಿಸಿಕೊಳ್ಳಲು, ಎಸಿಬಿ ಮತ್ತು ಇತರ ಪೊಲೀಸ್ ವ್ಯವಸ್ಥೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿವೆ. ಇದು ಅಧಿಕಾರ ದುರುಪಯೋಗ ಅಲ್ಲದೇ ಮತ್ತೇನು ಎಂದು ಪ್ರಶ್ನೆ ಮಾಡಿದ್ದಾರೆ.
Advertisement
Advertisement
ನಗರದ ವಿಜಯನಗರದಲ್ಲಿ ಸಿಗರೇಟ್ ವಿಚಾರದಲ್ಲಿ ನಡೆದ ಕೊಲೆಯನ್ನು ತಮ್ಮ ಪತ್ರಿಕಾ ಹೇಳಿಕೆಯಲ್ಲಿ ಉಲ್ಲೇಖ ಮಾಡಿರುವ ಬಿಎಸ್ ಯಡಿಯೂರಪ್ಪ ಅವರು, ಘಟನೆಯ ವೀಡಿಯೋ ವೈರಲ್ ಆಗಿದ್ದು ಅಮಾನವೀಯ. ಇದು ಬೆಂಗಳೂರಿನಲ್ಲಿ ಇರುವ ಪೊಲೀಸ್ ಕಾನೂನು ಅವ್ಯವಸ್ಥೆಗೆ ಹಿಡಿದ ಕೈಗನ್ನಡಿಯಾಗಿದೆ. ಒಂದು ತಿಂಗಳಿನ ಹಿಂದೆ ಮಂಡ್ಯದಲ್ಲಿ ಸಾಲದ ಹಣ ಮರುಪಾವತಿಸಲಿಲ್ಲ ಎಂದು ಹೆಣ್ಣು ಮಗಳನ್ನು ಎಳೆದುಕೊಂಡು ಜೀಪ್‍ನಲ್ಲಿ ತೆಗೆದುಕೊಂಡು ಹೋದ ಪ್ರಕರಣ ಹಾಗೇ ಮುಚ್ಚಿಹೋಗಿದ್ದು, ಅಭಿವೃದ್ಧಿ ಕಾರ್ಯವಲ್ಲದೇ ಸರ್ಕಾರದ ಎಲ್ಲಾ ಅಂಗಗಳೂ ಮುರಿದು ಬಿದ್ದಿವೆ ಎಂದು ತಿಳಿಸಿದ್ದಾರೆ.
Advertisement
ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟರೆ ಯಾವುದೇ ಉದ್ದಿಮೆದಾರ ರಾಜ್ಯದಲ್ಲಿ ಬಂಡವಾಳ ಹೂಡಲು ಮುಂದೆ ಬರುವುದಿಲ್ಲ. ಈ ಎಲ್ಲ ಅಪರಾಧ ಘಟನೆಗಳು ರಾಜ್ಯದ ಅಭಿವೃದ್ಧಿ ಮತ್ತು ಹೂಡಿಕೆ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಇದೆಲ್ಲಕ್ಕೂ ಪೊಲೀಸ್ ವ್ಯವಸ್ಥೆಯಲ್ಲಿ ರಾಜಕೀಯ ಶಕ್ತಿಗಳ ಹಸ್ತಕ್ಷೇಪವೇ ಕಾರಣವಾಗಿದೆ ಎಂದಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews