ರಾಜ್ಯದಲ್ಲೂ ಪೆಟ್ರೋಲ್‌, ಡೀಸೆಲ್‌ ದರ ಇಳಿಕೆಗೆ ಕ್ರಮವಹಿಸಿ: ಸಿಎಂಗೆ ಬಿಎಸ್‌ವೈ ಮನವಿ

Advertisements

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಲ್ಲಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಮನವಿ ಮಾಡಿದ್ದಾರೆ.

Advertisements

ಕೇಂದ್ರದಿಂದ ಪೆಟ್ರೋಲ್, ಡೀಸೆಲ್ ದರ ಇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ದೇಶದ ಜನ ಪೆಟ್ರೋಲ್, ಡೀಸೆಲ್ ದರ ಹೆಚ್ಚಾಗಿ ಸಂಕಷ್ಟಕ್ಕೊಳಗಾಗಿದ್ರು. ಇಂತಹ ಸಂದರ್ಭದಲ್ಲಿ ಪ್ರಧಾನಿಗಳು ಮುಂದಾಲೋಚನೆ ಮಾಡಿ ದರ ಇಳಿಸಿದ್ದಾರೆ ಎಂದರು. ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ಅಬಕಾರಿ ಸುಂಕ ಇಳಿಕೆ – ಹೀಗಿದೆ ಇಂದಿನ ದರ

Advertisements

ರಾಜ್ಯ ಸರ್ಕಾರಗಳೂ ಸ್ವಲ್ಪ ಸ್ವಲ್ಪವಾಗಿ ಪೆಟ್ರೋಲ್, ಡೀಸೆಲ್ ದರ ಕಮ್ಮಿ ಮಾಡಿದ್ರೆ ಜನತೆಗೆ ಇನ್ನೂ ಹೆಚ್ಚಿನ ಅನುಕೂಲ ಆಗುತ್ತೆ. ದರ ಇಳಿಕೆ ಕೆಲಸವನ್ನು ಬೊಮ್ಮಾಯಿ ಸರ್ಕಾರವೂ ಮಾಡಬೇಕೆಂದು ನಾನು ವಿನಂತಿ ಮಾಡಿಕೊಳ್ಳುತ್ತೇನೆ. ಪ್ರಧಾನಿಯವರ ಈ ಐತಿಹಾಸಿಕ ತೀರ್ಮಾನಕ್ಕೆ ಅಭಿನಂದನೆ ತಿಳಿಸುವುದಾಗಿ ಬಿಎಸ್‍ವೈ ಹೇಳಿದರು.

 

Advertisements
Advertisements
Exit mobile version