ಶಿವಮೊಗ್ಗ : ರಾಜ್ಯದಲ್ಲಿ ಸಮೀಕ್ಷೆಗಳು ಏನೇ ಹೇಳಲಿ, 115 ಸ್ಥಾನ ಪಡೆದು ನಾವು ಸರ್ಕಾರ ರಚನೆ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (BS Yediyurappa) ವಿಶ್ವಾಸ ವ್ಯಕ್ತಪಡಿಸಿದರು.
ಜಿಲ್ಲೆಯ ಶಿಕಾರಿಪುರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಸರ್ಕಾರ ರಚನೆ ಮಾಡುವ ವಿಶ್ವಾಸ ನನಗೆ ಇದೆ. ಮತದಾನದ ನಂತರ ರಾಜ್ಯದ ಉದ್ದಗಲಕ್ಕೂ ನಮ್ಮ ಎಲ್ಲಾ ಮುಖಂಡರೊಂದಿಗೆ ನಾನು ಮಾತನಾಡಿದ್ದೇನೆ. ಎಲ್ಲರ ಅಭಿಪ್ರಾಯ ಸಂಗ್ರಹ ಮಾಡಿದ್ದೇನೆ. ಆ ಆಧಾರದ ಮೇಲೆ ಸರ್ಕಾರ ರಚನೆ ಮಾಡುವ ವಿಶ್ವಾಸ ಇದೆ ಎಂದರು.
Advertisement
Advertisement
ನಾನು ಪ್ರಚಾರಕ್ಕೆ ಹೋದಂತಹ ವೇಳೆ ಸಿಕ್ಕಂತಹ ಜನ ಬೆಂಬಲ ಎಸ್‌ಸಿ, ಎಸ್‌ಟಿಗೆ ಕೊಟ್ಟಂತಹ ಮೀಸಲಾತಿ ಗಮನಿಸಿದಾಗ ಈ ಸಮೀಕ್ಷೆಗಳಿಗೆ ಆಧಾರ ಇರುವುದಿಲ್ಲ. ನಿಶ್ಚಿತವಾಗಿ 115ಕ್ಕೂ ಹೆಚ್ಚು ಸ್ಥಾನ ಪಡೆದು ಸ್ವಂತ ಶಕ್ತಿ ಮೇಲೆ ಸರ್ಕಾರ ರಚನೆ ಮಾಡುತ್ತೇವೆ. ಕಾಂಗ್ರೆಸ್‌ನವರು ಏನೇ ಹೇಳಲಿ ಅದಕ್ಕೆ ನಾನು ಟೀಕೆ ಮಾಡುವುದಿಲ್ಲ. ಸಮೀಕ್ಷೆಗಳು ಕಾಂಗ್ರೆಸ್ (Congress) ಪರವಾಗಿ ಕೊಟ್ಟಿರುವುದು ನಿಜ. ಒಂದೆರೆಡು ಸಮೀಕ್ಷೆಗಳು ನಮ್ಮ ಪರವಾಗಿಯೂ ಇವೆ ಎಂದು ಹೇಳಿದರು.
Advertisement
ಈ ಎಲ್ಲಾ ಬೆಳವಣಿಗೆ ನೋಡಿಕೊಂಡು ಶನಿವಾರ ನಡೆಯುವ ಮತ ಎಣಿಕೆಯಲ್ಲಿ ನಾವು 115ಕ್ಕೂ ಹೆಚ್ಚು ಸ್ಥಾನ ಪಡೆಯುತ್ತೇವೆ. ಫಲಿತಾಂಶದ ನಂತರ ನಾವೆಲ್ಲ ಸೇರಿ ಒಟ್ಟಿಗೆ ಮಾತನಾಡುತ್ತೇವೆ. ಈಗ ಮಾತನಾಡುವ ಪ್ರಶ್ನೆ ಉದ್ಬವಿಸುವುದಿಲ್ಲ. ಮತ ಎಣಿಕೆ ನಂತರ ಸಂಜೆ ಅಥವಾ ಮರುದಿನ ಬೆಳಗ್ಗೆ ಮಾತನಾಡುತ್ತೇನೆ. ಮುಂದೇನು ಮಾಡಬೇಕು ಎನ್ನುವ ಬಗ್ಗೆ ಚರ್ಚಿಸುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಎಲ್ಲಾ ಕಾಲಕ್ಕೂ ಸಮೀಕ್ಷೆಗಳು ನಿಜವಾಗಲ್ಲ: ಜಿ. ಪರಮೇಶ್ವರ್
Advertisement
ನಮ್ಮನ್ನು ಬಿಟ್ಟು ಸರ್ಕಾರ ಮಾಡಲು ಆಗುವುದಿಲ್ಲ ಎಂಬ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಹೆಚ್‌ಡಿಕೆ ಹಾಗೆ ಹೇಳುವುದರಲ್ಲಿ ತಪ್ಪು ಏನಿಲ್ಲ. ನೋಡೋಣ ಈ ಫಲಿತಾಂಶ ಬಂದ ನಂತರ ತೀರ್ಮಾನ ಮಾಡೋಣ ಎಂದರು. ಇದನ್ನೂ ಓದಿ: ಇಂಡ್ಲವಾಡಿಯಲ್ಲಿ ಭೀಕರ ಅಪಘಾತ – ಬೈಕ್ ಮೇಲೆಯೇ ಹರಿದ ಟಿಪ್ಪರ್ ಲಾರಿ