ಭುವನೇಶ್ವರ: ಜೂನ್ 21ರಂದು ನಡೆಯುವ 5ನೇ ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಭಾರತೀಯ ಭದ್ರತಾ ಪಡೆಯ ಯೋಧರು ಒಡಿಶಾದ ನಕ್ಸಲ್ ಪೀಡಿತ ಪ್ರದೇಶದಲ್ಲಿ ಯೋಗಾಭ್ಯಾಸ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.
ಹೌದು. ಸದಾ ದೇಶದ ರಕ್ಷಣೆಯಲ್ಲಿ ತೊಡಗಿರುವ ಭಾರತೀಯ ಭದ್ರತಾ ಪಡೆಯು ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಯೋಗಾಭ್ಯಾಸ ಮಾಡುತ್ತಿದೆ. ಸಾಮಾನ್ಯ ಪ್ರದೇಶದಲ್ಲಿ ಯೋಧರು ಯೋಗಾಭ್ಯಾಸ ಮಾಡಿದರೆ ಅಷ್ಟೇನು ಸುದ್ದಿಯಾಗುತ್ತಿರಲಿಲ್ಲ. ಆದರೆ ನಮ್ಮ ಕೆಚ್ಚೆದೆಯ ಯೋಧರು ನಕ್ಸಲ್ ಪೀಡಿತ ಪ್ರದೇಶದಲ್ಲಿ ಅಂತರಾಷ್ಟ್ರೀಯ ಯೋಗ ದಿನಕ್ಕೆ ಯೋಗಾಭ್ಯಾಸ ಮಾಡಿ ತಯಾರಿ ನಡೆಸುತ್ತಿರುವ ಮೂಲಕ ಎಲ್ಲರ ಮನ ಗೆದ್ದಿದ್ದಾರೆ.
Advertisement
Advertisement
5 ಸಾವಿರ ವರ್ಷದ ಇತಿಹಾಸವಿರುವ ಯೋಗಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ಸ್ಥಾನಮಾನ ನೀಡಲು 2014ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವ ಯೋಗ ದಿನವನ್ನು ಜೂನ್ 21ರಂದು ಆಚರಿಸಬೇಕು ಎಂದು ಮನವಿ ಮಾಡಿದ್ದರು. ಈ ಮನವಿಯಂತೆ ಜೂನ್ 21 2014ರಿಂದ ಪ್ರತಿ ವರ್ಷ ವಿಶ್ವ ಯೋಗ ದಿನವನ್ನು ಯಶಸ್ವಿಯಾಗಿ ಎಲ್ಲಡೆ ಆಚರಿಸಲಾಗಿದೆ.
Advertisement
Advertisement
ಕಳೆದ ಬಾರಿ 4ನೇ ವಿಶ್ವ ಯೋಗ ದಿನದ ಕಾರ್ಯಕ್ರಮವನ್ನು ಡೆಹ್ರಾಡೂನ್‍ನಲ್ಲಿ ಆಚರಿಸಲಾಗಿತ್ತು. ಆ ಕಾರ್ಯಕ್ರಮದಲ್ಲಿ ಮೋದಿ ಅವರು ಕೂಡ ಪಾಲ್ಗೊಂಡಿದ್ದರು. ಹಾಗೆಯೇ ಈ ಬಾರಿ ಜಾರ್ಖಂಡ್‍ನ ರಾಂಚಿಯಲ್ಲಿ ವಿಶ್ವ ಯೋಗ ದಿನವನ್ನು ಆಚರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
Border Security Force (BSF) troopers perform Yoga in Naxal affected areas of Odisha. #YogaDay2019 pic.twitter.com/01DsEuzl58
— ANI (@ANI) June 16, 2019