ಪಂಜಾಬ್| ಹೆರಾಯಿನ್, ಪಿಸ್ತೂಲ್ ಸಾಗಿಸುತ್ತಿದ್ದ ಪಾಕ್ ಡ್ರೋನ್ ಹೊಡೆದುರುಳಿಸಿದ ಬಿಎಸ್‌ಎಫ್

Public TV
1 Min Read
punjab BSF Shoots Down pak drone

ಚಂಡೀಘಡ: ಪಂಜಾಬ್‌ನ (Punjab) ಫಿರೋಜ್‌ಪುರದಲ್ಲಿ ಹೆರಾಯಿನ್ ಮತ್ತು ಪಿಸ್ತೂಲ್ ಸಾಗಿಸುತ್ತಿದ್ದ ಪಾಕಿಸ್ತಾನದ (Pakistan) ಡ್ರೋನ್ ಅನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಹೊಡೆದುರುಳಿಸಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಚೀನಾದಲ್ಲಿ ತಯಾರಾದ ಡಿಜೆಐ ಮಾವಿಕ್ 3 ಕ್ಲಾಸಿಕ್ ಡ್ರೋನ್ 500 ಗ್ರಾಂ ಹೆರಾಯಿನ್, ಪಿಸ್ತೂಲ್ ಹೊತ್ತೊಯ್ಯುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಭಾರತೀಯ ವಾಯುಪ್ರದೇಶವನ್ನು ಉಲ್ಲಂಘಿಸಿದ ಪಾಕಿಸ್ತಾನದ ಡ್ರೋನ್ ಅನ್ನು ಬಿಎಸ್‌ಎಫ್ ಪಂಜಾಬ್ ಪೊಲೀಸ್ ಪಡೆ ತಡೆದಿವೆ. ಬಿಎಸ್‌ಎಫ್ ಸಿಬ್ಬಂದಿ ತಕ್ಷಣವೇ ಡ್ರೋನ್ ಮೇಲೆ ಗುಂಡು ಹಾರಿಸಿದ್ದಾರೆ. ನಂತರ ತಾಂತ್ರಿಕ ಕ್ರಮಗಳನ್ನು ಬಳಸಿಕೊಂಡು ಅದನ್ನು ಕೆಳಗಿಳಿಸಿದರು’ ಎಂದು ಬಿಎಸ್‌ಎಫ್ ಪಂಜಾಬ್ ಫ್ರಾಂಟಿಯರ್ ಟ್ವೀಟ್ ಮಾಡಿದೆ. ಇದನ್ನೂ ಓದಿ: ಮಲ್ಪೆಯಲ್ಲಿ ಅಕ್ರಮವಾಗಿ ನೆಲೆಸಿದ್ದ 7 ಬಾಂಗ್ಲಾ ಪ್ರಜೆಗಳು ಅರೆಸ್ಟ್‌

ಬಿಎಸ್‌ಎಫ್ ಈ ಹಿಂದೆ ಪಂಜಾಬ್‌ನಲ್ಲಿ ಹಲವು ಪಾಕಿಸ್ತಾನಿ ಡ್ರೋನ್‌ಗಳನ್ನು ಹೊಡೆದುರುಳಿಸಿದೆ. ಮಾರ್ಚ್‌ನಲ್ಲಿ  ಅಮೃತಸರ ಬಳಿ ಪಂಜಾಬ್ ಪೊಲೀಸರು ಎರಡು ಪಾಕಿಸ್ತಾನಿ ನಿರ್ಮಿತ ಡ್ರೋನ್‌ಗಳನ್ನು ವಶಪಡಿಸಿಕೊಂಡಿದ್ದರು. ಫೆಬ್ರವರಿಯಲ್ಲಿ ಗುರುದಾಸ್‌ಪುರ ಜಿಲ್ಲೆಯ ಭಾರತ-ಪಾಕಿಸ್ತಾನ ಗಡಿಯ ಬಳಿ ಚೀನಾ ನಿರ್ಮಿತ ಮತ್ತೊಂದು ಡ್ರೋನ್ ಅನ್ನು ಹೊಡೆದುರುಳಿಸಲಾಗಿದೆ. ಇದನ್ನೂ ಓದಿ: ಬಾಲಸೋರ್ ಅಪಘಾತದ ಬಳಿಕವೂ ಸರ್ಕಾರ ಎಚ್ಚೆತ್ತುಕೊಂಡಿಲ್ಲ: ಕೇಂದ್ರದ ವಿರುದ್ಧ ರಾಹುಲ್‌ ಗಾಂಧಿ ಕಿಡಿ

Share This Article