ಕೋಲಾರ: ಕುರುಡುಮಲೆ ಗಣಪತಿ ದೇವಾಲಯದ (Kurudumale Ganapati Temple) ಹುಂಡಿಗೆ 1 ಲಕ್ಷ ರೂ. ಹಣವನ್ನು ಬಿಎಸ್ ಯಡಿಯೂರಪ್ಪ (BS Yediyurappa) ಹಾಕಿ ಗಮನ ಸೆಳೆದರು.
ಸಾಮಾನ್ಯವಾಗಿ ತಿರುಪತಿ ತಿಮ್ಮಪ್ಪನ ಹುಂಡಿಗೆ ಕಂತೆ ಕಂತೆ ಹಣ ಹಾಕೋದನ್ನು ನಾವು ನೋಡಿದ್ದೇವೆ. ಆದರೆ ಇಂದು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕು ಕುರುಡುಮಲೆ ವಿನಾಯಕ ದೇವಾಲಯದ ಹುಂಡಿಗೆ ಯಡಿಯೂರಪ್ಪ 2 ಕಂತೆ ಎಂದರೆ 1 ಲಕ್ಷ ರೂ. ಹಣವನ್ನು ಹಾಕಿ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು.
ವಿನಾಯಕನ ದೇವಾಲಯದಲ್ಲಿ ಪೂಜೆ ಸಲ್ಲಿಸಲು ಆಗಮಿಸಿದ ಯಡಿಯೂರಪ್ಪ, ದೇವರ ದರ್ಶನಕ್ಕೂ ಮುನ್ನ ದೇವಾಲಯದ ಪ್ರಾಂಗಣದಲ್ಲಿದ್ದ ಹುಂಡಿಗೆ 2 ಕಂತೆ ಹಣ ಹಾಕಿದರು. ಇದು ಸಾಕಷ್ಟು ಅಚ್ಚರಿಗೆ ಕಾರಣವಾಯಿತು. ಇದನ್ನೂ ಓದಿ: ರಾಜ್ಯದ 28 ಲೋಕಸಭಾ ಸ್ಥಾನದಲ್ಲೂ ಬಿಜೆಪಿ ಗೆಲುವು ಖಚಿತ: ಕಟೀಲ್ ವಿಶ್ವಾಸ
ಯಡಿಯೂರಪ್ಪ ಕಾಂಗ್ರೆಸ್ ವಿರುದ್ಧ ಜನಾಂದೋಲನಾ ಮಾಡಲು ನಗರದಲ್ಲಿ ಚಾಲನೆ ನೀಡಿದರು. ಗೌರಿ-ಗಣೇಶ ಹಬ್ಬದ ನಂತರ ರಾಜ್ಯಾದ್ಯಂತ ಪ್ರವಾಸ ಮಾಡಲು ಈಗಾಗಲೇ ಸಿದ್ಧತೆಗಳನ್ನು ಮಾಡಲಾಗಿದೆ. ಈ ಸಂದರ್ಭದಲ್ಲಿ ಮಾಜಿ ಸಿಎಂ ಸದಾನಂದ ಗೌಡ, ಮಾಜಿ ಸಚಿವ ಅಶ್ವಥ್ ನಾರಾಯಣ, ಗೋವಿಂದ ಕಾರಜೋಳ, ಈಶ್ವರಪ್ಪ ಮತ್ತಿತರರು ಭಾಗಿಯಾಗಿದ್ದರು. ಇದನ್ನೂ ಓದಿ: ಹಣ ತೆಗೆದುಕೊಂಡು ಟಿಕೆಟ್ ಕೊಟ್ಟಿದ್ದಾರೋ ಇಲ್ವೋ? ಇದಕ್ಕೆ ಬಿಜೆಪಿಯವರೇ ಉತ್ತರ ಕೊಡಬೇಕು: ಜಗದೀಶ್ ಶೆಟ್ಟರ್
Web Stories