– ಬಿಜೆಪಿ-ಜೆಡಿಎಸ್ ಮೈತ್ರಿಗೆ ಭಂಗವಿಲ್ಲ ಎಂದ ಮಾಜಿ ಸಿಎಂ
ಮೈಸೂರು: ರಾಜ್ಯದಲ್ಲಿ ಭೀಕರ ಬರಗಾಲ ಬಂದಿದ್ದು, ಜನರನ್ನ ಕಿತ್ತು ತಿನ್ನುತ್ತಿದೆ. ರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿ ರೈತರಿಗೆ (Farmers) ನೆರವಾಗಬೇಕು ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ (BS Yediyurappa) ಒತ್ತಾಯಿಸಿದ್ದಾರೆ.
ಮೈಸೂರಿನಲ್ಲಿ (Mysuru) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಭೀಕರ ಬರಗಾಲ ಬಂದಿದೆ. ಕೆರೆಕಟ್ಟೆ ಬತ್ತಿಹೋಗಿದೆ, ಬರಗಾಲ ಜನರನ್ನು ಕಿತ್ತು ತಿನ್ನುತ್ತಿದೆ. ಆದ್ದರಿಂದ ರಾಜ್ಯ ಸರ್ಕಾರ ಸಾಲಮನ್ನಾ ಮಾಡಿ ರೈತರಿಗೆ ನೆರವಾಗಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಕ್ಲೀನ್ ಚಿಟ್ ಕೊಡೋಕೆ ಪ್ರಜ್ವಲ್ ಕೇಸನ್ನ ಸಿಬಿಐಗೆ ವಹಿಸಬೇಕಾ: ಎಂ.ಬಿ.ಪಾಟೀಲ್ ಪ್ರಶ್ನೆ
Advertisement
Advertisement
ಮೈತ್ರಿಗೆ ಭಂಗವಿಲ್ಲ:
ಬಿಜೆಪಿ-ಜೆಡಿಎಸ್ ಮೈತ್ರಿ ಬಿರುಕುಂಟಾಗುತ್ತಾ ಎಂಬ ಪ್ರಶ್ನೆಗೆ ಉತ್ತರಿಸಿ, ರಾಜ್ಯದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಮುಂದುವರಿಯುತ್ತೆ. ಮೈತ್ರಿಗೆ ಯಾವುದೇ ಭಂಗವಾಗುವುದಿಲ್ಲ. ವಿಧಾನಪರಿಷತ್ ಚುನಾವಣೆಯಲ್ಲೂ ಮೈತ್ರಿ ಇರುತ್ತದೆ. ಜೆಡಿಎಸ್‌ಗೆ 2 ಸ್ಥಾನ ಬಿಟ್ಟುಕೊಟ್ಟು, ನಾವು 4 ಸ್ಥಾನಗಳಲ್ಲಿ ಸ್ಪರ್ಧೆ ಮಾಡುತ್ತೇವೆ. ಎಲ್ಲೆಲ್ಲಿ ಬಿಟ್ಟುಕೊಡಬೇಕು ಎಂಬುದರ ಬಗ್ಗೆ ತೀರ್ಮಾನವಾಗಿಲ್ಲ ಎಂದು ಯಡಿಯೂರಪ್ಪ ಹೇಳಿದ್ದಾರೆ.
Advertisement
ಇದೇ ವೇಳೆ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣದ ಬಗ್ಗೆ ಮಾತನಾಡಿದ ಬಿಎಸ್‌ವೈ, ಈ ಪ್ರಕರಣ ಪಾರದರ್ಶನಕವಾಗಿ ನಡೆಯಬೇಕಿದ್ದರೆ ಸಿಬಿಐಗೆ ಕೊಡಬೇಕು. ಬಹುತೇಕ ಜನರ ಅಭಿಪ್ರಾಯ ಇದೇ ಆಗಿದೆ ಎಂದಿದ್ದಾರೆ. ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಹುಡುಕಿಕೊಟ್ಟವರಿಗೆ 1 ಲಕ್ಷ ಬಹುಮಾನ – ಪೋಸ್ಟರ್ ಅಂಟಿಸಿದ್ದವರು ಪೊಲೀಸರ ವಶಕ್ಕೆ
Advertisement
ಕಾಂಗ್ರೆಸ್‌ನಲ್ಲಿ ಪ್ರಧಾನಿಯಾಗುವ ಯೋಗ್ಯತೆ ಯಾರಿಗಿದೆ?
ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಯಡಿಯೂರಪ್ಪ, ಈ ಬಾರಿ ಬಿಜೆಪಿ 400ಕ್ಕೂ ಹೆಚ್ಚು ಸ್ಥಾನಗಳನ್ನ ಗೆದ್ದು ಮೋದಿ ಮತ್ತೆ ಪ್ರಧಾನಿಯಾಗುತ್ತಾರೆ. ಸೂರ್ಯ-ಚಂದ್ರ ಇರೋದು ಎಷ್ಟು ಸತ್ಯ ಇದು ಅಷ್ಟೆ ಸತ್ಯ. ಮುಂದೆ ಪ್ರಧಾನಿಯಾಗಿ ಏನು ಕೆಲಸ ಮಾಡಬೇಕು ಎಂಬುದನ್ನು ಮೋದಿಯವರು ಈಗಲೇ ಚಿಂತೆ ಮಾಡಿದ್ದಾರೆ. ನಾವು ರಾಜ್ಯದಲ್ಲಿ ಕನಿಷ್ಠ 24-25 ಸ್ಥಾನ ಗೆಲ್ಲುತ್ತೇನೆ. ಕಾಂಗ್ರೆಸ್ ನವರು ಏನೇ ಹೇಳಿದ್ರು ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ಕಾಂಗ್ರೆಸ್ ನಲ್ಲಿ ಪ್ರಧಾನಿಯಾಗುವ ಯೋಗ್ಯತೆ ಯಾರಿಗಿದೆ. ವಿಧಾನಸಭಾ ಚುನಾವಣೆಯಲ್ಲಿ ಬೇರೆ ಚರ್ಚೆಯಾಗಬಹುದು. ಆದ್ರೆ ಮೋದಿಯವರು ಪ್ರಧಾನಿಯಾಗಬೇಕು ಎಂಬುದು ಎಲ್ಲರ ಅಭಿಪ್ರಾಯ ಎಂದು ಯಡಿಯೂರಪ್ಪ ಹೇಳಿದ್ದಾರೆ.