ಶಿವಮೊಗ್ಗ: ಪರಸ್ಪರ ಕಚ್ಚಾಡುವುದರಿಂದ ಯಾರಿಗೂ ಲಾಭವಿಲ್ಲ. ಯತ್ನಾಳ್ (Basangouda Patil Yatnal) ವಿಷಯ ಸುಸೂತ್ರವಾಗಿ ಬಗೆಹರಿಯುತ್ತದೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ (B.S Yediyurappa) ಹೇಳಿದ್ದಾರೆ.
ನಗರದಲ್ಲಿ (Shivamogga) ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ ಎಲ್ಲರೂ ಒಟ್ಟಾಗಿ ಹೋಗುವುದರಿಂದ ಸಾಧನೆ ಮಾಡಲು ಸಾಧ್ಯವಿದೆ. ಪರಸ್ಪರ ಕಚ್ಚಾಡುವುದರಿಂದ ಲಾಭವಿಲ್ಲ. ಎಲ್ಲರೂ ಕುಳಿತುಕೊಂಡು ಮಾತನಾಡಿ ಬಗೆಹರಿಸಿಕೊಳ್ಳುತ್ತೇವೆ ಎಂದಿದ್ದಾರೆ.
Advertisement
Advertisement
ಈ ಅಧಿವೇಶನದಲ್ಲಿ ಎಲ್ಲರೂ ಒಟ್ಟಾಗಿ ಈ ಸರ್ಕಾರದ ವೈಫಲ್ಯದ ವಿರುದ್ಧ ಹೋರಾಟ ಮಾಡಬೇಕು. ಇನ್ನೂ ಕಾಂಗ್ರೆಸ್ ಸಮಾವೇಶ, ಅದು ಆ ಪಕ್ಷದ ಸಮಾವೇಶ. ಅದನ್ನು ಅವರು ಮಾಡಿಕೊಳ್ಳಲಿ ಎಂದಿದ್ದಾರೆ.
Advertisement
Advertisement
ಸಿಎಂ ವಿರುದ್ಧ ಇಡಿ ತನಿಖೆ ವಿಚಾರವಾಗಿ, ಇಡಿಗೆ ಪೂರ್ತಿ ಅಧಿಕಾರ ಇದೆ. ಇಡಿ ಏನು ತೀರ್ಮಾನ ತೆಗೆದುಕೊಳ್ಳುತ್ತದೆ ಅದೇ ಅಂತಿಮ. ಸಿಎಂ ವಿರುದ್ಧ ಸಾಕ್ಷ್ಯಾಧಾರಗಳು ಸಿಕ್ಕಿವೆ. ಮುಖ್ಯಮಂತ್ರಿಯಾಗಿ ಇಡಿಯವರಿಗೆ ಗೌರವ ಕೊಡೋದು ಕಲಿಯಬೇಕು. ಇದು ಮುಖ್ಯಮಂತ್ರಿ ಅವರಿಗೆ ಶೋಭೆ ತರಲ್ಲ. ರಾಜ್ಯಪಾಲರ ಅಧಿಕಾರ ಮೊಟಕು ವಿಚಾರ, ಇದು ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಎಚ್ಚರಿಸಿದ್ದಾರೆ.