ಬೆಂಗಳೂರು: ಬಿ.ಎಸ್ ಯಡಿಯೂರಪ್ಪ ಅವರು ಇಷ್ಟು ಕೀಳುಮಟ್ಟದ ರಾಜಕೀಯ ಮಾಡುವುದು ಸರಿಯಲ್ಲ ಎಂದು ಡಿಸಿಎಂ ಜಿ. ಪರಮೇಶ್ವರ್ ವಾಗ್ದಾಳಿ ನಡೆಸಿದ್ದಾರೆ.
ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ನಾವು ಇನ್ನೂ ಯಾವುದೇ ಅಜೆಂಡಾ ಮಾಡಿಕೊಂಡಿಲ್ಲ. ಆದರೆ ಮುಂದಿನ ಲೋಕಸಭೆ ಚುನಾವಣೆಯ ತಯಾರಿಗಾಗಿ ಹಾಗೂ ಅವರವರ ಕ್ಷೇತ್ರದ ತಯಾರಿ ಬಗ್ಗೆ ಚರ್ಚೆ ಮಾಡುತ್ತೇವೆ. ಇದರ ಜೊತೆಗೆ ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ಮಾಡುತ್ತೇವೆ. ನಮ್ಮ ಶಾಸಕರ ಜೊತೆ ನಾವು ಮಾತನಾಡಿದ್ದೇವೆ. ಎಲ್ಲರೂ ಸಭೆಗೆ ಬರುತ್ತಾರೆ ಎನ್ನುವ ವಿಶ್ವಾಸವಿದೆ ಎಂದರು.
Advertisement
Advertisement
ಸಿಎಲ್‍ಪಿ ಸಭೆಯಲ್ಲಿ ಕಾಂಗ್ರೆಸ್ ಬಣ್ಣ ಬಯಲಾಗುತ್ತೆ ಎಂಬ ಯಡಿಯೂರಪ್ಪ ಹೇಳಿಕೆಗೆ ಪರಮೇಶ್ವರ್ ಟಾಂಗ್ ಕೊಟ್ಟಿದ್ದಾರೆ. ಪಾಪ ಯಡಿಯೂರಪ್ಪ ಅವರನ್ನು ಭಾರತೀಯ ಜನತಾ ಪಾರ್ಟಿಯ ಅಧ್ಯಕ್ಷರನ್ನಾಗಿ ಮಾಡಿದ್ದಾರೆ. ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಅಲ್ಲ. ಅವರು ತಮ್ಮ ಪಕ್ಷದ ಶಾಸಕರನ್ನು ನೋಡಿಕೊಳ್ಳಲಿ. ಬಿಎಸ್‍ವೈ ಅವರು ತಮ್ಮ ಶಾಸಕರನ್ನು ಕರೆದುಕೊಂಡು ಹೋಗಿ ಎಲ್ಲಿಯೋ ಇಟ್ಟಿದ್ದಾರೆ. ಅವರಿಗೆ ನಮ್ಮ ಪಕ್ಷದ ಶಾಸಕರ ಚಿಂತೆ ಬೇಡ ಎಂದರು.
Advertisement
ಬೆಜೆಪಿಯವರು ನಮ್ಮ ಶಾಸಕರನ್ನು ಸೆಳೆಯುವ ಕೆಲಸ ಮಾಡಿದ್ದರು ಹಾಗೂ ಮಾಡುತ್ತಲೇ ಇದ್ದಾರೆ. ಅದರಲ್ಲಿ ಅವರು ಯಶಸ್ವಿಯಾಗಲ್ಲ ಎಂದು ನಾವು ಹೇಳುತ್ತಿದ್ದರೂ ಅವರಿಗೆ ಅದು ಅರ್ಥವಾಗುತ್ತಿಲ್ಲ. ಅವರು ಮಾತ್ರ ಇನ್ನೂ ಬಹಳ ಆಸೆ ಇಟ್ಟುಕೊಂಡಿದ್ದಾರೆ ಎಂದು ಪ್ರತಿಕ್ರಿಯಿಸಿದರು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv