ಕಾಂಗ್ರೆಸ್ ಸರ್ಕಾರ ಈ ನಾಡನ್ನ ಮತಾಂಧರ ಯುದ್ಧಭೂಮಿಯಾಗಿ ಮಾಡಿದೆ: ಬಿಎಸ್‌ವೈ ಕಿಡಿ

Public TV
2 Min Read
BS YEDIYURAPPA 2

ಬೆಂಗಳೂರು: ಕಾಂಗ್ರೆಸ್ ಸರ್ಕಾರ (Congress Govt.) ಕರ್ನಾಟಕದಲ್ಲಿ ಮತಾಂಧ ಶಕ್ತಿಗಳನ್ನು ಬೆಳೆಸುವ ಕೆಲಸ ಮಾಡ್ತಿದೆ. ಒಂದೇ ವರ್ಷದಲ್ಲಿ ಈ ನಾಡನ್ನ ಮತಾಂಧರ ಯುದ್ಧಭೂಮಿಯನ್ನಾಗಿ ಮಾಡಿದೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ (BS Yediyurappa) ವಾಗ್ದಾಳಿ ನಡೆಸಿದರು.

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿಂದು (Bengaluru BJP Office) ಡಿ.ವಿ ಸದಾನಂದಗೌಡ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಎಸ್‌ವೈ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಸಿದ್ದರಾಮಯ್ಯ (Siddaramaiah) ಸರ್ಕಾರದಲ್ಲಿ ಕನ್ನಡಿಗರು ಬದುಕಿನ ಗ್ಯಾರಂಟಿ ಕಳೆದುಕೊಂಡಿದ್ದಾರೆ. ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ್ ಕೊಲೆಯಾಗಿದೆ, ತಮ್ಮದೇ ಪಕ್ಷದ ಚುನಾಯಿತ ಪ್ರತಿನಿಧಿಗೆ ನ್ಯಾಯ ಒದಗಿಸುವುದು ಬಿಟ್ಟು ಆರೋಪಿ ಪರ ಸರ್ಕಾರ ನಿಂತಿದೆ ಎಂದು ಕಿಡಿ ಕಾರಿದರು. ಇದನ್ನೂ ಓದಿ: ದಲಿತ ಹೆಣ್ಣುಮಕ್ಕಳನ್ನ ಮುಸ್ಲಿಂಗೆ ಮತಾಂತರ ಮಾಡುವ ಕೆಲಸ ಆಗುತ್ತಿದೆ: ಮುನಿರತ್ನ ಆರೋಪ

ನಟಿ ಹರ್ಷಿಕಾ ಪೂಣಚ್ಚ ದಂಪತಿ ಮೇಲೆ ಹಲ್ಲೆ ಮಾಡಿ ದರೋಡೆಗೆ ಯತ್ನಿಸಿದ್ದಾರೆ. ಉಡುಪಿ ಹಾಸ್ಟೆಲ್ ವಿಡಿಯೋ ಪ್ರಕರಣ ತಾರ್ಕಿಕ ಅಂತ್ಯ ಮುಟ್ಟಿಲ್ಲ, ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದವರ ಮೇಲೆ ಯಾವ ಕ್ರಮಗಳೂ ಆಗಿಲ್ಲ. ಹೆಣ್ಣು ಮಕ್ಕಳು ರಾಜ್ಯದಲ್ಲಿ ಭಯದಿಂದ ಬದುಕುವ ವಾತಾವರಣ ನಿರ್ಮಾಣವಾಗಿದೆ. ಸರ್ಕಾರದ ಆಡಳಿತ ವೈಖರಿ ಎಲ್ಲರಿಗೂ ತಿಳಿದಿದೆ. ಸಿದ್ದರಾಮಯ್ಯ ಸರ್ಕಾರದ ಆದ್ಯತೆಗಳೇನು ಅಂತ ಇದರಿಂದ ಗೊತ್ತಾಗುತ್ತೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ, ರೈತರು, ವಿದ್ಯಾರ್ಥಿಗಳು, ಮಹಿಳೆಯರ ಬದುಕಿಗೆ ಗ್ಯಾರಂಟಿ ಇಲ್ಲದಂತಾಗಿದೆ. ಭಯೋತ್ಪಾದಕರಿಗೆ, ದರೋಡೆಕೋರರಿಗೆ, ಹಲ್ಲೆಕೋರರಿಗೆ ಈ ಸರ್ಕಾರ ಗ್ಯಾರಂಟಿ ಕೊಟ್ಟಿದೆ ಅನ್ನೋದು ಸ್ಪಷ್ಟವಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ರಾಜ್ಯದ 28 ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ – ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ವಿಶ್ವಾಸ

ಮತಾಂಧ ಶಕ್ತಿ ಬೆಳೆಸುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡ್ತಿದೆ. ಒಂದೇ ವರ್ಷದಲ್ಲಿ ನಾಡನ್ನು ಮತಾಂಧರ ಯುದ್ಧಭೂಮಿಯಾಗಿ ಮಾಡಿದೆ. 700ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಿಜೆಪಿ ಸರ್ಕಾರ ರೈತರಿಗೆ ನೀಡುತ್ತಿದ್ದ 4 ಸಾವಿರ ರೂ. ಕಿಸಾನ್ ಸಮ್ಮಾನ್ ನಿಧಿಯನ್ನು ನಿಲ್ಲಿಸಿದ್ದಾರೆ. ಇದೊಂದು ಕ್ರೂರ ಮತ್ತು ಕಲ್ಲು ಬಂಡೆಯಂಥ ಸರ್ಕಾರ. ಈಗಾಗಲೇ ಸರ್ಕಾರ ದಿವಾಳಿ ಆಗಿದೆ, ಅಭಿವೃದ್ಧಿ ಶೂನ್ಯ ಆಗಿದೆ, ನೀರಾವರಿ ಕೆಲಸಗಳು ಸ್ಥಗಿತವಾಗಿದೆ ಎಂದು ಕಿಡಿ ಕಾರಿದರು. ಇದನ್ನೂ ಓದಿ: ಟಿ20 ವಿಶ್ವಕಪ್‌: ಐರ್ಲೆಂಡ್‌, ಸ್ಕಾಟ್ಲೆಂಡ್‌ ತಂಡಗಳಿಗೆ ಕರ್ನಾಟಕದ ‘ನಂದಿನಿ’ ಪ್ರಯೋಜಕತ್ವ

Share This Article