ಲಕ್ನೋ: ನಾನು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಬಹುಜನ ಸಮಾಜ ಪಕ್ಷದ (ಬಿಎಸ್‍ಪಿ) ನಾಯಕಿ ಮಾಯಾವತಿ ಸ್ಪಷ್ಟನೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಮಾಯಾವತಿ ಅವರು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲವೆಂದು ನಿರ್ಧಾರ ಕೈಗೊಂಡಿದ್ದೇನೆ. ನನ್ನ ಈ ನಿರ್ಧಾರವನ್ನು ಪಕ್ಷದ ಕಾರ್ಯಕರ್ತರು ಅರ್ಥ ಮಾಡಿಕೊಳ್ಳುತ್ತಾರೆ ಎನ್ನುವ ವಿಶ್ವಾಸವಿದೆ. ಆದರೆ ಸ್ಪರ್ಧೆ ಅನಿವಾರ್ಯವಾದರೆ ಚುನಾವಣಾ ಕಣಕ್ಕೆ ಇಳಿಯುತ್ತೇನೆ ಎಂದು ತಿಳಿಸಿದ್ದಾರೆ.
Advertisement
Bahujan Samaj Party (BSP) Chief Mayawati: I will not contest the Lok Sabha elections. pic.twitter.com/88oGmtd6Ww
— ANI UP/Uttarakhand (@ANINewsUP) March 20, 2019
Advertisement
ಉತ್ತರ ಪ್ರದೇಶದಲ್ಲಿ ಮಾಯಾವತಿ ಅವರು ಕಾಂಗ್ರೆಸ್ ಜೊತೆಗೆ ಮೈತ್ರಿ ನಿರಾಕರಿಸಿದ್ದರು. ಹೀಗಾಗಿ ಸಮಾಜವಾದಿ ಪಕ್ಷದ ಜೊತೆಗೆ ಕೈಜೋಡಿಸಿದ್ದು, ಭರ್ಜರಿ ಪ್ರಚಾರ ಆರಂಭಿಸಿದ್ದಾರೆ. ಈಗಾಗಲೇ ಬಿಎಸ್‍ಪಿ-ಎಸ್‍ಪಿ ಸೀಟುಗಳ ಹಂಚಿಕೆ ಕೂಡ ಆಗಿದ್ದು, ಬಿಜೆಪಿಯನ್ನು ಸೋಲಿಸಲು ರಣತಂತ್ರ ರೂಪಿಸಲಾಗಿದೆ. ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್‍ಗಿಂತ ಬಿಎಸ್‍ಪಿ-ಎಸ್‍ಪಿ ಮೈತ್ರಿ ಬಲಿಷ್ಠವಾಗಿದೆ ಎಂದು ಈ ಹಿಂದೆಯೇ ಮಾಯಾವತಿ ಹೇಳಿದ್ದರು. ಅಷ್ಟೇ ಅಲ್ಲದೆ ಕಾಂಗ್ರೆಸ್ ಜೊತೆಗೆ ಮೈತ್ರಿ ಇಲ್ಲದಿದ್ದರೂ ಉತ್ತರ ಪ್ರದೇಶದ ಅಮೇಠಿ ಹಾಗೂ ರಾಯ್‍ಬರೇಲಿ ಕ್ಷೇತ್ರಗಳನ್ನು ಕಾಂಗ್ರೆಸ್‍ಗೆ ಬಿಟ್ಟುಕೊಡಲಾಗಿದೆ.