ಶಿವಮೊಗ್ಗ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 140ಕ್ಕೂ ಹೆಚ್ಚು ಕ್ಷೇತ್ರ ಗೆದ್ದು ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕು ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸಂಕಲ್ಪ ಮಾಡಿದರು.
Advertisement
ಶಿವಮೊಗ್ಗ ಜಿಲ್ಲೆ ಸಾಗರದ ಗಾಂಧಿ ಮೈದಾನದಲ್ಲಿ ನಡೆದ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆಯ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 140ಕ್ಕೂ ಹೆಚ್ಚು ಕ್ಷೇತ್ರ ಗೆದ್ದು, ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕು ಎಂಬುದು ನನ್ನ ಸಂಕಲ್ಪ. ಆ ದಿಕ್ಕಿನಲ್ಲಿ ನಮ್ಮೆಲ್ಲಾ ಹಿರಿಯ ಮುಖಂಡರ ಜೊತೆ ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡುತ್ತೇನೆ. ಎಲ್ಲರ ಸಹಕಾರದೊಂದಿಗೆ ಪಕ್ಷವನ್ನು ಬಲಪಡಿಸಲು ಗಮನ ಕೊಡ್ತೇನೆ. ಮಹಿಳಾ ಸಂಘಟನೆ ಬಲಪಡಿಸಬೇಕಿದೆ ಎಂದು ತಿಳಿಸಿದರು. ಇದನ್ನೂ ಓದಿ: ಹಣದಾಸೆಗೆ ಅಂಧ ಸ್ನೇಹಿತನನ್ನ ಕೊಂದ ವ್ಯಕ್ತಿಗೆ ಜೀವಾವಧಿ ಶಿಕ್ಷೆ!
Advertisement
ವಿಶೇಷವಾಗಿ ಎಸ್‍ಸಿ, ಎಸ್‍ಟಿ, ಒಬಿಸಿ ಕ್ಷೇತ್ರದಲ್ಲಿ ಇನ್ನು ಹೆಚ್ಚು ಕೆಲಸ ಮಾಡಬೇಕಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಮಾಜದ ಅಭಿವೃದ್ಧಿಗೆ ವಿಶೇಷ ಗಮನ ಕೊಡಬೇಕಾಗಿದೆ. ಈ ಎಲ್ಲವನ್ನು ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೆಸರು ಬರುವ ರೀತಿಯಲ್ಲಿ ರಾಜ್ಯದಲ್ಲಿ ಪಕ್ಷವನ್ನು ಬಲಪಡಿಸಬೇಕಿದೆ. ಆ ದಿಕ್ಕಿನಲ್ಲಿ ನಮ್ಮ ಮುಖ್ಯಮಂತ್ರಿಗಳು ಕೆಲಸ ಮಾಡ್ತಿದ್ದಾರೆ. ಸಚಿವ ಸಂಪುಟದ ಸಹೋದ್ಯೋಗಿಗಳು ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡಿ ಕೆಲಸ ಮಾಡ್ತಿದ್ದಾರೆ ಎಂದು ಹೇಳಿದರು.
Advertisement
Advertisement
ಆರಗ ಜ್ಞಾನೇಂದ್ರ ಅಂತಹವರು ಗೃಹ ಸಚಿವರಾಗಿರುವುದು ನಮ್ಮ ಸೌಭಾಗ್ಯ. ಈ ಚುನಾವಣೆ ಬಹಳ ಪ್ರಾಮುಖ್ಯತೆ ಪಡೆದುಕೊಂಡಿದೆ. ಚುನಾವಣೆಯನ್ನು ಯಾರು ಹಗುರವಾಗಿ ತೆಗೆದುಕೊಳ್ಳಬಾರದು. ಮುಂದಿನ ದಿನಗಳಲ್ಲಿ ಪಕ್ಷ ಬಲಪಡಿಸಲು ಎಲ್ಲ ಕಡೆ ಓಡಾಡುತ್ತೇನೆ. ಅದಕ್ಕಾಗಿ ನಿಮ್ಮ ಸಹಕಾರ ಇರಬೇಕು ಎಂದು ಕೇಳಿಕೊಂಡರು. ಇದನ್ನೂ ಓದಿ: ಓಮಿಕ್ರಾನ್ ಇರೋ ದೇಶದ ಪ್ರಜೆಗಳ ಪ್ರವೇಶಕ್ಕೆ ನಿರ್ಬಂಧ ಹೇರಲು ಕೇಂದ್ರಕ್ಕೆ ಮನವಿ ಮಾಡಿದ್ದೇವೆ: ಸಿಎಂ
ಮೋದಿ ಅವರ ನೇತೃತ್ವದ ಸರ್ಕಾರದಿಂದ ಇಡೀ ಜಗತ್ತೆ ಅಚ್ಚರಿಪಟ್ಟುಕೊಂಡು ಭಾರತದ ಕಡೆ ನೋಡುತ್ತಿದೆ ಎಂದು ಪ್ರಶಂಸಿದರು. ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾದರೆ ಜಗತ್ತೇ ಅಚ್ಚರಿಪಡುವ ರೀತಿ ಈ ದೇಶ ಅಭಿವೃದ್ಧಿ ಆಗುತ್ತದೆ. ಅಂತಹ ಮಹಾನ್ ವ್ಯಕ್ತಿ ಈ ದೇಶದ ಪ್ರಧಾನಿ ಆಗಿರುವ ವೇಳೆ ಆ ಪಕ್ಷದ ಸದಸ್ಯರಾಗಿರುವುದೇ ನಮಗೆ ಹೆಮ್ಮೆ ತರುವ ವಿಷಯ. ಈ ಚುನಾವಣೆಯಲ್ಲಿ ಸೋಲು ನಿಶ್ಚಿತ ಎಂಬುದು ಕಾಂಗ್ರೆಸ್ಸಿನ ಸ್ನೇಹಿತರಿಗೆ ಅರ್ಥವಾಗಿದೆ ಎಂದು ಹೇಳಿದರು.