ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ (POCSO Case) ಮುಖ್ಯಮಂತ್ರಿ ಯಡಿಯೂರಪ್ಪಗೆ (BS Yediyurappa) ಭಾಗಶಃ ರಿಲೀಫ್ ಸಿಕ್ಕಿದೆ.
ತಮ್ಮ ವಿರುದ್ಧದ ಪ್ರಕರಣವನ್ನು ರದ್ದು ಮಾಡುವಂತೆ ಹಾಗೂ ನಿರೀಕ್ಷಣಾ ಜಾಮೀನು ಮಂಜೂರು ಮಾಡುವಂತೆ ಕೋರಿ ಯಡಿಯೂರಪ್ಪ ಸಲ್ಲಿಸಿದ್ದ 2 ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್ (High Court) ಸಕ್ಷಮ ನ್ಯಾಯಾಲಯದ ಆದೇಶವನ್ನು ವಜಾ ಮಾಡಿ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಯಡಿಯೂರಪ್ಪ ಸದ್ಯಕ್ಕೆ ನಿರಾಳರಾಗಿದ್ದು ಬಂಧನ ಭೀತಿಯಿಂದ ಬಚಾವ್ ಆಗಿದ್ದಾರೆ. ಆದರೆ ತನಿಖಾಧಿಕಾರಿಗಳು ನೀಡುವ ಅಂತಿಮ ವರದಿಯ ಆಧಾರದಲ್ಲಿ ವಿಚಾರಣೆ ಮುಂದುವರೆಸುವಂತೆ ಆದೇಶ ನೀಡಿದೆ.
ಇದನ್ನೂ ಓದಿ: ಮುಡಾ ಕೇಸಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ – CBI ತನಿಖೆಗೆ ವಹಿಸಲು ಹೈಕೋರ್ಟ್ ನಕಾರ
`ಹೈ’ ತೀರ್ಪಿನಲ್ಲಿ ಏನಿದೆ?
ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಲಾಗಿದೆ. ಬಿಎಸ್‌ವೈ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವಂತಿಲ್ಲ. ಸಕ್ಷಮ ಕೋರ್ಟ್ ಸಂಜ್ಞೆ ಪರಿಗಣಿಸಿರುವ ಆದೇಶ ವಜಾಗೊಳಿಸಲಾಗಿದೆ. ಅಪರಾಧ, ತನಿಖೆ, ಅಂತಿಮ ವರದಿ ಹಾಗೆಯೇ ಉಳಿಯಲಿದೆ.
ಅಂತಿಮ ವರದಿಗೆ ಸಂಬಂಧಿಸಿ ಆದೇಶ ಮಾಡಲು ಮತ್ತೆ ಸಕ್ಷಮ ಕೋರ್ಟ್‌ಗೆ ಪ್ರಕರಣ ವರ್ಗ ಮಾಡಲಾಗಿದೆ. ಸಂಜ್ಞೆ ಆದೇಶ ಹೊರತುಪಡಿಸಿ ಉಳಿದ ಎಲ್ಲಾ ವಾದಗಳನ್ನು ಮುಕ್ತವಾಗಿ ಇರಿಸಲಾಗಿದೆ. ಅರ್ಜಿದಾರರು ಸೂಕ್ತ ವೇದಿಕೆಯಲ್ಲಿ ಪರಿಹಾರ ಪಡೆಯಬಹುದು.