ಶಿವಮೊಗ್ಗ: ಮಹಾತ್ಮರ ಪುತ್ಥಳಿ ಹಾಳು ಮಾಡಿರುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಮಾಜಿ ಸಿಎಂ ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿ ಉದ್ದೇಶಪೂರ್ವಕವಾಗಿ ಈ ರೀತಿ ಗಲಭೆ ಮಾಡುವ ಪ್ರಯತ್ನ ಮಾಡಿದ್ದಾರೆ. ಮಹಾತ್ಮರ ಪುತ್ಥಳಿ ಹಾಳು ಮಾಡಿರುವುದನ್ನು ಸಹಿಸಲು ಸಾಧ್ಯವಿಲ್ಲ. ನಾಳೆ ವಿಧಾನಮಂಡಲ ಅಧಿವೇಶನದಲ್ಲಿ ಈ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸುತ್ತೇವೆ. ಈಗಾಗಲೇ ಸಿಎಂ ಬೊಮ್ಮಾಯಿ ಕಠಿಣ ಕ್ರಮಕೈಗೊಳ್ಳಲು ಗೃಹ ಸಚಿವರಿಗೆ ತಿಳಿಸಿದ್ದಾರೆ ಎಂದರು. ಇದನ್ನೂ ಓದಿ: ಸಾವರ್ಕರ್‌ರನ್ನು ಭಾರತದಲ್ಲಿ ಬಿಟ್ಟರೆ ನಾವು ದೇಶ ಬಿಡಬೇಕಾಗುತ್ತೆ ಅನ್ನೋದು ಬ್ರಿಟಿಷರಿಗೆ ಗೊತ್ತಿತ್ತು: ಬೊಮ್ಮಾಯಿ
Advertisement
Advertisement
ಸುಮಾರು 24 ಜನರನ್ನು ಈಗಾಗಲೇ ಜೈಲಿಗೆ ಕಳುಹಿಸಿದ್ದೇವೆ. ಇನ್ನು ಯಾರು ಯಾರು ಇದರಲ್ಲಿ ಶಾಮೀಲು ಆಗಿದ್ದಾರೋ ಅವರೆಲ್ಲರನ್ನು ಬಂಧಿಸುವ ಕೆಲಸ ಆಗುತ್ತದೆ. ವಿಧಾನ ಮಂಡಲದಲ್ಲಿ ಸಹ ವ್ಯಾಪಕವಾಗಿ ಚರ್ಚೆ ಮಾಡಿ, ಇನ್ನು ಮುಂದೆ ಇಂತಹ ಘಟನೆ ಮರುಕಳಿಸದಂತೆ ಎಚ್ಚರ ವಹಿಸಬೇಕು ಎಂದು ಸೂಚಿಸಲಾಗಿದೆ. ಅಪರಾಧಿಗಳು ಯಾರೇ ಇರಲಿ ಶಿಸ್ತಿನ ಕ್ರಮ ಕೈಗೊಳ್ಳಲು ಎಲ್ಲಾ ಪ್ರಯತ್ನ ಮಾಡ್ತೇವೆ ಎಂದು ಭರವಸೆಯನ್ನು ನೀಡಿದರು.
Advertisement
Advertisement
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಮಾತನಾಡಿದ ಅವರು, ಸಚಿವ ಸಪುಟದ ವಿಷಯ ನನಗೆ ಗೊತ್ತಿಲ್ಲ. ಈ ಬಗ್ಗೆ ಮುಖ್ಯಮಂತ್ರಿ ಅವರನ್ನು ಕೇಳಬೇಕು. ನನಗೆ ಗೊತ್ತಿರುವ ಹಾಗೆ ಇದುವರೆಗೆ ಅಂತಹ ಯಾವುದೇ ಸುದ್ದಿ ಇಲ್ಲ ಎಂದು ತಿಳಿಸಿದರು. ಇದನ್ನೂ ಓದಿ: 10 ಲಕ್ಷ ರೂ. ವರದಕ್ಷಿಣೆ ಕೇಳಿದ ವರನಿಗೆ ಮದುವೆ ಮನೆಯಲ್ಲೇ ಬಿತ್ತು ಗುಸಾ
ವಿಜಯೇಂದ್ರ ಅವರು ಸಚಿವ ಸಂಪುಟಕ್ಕೆ ಸೇರ್ಪಡೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಇದರ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ. ಇದು ಹೈಕಮಾಂಡ್ ಗೆ, ಮುಖ್ಯಮಂತ್ರಿ ಅವರಿಗೆ ಬಿಟ್ಟಿದ್ದು ಎಂದರು. ಮತಾಂತರ ನಿಷೇಧ ಕಾಯ್ದೆ ಜಾರಿ ವಿಚಾರವಾಗಿ ಮಾತನಾಡಿದ ಅವರು, ಮತಾಂತರ ಕಾಯ್ದೆ ನಿಷೇಧ ಜಾರಿ ವಿಷಯದಲ್ಲಿ ನಮಗೆ ನೂರಕ್ಕೆ ನೂರು ಬಹುಮತ ಸಿಕ್ಕೆ ಸಿಗುತ್ತದೆ. ಮತಾಂತರ ನಿಷೇಧ ಕಾಯ್ದೆ ಅಗತ್ಯ ಇರುವಂತಹದ್ದು, ಅದನ್ನು ಜಾರಿಗೆ ತಂದೇ ತರುತ್ತೇವೆ ಎಂದು ವಿಶ್ವಾಸದ ಮಾತುಗಳನ್ನು ಆಡಿದರು.