ಪೋಕ್ಸೋ ಕೇಸ್‌ – ಸತತ 2 ಗಂಟೆ ಸಿಐಡಿ ವಿಚಾರಣೆ ಎದುರಿಸಿದ ಬಿಎಸ್‌ವೈ

Public TV
1 Min Read
BS Yediyurappa 1

ಬೆಂಗಳೂರು: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಾಖಲಾಗಿದ್ದ ಪೋಕ್ಸೋ ಕೇಸ್‌ಗೆ (POCSO Case) ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ (BS Yediyurappa) ಅವರಿಂದು ಸಿಐಡಿ ವಿಚಾರಣೆ ಎದುರಿಸಿದ್ದಾರೆ.

ಬೆಂಗಳೂರಿನ ಸಿಐಡಿ ಕಚೇರಿಯಲ್ಲಿಂದು ಸತತ 2 ಗಂಟೆ ವಿಚಾರಣೆ ಎದುರಿಸಿದ್ದಾರೆ. ಪ್ರಕರಣದ ತನಿಖಾಧಿಕಾರಿ ಡಿವೈಎಸ್‌ಪಿ ಪುನೀತ್ ವಿಚಾರಣೆ ನಡೆಸಿದ್ದು, ಹಲವು ವಿಷಯಗಳ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ. ವಿಚಾರಣೆ ಮುಗಿದ ಬಳಿಕ ಬಿಎಸ್‌ವೈ ಸಿಐಡಿ ಕಚೇರಿಯಿಂದ ದವಳಗಿರಿ ನಿವಾಸಕ್ಕೆ ತೆರಳಿದ್ದಾರೆ.

BSY Home

ಏನಿದು ಕೇಸ್‌?
ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ಕಳೆದ ಮಾರ್ಚ್‌ 14ರಂದು ನೀಡಲಾಗಿದ್ದ ದೂರಿನ ಅನ್ವಯ ಪೋಕ್ಸೋ ಪ್ರಕರಣ ದಾಖಲಿಸಲಾಗಿತ್ತು. ಕಳೆದ ಫೆಬ್ರವರಿಯಲ್ಲಿ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿತ್ತು. ಈ ಸಂಬಂಧ ಸಂತ್ರಸ್ತೆಯ ತಾಯಿ ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ವಿರುದ್ಧ ಪೋಕ್ಸೊ ಮತ್ತು 354 (ಎ) ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಇದನ್ನೂ ಓದಿ: ಪ್ರತಿಭಟನೆ ವೇಳೆ ಹೃದಯಾಘಾತ – ಬಿಜೆಪಿ ಮಾಜಿ ಎಂಎಲ್‌ಸಿ ಎಂ.ಬಿ ಭಾನುಪ್ರಕಾಶ್ ನಿಧನ

ಬಳಿಕ ಈ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ಹಸ್ತಾಂತರಿಸಿತ್ತು. ಪ್ರಕರಣ ಕೈಗೆತ್ತಿಕೊಂಡಿರುವ ಸಿಐಡಿ ತನಿಖಾಧಿಕಾರಿಗಳು ನೋಟಿಸ್‌ ಜಾರಿಗೊಳಿಸಿದ್ದರು. 41(O) ಸಿಆರ್‌ಪಿಸಿ ಅಡಿಯಲ್ಲಿ ನೋಟಿಸ್ ಜಾರಿಗೊಳಿಸಲಾಗಿತ್ತು. ಈ ನಡುವೆ ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ರದ್ದು ಕೋರಿ ಯಡಿಯೂರಪ್ಪ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಬೆನ್ನಲ್ಲೇ ಸರ್ಕಾರದ ವಿಶೇಷ ಅಭಿಯೋಜಕರಾಗಿ ಅಶೋಕ್ ನಾಯ್ಕ್ ಅವರನ್ನ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.

ನೋಟಿಸ್‌ ಜಾರಿಯಾದ ಒಂದು ದಿನದ ಬಳಿಕ ಬಿಎಸ್‌ವೈ ವಿರುದ್ಧವೇ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿದ್ದರಿಂದ ಬಂಧನಕ್ಕೆ ಸಿದ್ಧತೆ ನಡೆದಿತ್ತು. ಈ ಬೆನ್ನಲ್ಲೇ ಹೈಕೋರ್ಟ್ ಬಂಧನಕ್ಕೆ ತಡೆ ನೀಡಿತ್ತು. ಇದನ್ನೂ ಓದಿ: ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಹಿಂಪಡೆಯುವವರೆಗೂ ಹೋರಾಟ: ವಿಜಯೇಂದ್ರ

Share This Article