ಧಾರವಾಡ: ಅನಾರೋಗ್ಯದಿಂದ ಬಳಲುತ್ತಿದ್ದ ಬಿಎಸ್‌ಎಫ್ ಯೋಧರೊಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ಧಾರವಾಡದಲ್ಲಿ ನಡೆದಿದೆ.
ಮಂಜುನಾಥ ಕುಂದರಗಿ (33) ಮೃತ ಬಿಎಸ್‌ಎಫ್ ಯೋಧ. ಇವರು ಮೂಲತಃ ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ನಿವಾಸಿ. ಇದನ್ನೂ ಓದಿ: ಅಗ್ನಿವೀರರಿಗೆ 10% ಮೀಸಲಾತಿ – ಸ್ವಂತ ಉದ್ಯಮ ಆರಂಭಿಸುವವರಿಗೆ 5 ಲಕ್ಷ ರೂ. ವರೆಗೆ ಬಡ್ಡಿ ರಹಿತ ಸಾಲ: ಸಿಎಂ ಘೋಷಣೆ
ಒಡಿಶಾದಲ್ಲಿ ಕರ್ತವ್ಯದಲ್ಲಿದ್ದ ಮಂಜುನಾಥ ಅವರು ಜುಲೈ 4ರಂದು ರಜೆ ಮೇಲೆ ಮನೆಗೆ ಬಂದಿದ್ದರು. ಮನೆಗೆ ಬಂದ ಒಂದೆರಡು ದಿನಗಳಲ್ಲೇ ಜ್ವರ ಕಾಣಿಸಿಕೊಂಡಿದೆ. ಬಳಿಕ ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಇದನ್ನೂ ಓದಿ: ಉಡುಪಿಯ ಹಲವೆಡೆ ನೆರೆ ಪರಿಸ್ಥಿತಿ; ಹಾಸನ, ಕೊಡಗಿನನಲ್ಲಿ ಭೂಕುಸಿತದ ಅವಾಂತರ; ಕಪಿಲಾ ನದಿ ತೀರದಲ್ಲೂ ಪ್ರವಾಹ ಭೀತಿ!
ಚಿಕಿತ್ಸೆ ಪಡೆದ ನಂತರವೂ ಜ್ವರ ತೀವ್ರಗೊಂಡ ಹಿನ್ನೆಲೆ ಧಾರವಾಡದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಕೊನೆಗೆ ಚಿಕಿತ್ಸೆ ಫಲಕಾರಿಯಾಗದೇ ಬುಧವಾರ (ಜು.17) ಸಂಜೆ ಸಾವನ್ನಪ್ಪಿದ್ದಾರೆ. ಗುರುವಾರ (ಜು.18) ರಂದು ಸಂಜೆ ಸವದತ್ತಿಯಲ್ಲಿ ಅಂತ್ಯಕ್ರಿಯೆ ನೇರವೇರಲಿದೆ. ಇದನ್ನೂ ಓದಿ: ಏರೋಸ್ಪೇಸ್ ಕ್ಷೇತ್ರದಲ್ಲಿ ಲಕ್ಷ ಮಂದಿಗೆ ತರಬೇತಿ, 60,000 ಕೋಟಿ ಹೂಡಿಕೆಯ ಗುರಿ – ಪ್ರಿಯಾಂಕ್ ಖರ್ಗೆ