– ಅಜಂ ಖಾನ್ ಎಲ್ಲಾ ಮಹಿಳೆಯರಿಗೂ ಕ್ಷಮೆಯಾಚಿಸಬೇಕು
ನವದೆಹಲಿ: ಲೋಕಸಭಾ ಕಲಾಪದಲ್ಲಿ ಡೆಪ್ಯೂಟಿ ಸ್ಪೀಕರ್ ರಮಾದೇವಿ ಅವರ ಬಗ್ಗೆ ಕೆಟ್ಟದಾಗಿ ಕಮೆಂಟ್ ಮಾಡಿದ ಎಸ್‍ಪಿ ಸಂಸದ ಅಜಂ ಖಾನ್ ವಿರುದ್ಧ ಬಿಎಸ್‍ಪಿ ನಾಯಕಿ ಮಾಯಾವತಿ ಗುಡುಗಿದ್ದಾರೆ.
ಅಜಂ ಖಾನ್ ಹೇಳಿಕೆ ಕುರಿತು ಟ್ವೀಟ್ ಮಾಡಿರುವ ಮಾಯಾವತಿ ಅವರು, ಎಸ್‍ಪಿ ಸಂಸದರ ಹೇಳಿಕೆ ಮಹಿಳೆಯ ಗೌರವಕ್ಕೆ ಧಕ್ಕೆ ಉಂಟು ಮಾಡಿದ್ದು, ನೋವು ತಂದಿದೆ. ಆಜಂ ಖಾನ್ ಅವರ ಹೇಳಿಕೆ ಅತ್ಯಂತ ಖಂಡನೀಯ. ಅವರು ಲೋಕಸಭೆಯಲ್ಲಿ ಅಷ್ಟೇ ಅಲ್ಲದೆ ಎಲ್ಲಾ ಮಹಿಳೆಯರಲ್ಲಿಯೂ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.
Advertisement
यूपी से सपा सांसद श्री आजम खान द्वारा कल लोकसभा में पीठासीन महिला के खिलाफ जिस प्रकार की अशोभनीय भाषा का इस्तेमाल किया गया वह महिला गरिमा व सम्मान को ठेस पहुँचाने वाला है तथा अति-निन्दनीय है। इसके लिए उन्हें संसद में ही नहीं बल्कि समस्त महिलाओं से माफी मांगनी चाहिए।
— Mayawati (@Mayawati) July 26, 2019
Advertisement
ತ್ರಿವಳಿ ತಲಾಖ್ ಕುರಿತು ಲೋಕಸಭೆಯಲ್ಲಿ ಗುರುವಾರ ಗಂಭೀರ ಚರ್ಚೆ ನಡೆದಿತ್ತು. ಈ ವೇಳೆ ಸ್ಪೀಕರ್ ಸ್ಥಾನದಲ್ಲಿದ್ದ ಬಿಜೆಪಿಯ ಸಂಸದೆ ರಮಾದೇವಿ ಅವರ ಕಡೆಗೆ ನೋಡಿದ ಅಜಂ ಖಾನ್, ನೀವು ಎಂದರೆ ನನಗೆ ತುಂಬಾ ಇಷ್ಟ. ನಿಮ್ಮ ಕಣ್ಣಲ್ಲಿ ಕಣ್ಣಿಟ್ಟು ನೋಡಿ ಮಾತನಾಡಬೇಕು ಎನಿಸುತ್ತದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.
Advertisement
ಅಜಂ ಖಾನ್ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ರಮಾದೇವಿ ಅವರು, ಸಂಸದರಾಗಿ ಹೀಗೆ ಮಾತನಾಡುವುದು ನಿಮ್ಮ ಘನತೆಗೆ ಶೋಭೆ ತರುವುದಿಲ್ಲ ಎಂದು ಗುಡುಗಿದ್ದರು. ತಕ್ಷಣವೇ ಎಚ್ಚೆತ್ತುಕೊಂಡ ಅಜಂ ಖಾನ್ ಅವರು, ನೀವು ನನ್ನ ಸಹೋದರಿ ಸಮಾನ. ಆ ದೃಷ್ಟಿಯಿಂದ ಮಾತನಾಡಿದೆ ಅಷ್ಟೇ ಎಂದು ಹೇಳಿ ಜಾರಿಕೊಂಡಿದ್ದರು.
Advertisement
Bahujan Samaj Party (BSP) Chief Mayawati on Azam Khan's remark against BJP MP Rama Devi: His statement is against the dignity of women, it is hurtful. It is highly condemnable, he should not only apologize to the Lok Sabha but also to all women. (file pic) pic.twitter.com/tFGTbcqoZM
— ANI (@ANI) July 26, 2019
ಆಡಳಿತ ಪಕ್ಷದ ಸದಸ್ಯರು, ಅಜಂ ಖಾನ್ ಸದನಕ್ಕೆ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದರು. ಆದರೆ ಕ್ಷಮೆಯಾಚಿಸಲು ನಿರಾಕರಿಸಿದ ಅಜಂ ಖಾನ್, ಅಸಂಸದೀಯ ಪದವನ್ನು ನಾನು ಬಳಸಿಲ್ಲ. ಬೇಕಾದರೆ ರಾಜೀನಾಮೆ ನೀಡುತ್ತೇನೆ. ಕ್ಷಮೆ ಕೇಳುವುದಿಲ್ಲ ಎಂದು ಕಲಾಪದಿಂದ ಹೊರನಡೆದಿದ್ದರು. ಈ ವೇಳೆ ಎಸ್‍ಪಿ ನಾಯಕ ಅಖಿಲೇಶ್ ಯಾದವ್ ಅವರು, ಆಜಂ ಖಾನ್ ಮಾತು ಕವಿತೆಯಂತಿತ್ತು. ಅದರಲ್ಲೇನು ತಪ್ಪಿದೆ ಅಂತ ಸಮರ್ಥಿಸಿಕೊಂಡು ಸದನದಿಂದ ನಿರ್ಗಮಿಸಿದ್ದರು.