ಕಾಶ್ಮೀರದಲ್ಲಿ ಮತ್ತೆ ಪಾಕ್‍ನಿಂದ ಗುಂಡಿನ ದಾಳಿ: ಬಿಎಸ್‍ಎಫ್ ಯೋಧ ಹುತಾತ್ಮ

Public TV
1 Min Read
jammu 1

ಶ್ರೀನಗರ: ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘಿಸಿ ನಡೆಸಿಸಿದ ಅಪ್ರಚೋದಿತ ಗುಂಡಿನ ದಾಳಿಗೆ ಬಿಎಸ್‍ಎಫ್ ಯೋಧರೊಬ್ಬರು ಹುತಾತ್ಮರಾಗಿದ್ದಾರೆ.

ಶುಕ್ರವಾರ ಮುಂಜಾನೆ ಜಮ್ಮು ಮತ್ತು ಕಾಶ್ಮೀರದ ಆರ್.ಎಸ್.ಪುರದ ಬಳಿಯಿರುವ ಅರ್ನಿಯಾ ಅಂತಾರಾಷ್ಟ್ರೀಯ ಗಡಿ ಪ್ರದೇಶ ದಲ್ಲಿ ಏಕಾಏಕಿ ಭಾರತೀಯ ಸೇನೆ ಮೇಲೆ ಗುಂಡಿನ ದಾಳಿ ನಡೆಸಿತ್ತು. ಈ ದಾಳಿಯಲ್ಲಿ ಉತ್ತರಪ್ರದೇಶ ಮೂಲಕದ ಬಿಎಸ್‍ಎಫ್ ಕಾನ್‍ಸ್ಟೇಬಲ್ ಬ್ರಿಜೇಂದ್ರ ಬಹದ್ದೂರ್ ಸಿಂಗ್ ಹುತಾತ್ಮರಾಗಿದ್ದಾರೆ.

ಪಾಕ್ ದಾಳಿಯಲ್ಲಿ ಒಬ್ಬರು ನಾಗರಿಕರು ಗಾಯಗೊಂಡಿದ್ದಾರೆ. ಇದು ಐದು ದಿನಗಳಲ್ಲಿ ಆರನೇ ಬಾರಿ ಕದನ ವಿರಾಮವನ್ನು ಪಾಕಿಸ್ತಾನ ಉಲ್ಲಂಘನೆ ಮಾಡಿದೆ ಎಂದು ಬಿಎಸ್‍ಎಫ್ ಮೂಲಗಳು ಹೇಳಿವೆ.

ಪಾಕ್ ದಾಳಿಗೆ ಪತ್ರಿಯಾಗಿ ಭಾರತೀಯ ಸೇನೆಯು ಗುಂಡಿನ ದಾಳಿ ನಡೆಸಿದೆ. ಗುಂಡಿನ ಚಕಮಕಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ಪ್ರದೇಶದಲ್ಲಿರುವ ಜನರು ಭಯಗೊಂಡಿದ್ದಾರೆ.

 

Share This Article