ಛತ್ತೀಸಗಢ: ಪಾಕಿಸ್ತಾನದ ಸ್ವಾತಂತ್ರ್ಯೋತ್ಸವದ ಅಂಗವಾಗಿ ಭಾರತದ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಹಾಗೂ ಪಾಕಿಸ್ತಾನದ ರೇಂಜರ್ಸ್ ಪರಸ್ಪರ ಸಿಹಿ ಹಂಚಿಕೊಂಡು ಶುಭಾಶಯ ಕೋರಿದರು.
ಭಾನುವಾರ ಪಾಕಿಸ್ತಾನದ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಈ ಸಂದರ್ಭದಲ್ಲಿ ಅಮೃತಸರದ ಅಟ್ಟಾರಿ-ವಾಘಾ ಗಡಿಯಲ್ಲಿ ಪಾಕಿಸ್ತಾನ ರೇಂಜರ್‌ಗಳು ಮತ್ತು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಹಿ ವಿನಿಮಯ ಮಾಡಿಕೊಂಡರು. ಇದನ್ನೂ ಓದಿ: ಓಂ ಜೈ ಜಗದೀಶ್ ಹರೇ ಭಕ್ತಿಗೀತೆ ಹಾಡಿದ 75ನೇ ಸ್ವಾತಂತ್ರ್ಯೋತ್ಸವದ ಅತಿಥಿ ಅಮೆರಿಕ ಗಾಯಕಿ – ವೀಡಿಯೋ ವೈರಲ್
Advertisement
Advertisement
ಭಾರತವು ಸೋಮವಾರ 75ನೇ ಸ್ವಾತಂತ್ರ್ಯೋತ್ಸವ ಆಚರಿಸಿಕೊಳ್ಳಲಿದೆ. ಈ ಬಾರಿ ಸ್ವಾತಂತ್ರ್ಯೋತ್ಸವಕ್ಕೆ ಭಾರತೀಯ ಸಾಂಸ್ಕೃತಿಕ ಸಂಬಂಧಿ ಕೌನ್ಸಿಲ್ (ಐಸಿಸಿಆರ್) ಅತಿಥಿಯಾಗಿ ಆಫ್ರಿಕಾ ಮೂಲದ ಅಮೆರಿಕ ಗಾಯಕಿ ಮೇರಿ ಮಿಲಬೆನ್ ಅವರನ್ನು ಆಹ್ವಾನಿಸಲಾಗಿದೆ.
Advertisement
Advertisement
ಬ್ರಿಟಿಷರು 1947ರಲ್ಲಿ ಸ್ವಾತಂತ್ರ್ಯ ನೀಡಿದ ಸಂದರ್ಭದಲ್ಲಿ ಭಾರತೀಯ ಉಪಖಂಡವನ್ನು ಭಾರತ ಮತ್ತು ಪಾಕಿಸ್ತಾನ ಎಂಬುದಾಗಿ ವಿಭಜಿಸಲಾಯಿತು. ಪಾಕಿಸ್ತಾನವು ಆಗಸ್ಟ್ 14 ರಂದು ಸ್ವಾತಂತ್ರ್ಯ ದಿನವನ್ನು ಆಚರಿಸುತ್ತದೆ. ಭಾರತ ಆಗಸ್ಟ್ 15ರಂದು ಸ್ವಾತಂತ್ರ್ಯೋತ್ಸವ ಆಚರಿಸುತ್ತದೆ. ಇದನ್ನೂ ಓದಿ: ಕಾಶ್ಮೀರದಲ್ಲಿ ಇನ್ನು ಭಾರತದ ಧ್ವಜ ಮಾತ್ರ ಹಾರುತ್ತದೆ, ಪಾಕ್ ಧ್ವಜ ಇತಿಹಾಸ ಮಾತ್ರ: ಮನೋಜ್ ಸಿನ್ಹಾ