ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರು ಆಪರೇಷನ್ ಕಮಲದ ರಹಸ್ಯವನ್ನು ಬಿಚ್ಚಿಟ್ಟಿದ್ದಾರೆ.
ಸಿದ್ದಗಂಗಾ ಶ್ರೀಗಳ ಅನಾರೋಗ್ಯದ ಹಿನ್ನೆಲೆಯಲ್ಲಿ ಬಿಎಸ್‍ವೈ ತಡರಾತ್ರಿ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ್ದಾರೆ. ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ನೆಡೆದಾಡುವ ದೇವರು ಸಿದ್ದಗಂಗಾ ಶ್ರೀಗಳ ಆರೋಗ್ಯ ಚೆನ್ನಾಗಿಲ್ಲ. ಇಂದು ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸುತ್ತೇನೆ ಎಂದು ಹೇಳಿದರು.
Advertisement
Advertisement
ಕಾಂಗ್ರೆಸ್ ನವರು ನಾವು ಆಪರೇಷನ್ ಮಾಡುತ್ತಿದ್ದೇವೆ ಅಂತಾ ಹೇಳುತ್ತಿದ್ದಾರೆ. ನಾವು ಸರ್ಕಾರ ಬೀಳಿಸುವ ಯಾವುದೇ ಪ್ರಯತ್ನ ಮಾಡಿಲ್ಲ. ಬಿಜೆಪಿ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆಂದು ಕಾಂಗ್ರೆಸ್‍ನವರೇ ಹೇಳುತ್ತಿದ್ದಾರೆ. ಸಿಎಂ ಕುಮಾರಸ್ವಾಮಿ ಅವರು ನಮ್ಮ ಓರ್ವ ಶಾಸಕನಿಗೆ ಮಂತ್ರಿ ಮಾಡ್ತೀನಿ, ಹಣ ನೀಡ್ತಿನಿ ಎಂದು ಹೇಳುತ್ತಿದ್ದಾರೆ. ನಮ್ಮ ಶಾಸಕರನ್ನು ಸೆಳೆಯಲು ಕಾಂಗ್ರಸ್ ಹಾಗೂ ಜೆಡಿಎಸ್ ಪ್ರಯತ್ನ ಮಾಡುತ್ತಿದೆ. ನಾವು ಯಾವುದೇ ಆಪರೇಷನ್ ಮಾಡುತ್ತಿಲ್ಲ. ನಾವೆಲ್ಲ ಒಟ್ಟಾಗಿದ್ದು ಮುಂದಿನ ಲೋಕಸಭೆ ಚುನಾವಣೆಯ ಸಿದ್ಧತೆ ಮಾಡುತ್ತಿದ್ದೇವೆ. ಇವೆಲ್ಲಾ ಗಾಳಿ ಸುದ್ದಿಗಳು. ಇದಕ್ಕೆಲ್ಲ ಅರ್ಥವಿಲ್ಲ ಎಂದು ಯಡಿಯೂರಪ್ಪ ಗುಡುಗಿದರು.
Advertisement
Advertisement
ಅಲ್ಲದೇ ಲೋಕಸಭೆ ಚುನಾವಣೆ ಬಗ್ಗೆ ಮಾತನಾಡಿದ ಅವರು, “ನಮ್ಮ ಶಾಸಕರೆಲ್ಲ ಒಟ್ಟಾಗಿ ಒಂದು ಕಡೆ ಸೇರಿದ್ದೇವೆ. ಕಳೆದ ಎರಡು ದಿನಗಳಿಂದ ಲೋಕಸಭೆ ಚುನಾವಣೆಗೆ ಸಂಬಂಧಿಸಿದ ರೂಪುರೇಷಗಳನ್ನು ಸಿದ್ಧಪಡಿಸುತ್ತಿದ್ದೇವೆ. ಸಂಭವನೀಯ ಅಭ್ಯರ್ಥಿಗಳು ಯಾರು? ಯಾವ ರೀತಿ ಕೆಲಸ ಮಾಡಬೇಕು? ಎನ್ನುವದರ ಬಗ್ಗೆ ಚರ್ಚೆ ಮಾಡಿದ್ದೇವೆ. ನಮ್ಮ ಗುರಿ ಹೇಗಾದರೂ ಮಾಡಿ 20 ಲೋಕಸಭೆ ಸೀಟುಗಳನ್ನು ಗೆಲ್ಲಬೇಕು. ಆ ಕಡೆ ವಿಶೇಷ ಗಮನ ಕೊಡಲು ನಿರ್ಧಾರ ಮಾಡಿದ್ದೇವೆ. ನಾಳೆ ನಮ್ಮ ಶಾಸಕರು ಬರುತ್ತಾರೆ, ಮುಂದೆ ಬರಗಾಲ ಹಾಗು ಚುನಾವಣಾ ಸಿದ್ಧತೆಯ ಬಗ್ಗೆ ಗಮನ ಹರಿಸುತ್ತಾರೆ” ಎಂದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv