ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕ ಅನ್ನೋದನ್ನ ಮರೆತಿದ್ದಾರೆ: ಬಿಎಸ್‍ವೈ

Public TV
1 Min Read
BSY 1

– ಕರ್ನಾಟಕದಲ್ಲೂ ಕಾಂಗ್ರೆಸ್ ಅಸ್ತಿತ್ವ ಕಳೆದುಕೊಳ್ಳಲಿದೆ

ಕೊಪ್ಪಳ: ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕ ಅನ್ನೋದನ್ನ ಮರೆತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಗರಂ ಆಗಿದ್ದಾರೆ.

siddu 1

ಕೊಪ್ಪಳ ಜಿಲ್ಲೆ ಕುಷ್ಟಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಇತ್ತೀಚಿಗೆ ಏನೇನೋ ಮಾತಾಡುತ್ತಿದ್ದಾರೆ. ಅವರು ವಿರೋಧ ಪಕ್ಷದ ನಾಯಕ ಅನ್ನೋದನ್ನೆ ಮರೆತಿದ್ದಾರೆ. ನಮ್ಮ ಸರ್ಕಾರ ಅಲ್ಪ ಸಂಖ್ಯಾತರ ವಿರೋಧಿ ಅಲ್ಲ, ನನ್ನ ಅವಧಿಯಲ್ಲಿ ಅಲ್ಪ ಸಂಖ್ಯಾತರ ಪರ ಅನೇಕ ಕೆಲಸ ಮಾಡಿದ್ದೇವೆ. ಬೊಮ್ಮಾಯಿ ನೇತೃತ್ವದ ಸರ್ಕಾರಕ್ಕೆ ಫುಲ್ ಮಾರ್ಕ್ಸ್ ಕೊಟ್ಟ ಯಡಿಯೂರಪ್ಪ ರಾಜ್ಯದಲ್ಲಿ ಬೊಮ್ಮಾಯಿ ಸರ್ಕಾರ ಒಳ್ಳೆ ಕೆಲಸ ಮಾಡುತ್ತಿದೆ. ಇದನ್ನ ನಾನು ಹೇಳುತ್ತಿಲ್ಲ, ಜನರು ಹೇಳುತ್ತಿದ್ದಾರೆ ಎಂದರು. ಇದನ್ನೂ ಓದಿ:  ಭಾರೀ ಮಳೆಗೆ ಕೊಚ್ಚಿ ಹೋದ ಉತ್ತರಾಖಂಡ್ ರೈಲು ಹಳಿ

Bjp congress e1632896001688

ಕಾಂಗ್ರೆಸ್ ರಾಜ್ಯ ಉಸ್ತುವಾರಿ ಸುರ್ಜೆವಾಲ್ ಏನೇನೋ ಹೇಳುತ್ತಿದ್ದಾರೆ. ದೇಶದಲ್ಲಿ ಕಾಂಗ್ರೆಸ್ ಎಲ್ಲಿದೆ ಎಂದು ಯಡಿಯೂರಪ್ಪ ಪ್ರಶ್ನೆ ಮಾಡಿದರು. ಸುರ್ಜೆವಾಲ್ ಹೀಗೆ ಮಾತಾಡಿದರೆ ಕರ್ನಾಟಕದಲ್ಲೂ ಕಾಂಗ್ರೆಸ್ ಅಸ್ತಿತ್ವ ಕಳೆದುಕೊಳ್ಳಲಿದೆ. ರಾಜ್ಯದ ಎರಡು ಕ್ಷೇತ್ರದಲ್ಲಿ ವಾತಾವರಣ ಚೆನ್ನಾಗಿದೆ. ನಾವು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

bsy 123

ಮೋದಿ ಮಾಡಿದ ಅಭಿವೃದ್ಧಿ ಕೆಲಸದಿಂದ ಮತದಾರ ನಮ್ಮ ಪರ ಇದ್ದಾರೆ. ಇನ್ನೂ ಸಲೀಂ ಹಾಗೂ ಉಗ್ರಪ್ಪ ವೀಡಿಯೋ ವಿಚಾರವಾಗಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ನಾನು ಈ ಬಗ್ಗೆ ಏನೂ ಮಾತನಾಡೋದಿಲ್ಲ. ಅವರ ಭ್ರಷ್ಟಾಚಾರ ಬಯಲಾಗಿದೆ ಎಂದು ಹೇಳಿ ಪರೋಕ್ಷವಾಗಿ ಡಿಕೆಶಿ ವಿರುದ್ಧ ಮಾಜಿ ಸಿಎಂ ಯಡಿಯೂರಪ್ಪ ಗಂಭೀರ ಆರೋಪ ಮಾಡಿದರು.

Share This Article
Leave a Comment

Leave a Reply

Your email address will not be published. Required fields are marked *