ನವದೆಹಲಿ: ಅಕ್ರಮವಾಗಿ ಗಡಿ ದಾಟಲು ಯತ್ನಿಸುತ್ತಿದ್ದ ಪಾಕಿಸ್ತಾನದ ನುಸುಳುಕೋರನೊಬ್ಬನನ್ನು (Pakistani Intruder) ಗಡಿ ಭದ್ರತಾ ಪಡೆ (BSF) ಹೊಡೆದುರುಳಿಸಿದ ಘಟನೆ ಪಠಾಣ್‌ಕೋಟ್‌ನಲ್ಲಿರುವ (Pathankot) ಅಂತಾರಾಷ್ಟ್ರೀಯ ಗಡಿಯಲ್ಲಿ ನಡೆದಿದೆ.
ಪಠಾಣ್‌ಕೋಟ್‌ನ ಗಡಿ ಪ್ರದೇಶದ ಬಿಒಪಿ ತಾಶ್‌ಪತನ್‌ನಲ್ಲಿ ಈ ಘಟನೆ ನಡೆದಿದೆ. ಈ ಭಾಗದಲ್ಲಿ ನಿಯೋಜಿಸಿದ್ದ ಬಿಎಸ್‌ಎಫ್ ಸಿಬ್ಬಂದಿ ನುಸುಳುಕೋರನ ಚಲನವಲನಗಳನ್ನು ಗಮನಿಸಿ ಅನುಮಾನಗೊಂಡಿದ್ದಾರೆ. ಇದನ್ನೂ ಓದಿ: ಪತ್ನಿ ಕೊಲೆ ಮಾಡಿ ಅಂತ್ಯಕ್ರಿಯೆ – ಕೊನೆ ಕ್ಷಣದಲ್ಲಿ ಎಂಟ್ರಿ ಕೊಟ್ಟ ಪೊಲೀಸರು, ಅರೆಸ್ಟ್ ಆದ ಗಂಡ
Advertisement
ತಕ್ಷಣವೇ ಕಾರ್ಯಪ್ರವೃತ್ತರಾದ ಬಿಎಸ್‌ಎಫ್ ಪಡೆ ನುಸುಳುಕೋರನಿಗೆ ಎಚ್ಚರಿಕೆ ನೀಡಿದೆ. ಹಲವು ಬಾರಿ ಎಚ್ಚರಿಕೆ ನೀಡಿದ ಬಳಿಕವೂ ನುಸುಳುಕೋರ ಗಡಿ ದಾಟಲು ಪ್ರಯತ್ನಿಸಿದ್ದಾನೆ. ಈ ವೇಳೆ ಬಿಎಸ್‌ಎಫ್ ಸಿಬ್ಬಂದಿ ಆತನನ್ನು ಗುಂಡಿಕ್ಕಿ ಕೊಂದಿದ್ದಾರೆ. ಇದನ್ನೂ ಓದಿ: ಶ್ರೀ ಸಾಯಿ ಮಿನರಲ್ಸ್ ಗಣಿಗಾರಿಕೆ ಅಕ್ರಮ ಕೇಸ್ – ಹೆಚ್‌ಡಿಕೆ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿದ SIT
Advertisement
Advertisement
ಒಳನುಸುಳುವಿಕೆಗೆ ಕಾರಣ ಮತ್ತು ಅದರ ಗುರುತು ಪತ್ತೆ ಹಚ್ಚಲು ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ. ಇದನ್ನೂ ಓದಿ: ಹೇಮಾವತಿ ಎಡದಂಡೆ ನಾಲೆಗಳಿಗಿಲ್ಲ ನೀರು – ಕೆ.ಆರ್ ಪೇಟೆ, ನಾಗಮಂಗಲ ರೈತರು ಕಂಗಾಲು
Advertisement