ಶಿವಮೊಗ್ಗ: ಬಂಜಾರ ಜನಾಂಗದ ಬಗ್ಗೆ ಯಡಿಯೂರಪ್ಪನವರಿಗೆ (B.S.Yediyurappa) ವಿಶೇಷವಾದ ಕಾಳಜಿಯಿದೆ. ಯಡಿಯೂರಪ್ಪನವರು ಬಂಜಾರ ಸಮುದಾಯದ ಅಭಿವೃದ್ಧಿಗೆ ಸಾಕಷ್ಟು ಕೊಡುಗೆಗಳನ್ನು ನೀಡಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ಹೇಳಿದ್ದಾರೆ.
ಶಿಕಾರಿಪುರದಲ್ಲಿರುವ (Shikaripura) ಬಿಎಸ್‌ವೈ ನಿವಾಸದ ಮೇಲೆ ಕಲ್ಲುತೂರಾಟ ಪ್ರಕರಣದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪನವರ ನಿವಾಸದ ಮೇಲೆ ಕಲ್ಲು ತೂರಾಟ ನಡೆದಿದೆ. ಹೀಗಿದ್ದರೂ ಯಡಿಯೂರಪ್ಪನವರು ಕಲ್ಲು ತೂರಾಟ ನಡೆಸಿದವರ ಮೇಲೆ ಯಾವುದೇ ಕ್ರಮ ಕೈಗೊಳ್ಳಬೇಡಿ ಎಂದಿದ್ದಾರೆ. ಅಲ್ಲದೇ ಬಂಜಾರ ಸಮುದಾಯದವರ ಜೊತೆಗೂ ಮಾತನಾಡುತ್ತೇನೆ ಎಂದಿದ್ದಾರೆ. ಯಾರೋ ಕೆಲವರ ತಪ್ಪು ತಿಳುವಳಿಕೆ ಹಾಗೂ ಪ್ರಚೋದನೆಯಿಂದ ಈ ಘಟನೆ ನಡೆದಿದೆ. ರೌಡಿಲಿಸ್ಟ್‌ನಲ್ಲಿರುವ ಕೆಲವು ಜನರು ಸೇರಿ ಪ್ರಕರಣ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದರು. ಇದನ್ನೂ ಓದಿ: ಬಂಜಾರಾ, ಕೊರಚ, ಕೊರಮ, ಬೋವಿ ಶಾಶ್ವತವಾಗಿ ಎಸ್‌ಸಿ ಪಟ್ಟಿಯಲ್ಲಿರುತ್ತದೆ- ಪಿ.ರಾಜೀವ್
Advertisement
Advertisement
ಬಂಜಾರ ಸಮುದಾಯದ (Banjara Community) ಕಾರ್ಯಕರ್ತರು ಬಹಳ ದೊಡ್ಡ ರೀತಿಯಲ್ಲಿ ದೊಂಬಿ ಎಬ್ಬಿಸಿ ಕಾನೂನನ್ನು ಕೈಗೆತ್ತಿಕೊಂಡಿದ್ದಾರೆ. ಪೊಲೀಸರ ಮೇಲೂ ಹಲ್ಲೆ ನಡೆದಿರುವುದು ನನಗೆ ನೋವಾಗಿದೆ. ಪೊಲೀಸರು ತಕ್ಷಣ ಇದನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳಬೇಕು. ಯಾರೂ ಕೂಡಾ ಪ್ರಚೋದನೆಗೆ ಒಳಗಾಗಬಾರದು ಎಂದು ಮನವಿ ಮಾಡಿದರು. ಇದನ್ನೂ ಓದಿ: ಜೈ ಶ್ರೀರಾಮ್ ಎನ್ನದ್ದಕ್ಕೆ ಥಳಿಸಿ, ಗಡ್ಡ ಕತ್ತರಿಸಿದ್ರು
Advertisement
ರಾಜ್ಯ ಸರ್ಕಾರ ಜಾರಿಗೊಳಿಸಿರುವ ಯೋಜನೆ ಎಲ್ಲಾ ಸಮುದಾಯಕ್ಕೆ ಅನುಕೂಲವಾಗಲಿದೆ. ಆದರೆ ಅದನ್ನು ಅಧ್ಯಯನ ಮಾಡಿ ನೋಡಬೇಕು. ಚರ್ಚೆ ಮಾಡಬೇಕು. ಕಾನೂನು ಕೈಗೆತ್ತಿಕೊಂಡರೆ ಕ್ರಮ ತೆಗೆದುಕೊಳ್ಳಲಾಗುತ್ತದೆ, ಶಿಕ್ಷೆಯಾಗುತ್ತದೆ. ಇದು ಇಲ್ಲಿಗೆ ನಿಲ್ಲಲಿ ಎಂದು ಹೇಳಿದರು. ಇದನ್ನೂ ಓದಿ: ಜೆಡಿಎಸ್ ಜೊತೆ ಹೊಂದಾಣಿಕೆ ಪ್ರಶ್ನೆಯೇ ಇಲ್ಲ : ಸಿ.ಟಿ. ರವಿ
Advertisement