ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ: ಬಿಎಸ್‍ವೈ

Public TV
1 Min Read
bs yediyurappa

ಶಿವಮೊಗ್ಗ: ರಾಜ್ಯದ ಮುಖ್ಯಮಂತ್ರಿ ಆಗಿ ಬಸವರಾಜ ಬೊಮ್ಮಾಯಿ ಅವರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ನಾಯಕತ್ವದಲ್ಲಿ ಯಾವುದೇ ರೀತಿಯ ಬದಲಾವಣೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದರು.

ಜಿಲ್ಲೆಯ ಶಿಕಾರಿಪುರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ನನಗೆ ಇರುವ ಮಾಹಿತಿ ಪ್ರಕಾರ ನಾಯಕತ್ವ ಬದಲಾವಣೆ ಇಲ್ಲ. ಇನ್ನು ಈ ಬಾರಿ ಕೆಲವು ಹಾಲಿ ಶಾಸಕರಿಗೆ ಟಿಕೆಟ್ ಇಲ್ಲ ಎನ್ನುವ ವಿಚಾರ ನನಗೆ ಗೊತ್ತಿಲ್ಲ. ಈ ಬಗ್ಗೆ ನಾನು ಸಹ ಚರ್ಚೆ ಮಾಡಲು ಹೋಗುವುದಿಲ್ಲ. ಅದೆಲ್ಲಾ ಕೇಂದ್ರದ ನಾಯಕರಿಗೆ ಬಿಟ್ಟಂತಹ ವಿಷಯ ಎಂದರು.

BASAVARAJ BOMMAI 1

ರಾಜ್ಯದ ರಾಜಕೀಯ ಪರಿಸ್ಥಿತಿ ಅವಲೋಕಿಸುವ ಸಲುವಾಗಿ ಅಮಿತ್ ಶಾ ಅವರು ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಚುನಾವಣೆ ವರ್ಷ ಆಗಿರುವುದರಿಂದ ಇನ್ನು ಮುಂದಿನ ದಿನಗಳಲ್ಲಿ ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರು ರಾಜ್ಯಕ್ಕೆ ಹೆಚ್ಚು ಗಮನ ಕೊಡಲು ನಿರ್ಧರಿಸಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: PSI ಅಕ್ರಮ – ಮಹಿಳಾ ವಿಭಾಗದ ಟಾಪರ್ ರಚನಾ ವಿರುದ್ಧ ಎಫ್‌ಐಆರ್

Amith

ರಾಜಕೀಯ ಪರಿಸ್ಥಿತಿ ಹಾಗೂ 150 ಸ್ಥಾನ ಪಡೆಯುವ ಬಗ್ಗೆ ಗುರಿ ಇದೆಯೋ ಅದರ ಬಗ್ಗೆ ಇಬ್ಬರು ಸಲಹೆ ಕೊಡುವವರಿದ್ದಾರೆ. ಪಕ್ಷದ ಸಂಘಟನೆ ಬಲಪಡಿಸಲು ರಾಜ್ಯದ ಉದ್ದಗಲಕ್ಕೂ ಈಗಾಗಲೇ ಪ್ರವಾಸ ಆರಂಭವಾಗಿದೆ. ಬರುವಂತಹ ದಿನಗಳಲ್ಲಿ ನಾನು ಹಾಗು ನಮ್ಮ ಎಲ್ಲಾ ಮುಖಂಡರು ಎಲ್ಲಾ ಜಿಲ್ಲೆಗಳಿಗೆ ಭೇಟಿ ನೀಡಿ, ಕಾರ್ಯಕರ್ತರ ಭೇಟಿ ಮಾಡುತ್ತೇವೆ. ಬೂತ್ ಮಟ್ಟದಲ್ಲಿ ಪಕ್ಷ ಬಲಪಡಿಸುತ್ತೇವೆ. ಬೂತ್ ಗೆದ್ದರೆ ರಾಜ್ಯ ಗೆದ್ದಂತೆ ಆಗುತ್ತದೆ ಎಂದರು. ಇದನ್ನೂ ಓದಿ: ಎರಡೂವರೆ ಗಂಟೆ ಸಭೆ – ರಾಜ್ಯದಲ್ಲೂ ಯುವ ಮುಖಗಳಿಗೆ ಮಣೆ?

Share This Article
Leave a Comment

Leave a Reply

Your email address will not be published. Required fields are marked *