ಬೆಂಗಳೂರು: ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷಸ ಬಿಎಸ್ ಯಡಿಯೂರಪ್ಪಗೆ ಮತ್ತೊಂದು ಶಾಕ್ ಸಿಕ್ಕಿದೆ.
ಬಿಎಸ್‍ವೈ ವಿರುದ್ಧದ 15 ಡಿನೋಟಿಫಿಕೇಷನ್ ಪ್ರಕರಣದಲ್ಲಿ ಸಿರಾಜಿನ್ ಬಾಷ ಕಾನೂನು ಹೋರಾಟಕ್ಕೆ ರಾಜ್ಯ ಸರ್ಕಾರ ಕೈ ಜೋಡಿಸಿದೆ. ಬಾಷಾ ಸಲ್ಲಿಸಿದ್ದ ಅರ್ಜಿ ಜೊತೆ ರಾಜ್ಯ ಸರ್ಕಾರ ಕೂಡ ಮೇಲ್ಮನವಿ ಸಲ್ಲಿಸಿದ್ದು, ಎರಡೂ ಅರ್ಜಿಗಳನ್ನ ಸುಪ್ರೀಂಕೋರ್ಟ್ ಒಟ್ಟಾಗಿ ವಿಚಾರಣೆ ನೆಡಸಲಿದೆ.
Advertisement
ರಾಜ್ಯ ಸರ್ಕಾರದ ಮನವಿ ಮೇಲೆ ಸುಪ್ರೀಂಕೋರ್ಟ್ ವಿಚಾರಣೆಗೆ ಒಪ್ಪಿದೆ. ರಾಜ್ಯ ಸರ್ಕಾರದ ಪರ ಹಿರಿಯ ವಕೀಲ ಕಪಿಲ್ ಸಿಬಲ್ ವಾದಿಸಲಿದ್ದಾರೆ.
Advertisement
ಬಿಎಸ್‍ವೈ ವಿರುದ್ಧದ ಹದಿನೈದು ಪ್ರಕರಣಗಳನ್ನು ಹೈಕೋರ್ಟ್ ವಜಾಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ತೀರ್ಪು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು.
Advertisement
#arkavathylayout ಡಿನೋಟಿಫಿಕೇಷನ್ ಕೇಸ್: ಸಿಎಂ ಸಿದ್ದರಾಮಯ್ಯಗೆ ಕ್ಲೀನ್‍ಚಿಟ್? https://t.co/zOAdn0qDXn #siddaramaiah #karnataka #Bengaluru pic.twitter.com/MYH5PZ1Uqc
— PublicTV (@publictvnews) August 23, 2017