ಬೆಂಗಳೂರು: ಸ್ವಪ್ರತಿಷ್ಠೆಯಿಂದ ಹೋರಾಟ ಮಾಡುತ್ತಿರುವುದು ಅವರಿಗೆ ಶೋಭೆ ತರುವುದಿಲ್ಲ ಎಂದು ಯತ್ನಾಳ್ ತಂಡದ ವಿರುದ್ಧ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ (BS Yediyurappa) ಬೇಸರ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಹಾಗೂ ಎಲ್ಲರೂ ಕೂಡ ತಮ್ಮ ಹೋರಾಟ ಬಿಟ್ಟು ನಮ್ಮ ಜೊತೆ ಕೈಜೋಡಿಸಿ ಎಂದು ವಿಜಯೇಂದ್ರ ವಿನಂತಿ ಮಾಡಿಕೊಂಡರು. ಆದರೆ, ಅವರ ಸ್ವಪ್ರತಿಷ್ಠೆಯಿಂದ ಪ್ರತ್ಯೇಕ ಹೋರಾಟ ಮಾಡುತ್ತಿರುವುದು ಅವರಿಗೆ ಶೋಭೆ ತರುವುದಿಲ್ಲ. ಈಗಲಾದರೂ ಜಾಗೃತರಾಗಿ, ಅವರೆಲ್ಲರೂ ಸೇರಿ ಪಕ್ಷವನ್ನು ಬಲಪಡಿಸಲು ಸಹಕಾರ ಕೊಡಬೇಕೆಂದು ನಾನು ವಿನಂತಿ ಮಾಡುತ್ತೇನೆ. ನಾವು ಮನವಿ ಮಾಡುತ್ತೇವೆ. ಆದರೆ ಉಳಿದದ್ದು ಅವರಿಗೆ, ಕೇಂದ್ರ ನಾಯಕರಿಗೆ ಬಿಟ್ಟಿದ್ದು. ಇದೆಲ್ಲ ಹೈಕಮಾಂಡ್ ಗಮನಕ್ಕೂ ಬಂದಿದೆ. ಏನು ಮಾಡುತ್ತಾರೆ ನೋಡೋಣ ಎಂದು ಯತ್ನಾಳ್ ಪ್ರತ್ಯೇಕ ಹೋರಾಟವನ್ನು ಕೈಬಿಡುವಂತೆ ಮನವಿ ಮಾಡಿಕೊಂಡರು.ಇದನ್ನೂ ಓದಿ: ಬೆಂಗಳೂರಲ್ಲಿ ಚಾಕು ಇರಿದು ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
ಉಪಚುನಾವಣಾ ವಿಚಾರವಾಗಿ ಮಾತನಾಡಿ, ಮೂರು ಉಪಚುನಾವಣೆಗಳಲ್ಲಿ ನಿರೀಕ್ಷೆ ಮೀರಿ ನಮಗೆ ಹಿನ್ನಡೆಯಾಗಿದೆ. ಏನು ಕೊರತೆ ಆಗಿದೆ ಎನ್ನುವ ಕುರಿತು ಎಲ್ಲರೂ ಕೂತು ಚರ್ಚೆ ಮಾಡುತ್ತೇವೆ. ಇನ್ನೂ ಮುಂದೆ ಹೀಗಾಗದಂತೆ ಎಚ್ಚರಿಕೆ ವಹಿಸುತ್ತೇವೆ. ಸೋಲಿಗೆ ಯಡಿಯೂರಪ್ಪ, ವಿಜಯೇಂದ್ರ ಕಾರಣ ಎನ್ನುವ ಪ್ರಶ್ನೆ ಬರಲ್ಲ. ಎಲ್ಲರೂ ಸೇರಿ ಜವಾಬ್ದಾರಿ ಹೊರಬೇಕಾಗುತ್ತದೆ. ಏನು ಲೋಪ ಆಗಿದೆ ಎಂದು ಚರ್ಚೆ ಮಾಡುತ್ತೇವೆ ಎಂದು ಪ್ರತಿಕ್ರಿಯೆ ನೀಡಿದರು.
ಇನ್ನೂ ಸಂವಿಧಾನ ದಿನದ ಬಗ್ಗೆ ಮಾತನಾಡಿ, ಇಂದು ಸಂವಿಧಾನ ದಿನ. ಇದು ಅಂಬೇಡ್ಕರ್ ಕೊಟ್ಟಂತಹ ಸಂವಿಧಾನ. ಇಡೀ ವಿಶ್ವವೇ ಅಚ್ಚರಿ ಪಡುವಂತಹ ಸಂವಿಧಾನವನ್ನು ಅಂಬೇಡ್ಕರ್ ನಮಗೆ ಕೊಟ್ಟಿದ್ದಾರೆ. ಆದ ಕಾರಣ ನಾವು ದೇಶದಲ್ಲಿ ಸಂವಿಧಾನ ದಿನ ಆಚರಣೆ ಮಾಡುತ್ತಿದ್ದೇವೆ ಎಂದು ಹೇಳಿದರು.ಇದನ್ನೂ ಓದಿ: ಓದುವುದರಲ್ಲಿ ನಶೆ ಕಂಡುಕೊಳ್ಳಿ, ಮಾದಕ ವಸ್ತುವಿನ ನಶೆ ಬೇಡ: ವಿದ್ಯಾರ್ಥಿಗಳಿಗೆ ಶಿವಣ್ಣ ಸಲಹೆ