ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ಅವರು ಅಧಿಕಾರದ ಮದದಿಂದ ಮಾತನಾಡುತ್ತಿದ್ದಾರೆ. ಇದು ಅವರಿಗೆ ಗೌರವ ತರುವುದಿಲ್ಲ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ (BS Yediyurappa) ತಿಳಿಸಿದ್ದಾರೆ.
ಲೋಕಸಭೆ ಚುನಾವಣೆಯ ಪೂರ್ವತಯಾರಿಗಳ ಕುರಿತು ಚರ್ಚಿಸಲು ಬಿಜೆಪಿ ಯಲಹಂಕದಲ್ಲಿರುವ ರೆಸಾರ್ಟ್‌ವೊಂದರಲ್ಲಿ ಹೈವೋಲ್ಟೇಜ್ ಸಭೆ ಹಮ್ಮಿಕೊಂಡಿದೆ. ಸಭೆಯಲ್ಲಿ ಬಿಎಸ್‌ವೈ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್ (Arun Singh), ಬಸವರಾಜ ಬೊಮ್ಮಾಯಿ, ಗೋವಿಂದ ಕಾರಜೋಳ, ವಿಶ್ವೇಶ್ವರ ಹೆಗಡೆ ಕಾಗೇರಿ, ಅರವಿಂದ್ ಲಿಂಬಾವಳಿ ಸೇರಿದಂತೆ ಅನೇಕ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ.
Advertisement
Advertisement
ಈ ಸಭೆಗೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಬಿ.ಎಸ್ ಯಡಿಯೂರಪ್ಪ ಅವರು, ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಮನೆಯಲ್ಲಿ ಫೇಕ್ ಅಂತಿರೋದು ಸಂಗೀತಾ, ಪ್ರತಾಪ್ : ಮೈಕಲ್ ಫಸ್ಟ್ ರಿಯ್ಯಾಕ್ಷನ್
Advertisement
ಡಿಜೆ ಹಳ್ಳಿ/ಕೆಜಿ ಹಳ್ಳಿ ಪ್ರಕರಣದ ಆರೋಪಿಗಳ ವಿಚಾರದಲ್ಲಿ ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯಿಸಿ, ಡಿಕೆಶಿ ಹೇಳಿದ್ದನ್ನೆಲ್ಲ ನೋಡಿದ್ದೀನಿ. ಅಧಿಕಾರ ಮದದಿಂದ ಅವರು ಏನೇನೋ ಮಾತಾಡ್ತಿದಾರೆ, ಅದು ಅವರಿಗೆ ಗೌರವ ತರೋದಿಲ್ಲ ಎಂದು ಅಸಮಾಧಾ ಹೊರಹಾಕಿದ್ದಾರೆ.
Advertisement
ಬಳಿಕ ಇಂದಿನ ಸಭೆಯಲ್ಲಿ ಲೋಕಸಭಾ ಚುನಾವಣೆಯ ಪೂರ್ವತಯಾರಿಯ ಕುರಿತು ಚರ್ಚೆ ನಡೆಸುತ್ತಿದ್ದೇವೆ. ಸಂಘಟನೆ ಬಲಪಡಿಸಲು ಪ್ರಮುಖರನ್ನು ಕರೆದಿದ್ದೇನೆ. ಅನೇಕ ಸಂಗತಿಗಳು ಅನೇಕ ಸಂಗತಿಗಳು ಚರ್ಚೆ ಆಗಲಿವೆ. ಲೋಕಸಭೆ ಸಿದ್ಧತೆ ಸೇರಿದಂತೆ ಎಲ್ಲದರ ಬಗ್ಗೆ ಚರ್ಚೆ ಆಗಲಿದೆ ಎಂದು ತಿಳಿಸಿದ್ದಾರೆ.
ಸಭೆಗೆ ಮಾಜಿ ಸಚಿವ ಸಿ.ಟಿ ರವಿ, ಶಾಸಕ ಸುನೀಲ್ ಕುಮಾರ್, ರಾಜ್ಯಾಧ್ಯಕ್ಷ ವಿಜಯೇಂದ್ರ, ಶಾಸಕ ವಿಶ್ವನಾಥ್ ಸೇರಿದಂತೆ ಮತ್ತಿರರು ಆಗಮಿಸಿದ್ದಾರೆ. ಇದನ್ನೂ ಓದಿ: ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ – ದಾಖಲೆ ಜಯದೊಂದಿಗೆ ಸತತ 5ನೇ ಬಾರಿಗೆ ಮರು ಆಯ್ಕೆ